ಜೆಡಿಎಸ್ ಪುನಶ್ಚೇತನಕ್ಕೆ ಯತ್ನ: ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅಖಾಡಕ್ಕೆ
ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು ಈ ನಡುವಲ್ಲೇ ಕಾಂಗ್ರೆಸ್ ತನ್ನ ಪಾದಯಾತ್ರೆಯನ್ನು ಆರಂಭಿಸಿದ್ದು, ಇದರ ಜೊತೆಗೆ ಜೆಡಿಎಸ್ ಪುನಶ್ಚೇತನಕ್ಕೆ ಅಖಾಡಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರು ಕೂಡ ತಮ್ಮ ಪಾದಯಾತ್ರೆಯನ್ನು ಆರಂಭಿಸಿದ್ದಾರೆ.
Published: 01st March 2022 12:37 PM | Last Updated: 01st March 2022 01:06 PM | A+A A-

ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ.
ಮೈಸೂರು: ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು ಈ ನಡುವಲ್ಲೇ ಕಾಂಗ್ರೆಸ್ ತನ್ನ ಪಾದಯಾತ್ರೆಯನ್ನು ಆರಂಭಿಸಿದ್ದು, ಇದರ ಜೊತೆಗೆ ಜೆಡಿಎಸ್ ಪುನಶ್ಚೇತನಕ್ಕೆ ಅಖಾಡಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರು ಕೂಡ ತಮ್ಮ ಪಾದಯಾತ್ರೆಯನ್ನು ಆರಂಭಿಸಿದ್ದಾರೆ.
ಜೆಡಿಎಸ್ ಮುಖಂಡ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯನ್ನು ಆರಂಭಿಸಿದ್ದು, ನಿಖಿಲ್ ಕುಮಾರಸ್ವಾಮಿ ಹನೂರಿನಿಂದ ಎಂಎಂ ಹಿಲ್ಸ್ಗೆ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಪಾದಯಾತ್ರೆ ಆರಂಭಿಸಿದ್ದಾರೆ.
ಇದನ್ನೂ ಓದಿ: ರಾಮನಗರ- ಚನ್ನಪಟ್ಟಣ ಬಿಟ್ಟು ಎಚ್ ಡಿಕೆ ಚಾಮುಂಡೇಶ್ವರಿಗೆ ಏಕೆ ಹೋಗಬೇಕು; ನಿಖಿಲ್ ಸ್ಪರ್ಧೆ ಬಗ್ಗೆ ತಂದೆಯ ನಿರ್ಧಾರವೇ ಅಂತಿಮ!
ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರ ಜವಾಬ್ದಾರಿಯನ್ನು ಕಡಿಮೆ ಮಾಡಲು ಯುವ ನಾಯಕರು ಅಖಾಡಕ್ಕಿಳಿದಿದ್ದಾರೆಂದು ತಿಳಿದುಬಂದಿದೆ.
ಪಾದಯಾತ್ರೆ ವೇಳೆ ಪ್ರಜ್ವಲ್ ಹಾಗೂ ನಿಖಿಲ್ ಕುಮಾರಸ್ವಾಮಿಯವರು, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಾಲ್ನಡಿಗೆ ಪ್ರಯಾಣ: ಜಲಧಾರೆ ಪಾದಯಾತ್ರೆಗೆ ಸಿದ್ಧತೆ?
ಹಾನೂರು ತಾಲೂಕಿನ ತಾಳೆಬೆಟ್ಟಕ್ಕೆ ನಿಖಿಲ್ ಕುಮಾರಸ್ವಾಮಿಯವರು ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಬಳಿಕ ನಿಖಿಲ್ ಅವರು ಮಲ್ಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.