social_icon

ರಾಜ್ಯ ಬಜೆಟ್ 2022: ಬಿಜೆಪಿ ನಾಯಕರಿಂದ ಮೆಚ್ಚುಗೆ; ವಿರೋಧ ಪಕ್ಷಗಳಿಂದ ಟೀಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ಚೊಚ್ಚಲ ಬಜೆಟ್ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಆಡಳಿತ ಪಕ್ಷದ ಮುಖಂಡರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಕಾಂಗ್ರೆಸ್ ಮುಖಂಡರು ಬಜೆಟ್‌ ಬಗ್ಗೆ ಟೀಕೆ ಮಾಡಿದ್ದಾರೆ.

Published: 05th March 2022 08:21 AM  |   Last Updated: 05th March 2022 01:07 PM   |  A+A-


File photo

ಸಂಗ್ರಹ ಚಿತ್ರ

Online Desk

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ಚೊಚ್ಚಲ ಬಜೆಟ್ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಆಡಳಿತ ಪಕ್ಷದ ಮುಖಂಡರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಕಾಂಗ್ರೆಸ್ ಮುಖಂಡರು ಬಜೆಟ್‌ ಬಗ್ಗೆ ಟೀಕೆ ಮಾಡಿದ್ದಾರೆ.

ಸರ್ವ ವ್ಯಾಪಿ ಸರ್ವ ಸ್ಪರ್ಶಿ ಬಜೆಟ್: ಆರ್ ಅಶೋಕ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ ಬಜೆಟಿನಲ್ಲಿ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲ ಮಾಡಿಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಅತ್ಯುತ್ತಮ ಜನಸ್ನೇಹಿ ಬಜೆಟ್ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2022: ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ; 'ಸ್ವಾಗತಾರ್ಹ' ಎಂದ ಡಿಕೆಶಿ

ಬಜೆಟ್ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಸಚಿವ ಆರ್ ಅಶೋಕ್, ನಗರ ಹಾಗೂ ಗ್ರಾಮೀಣ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಕುಡಿಯುವ ನೀರು, ಶಿಕ್ಷಣ ಎಲ್ಲದಕ್ಕೂ ಅನುದಾನ ನೀಡಲಾಗಿದೆ” ಎಂದು ಹೇಳಿದರು.

ಎಲ್ಲ ವರ್ಗಗಳ ಹಿತಕಾಯುವ ಅತ್ಯುತ್ತಮ ಬಜೆಟ್: ಬಾಲಚಂದ್ರ ಜಾರಕಿಹೊಳಿ
ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ 2022-23ನೇ ಸಾಲಿನ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಈ ಉದ್ದೇಶಿತ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ, ಕರ್ನಾಟಕ ಹಾಲು ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರೂ. ಮತ್ತು ರಾಜ್ಯ ಸರ್ಕಾರವು ಇದಕ್ಕಾಗಿ 100 ಕೋಟಿ ರೂ.ಗಳ ಷೇರು ಬಂಡವಾಳ ಒದಗಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: ಸಮರ್ಪಕ ಬಜೆಟ್ ಮಂಡನೆಗೆ ಅವರ ಹಿಂದೆ ಇರುವವರು ಬಿಡಬೇಕಲ್ಲ: RSS ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ವ್ಯಂಗ್ಯ

2022-23ನೇ ಸಾಲಿನ ಬಜೆಟ್: ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್- ಭೈರತಿ ಬಸವರಾಜ
ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಥಮ ಭಾರಿಗೆ ಮಂಡಿಸಿದ ಚೊಚ್ಚಲ ಬಜೆಟ್ ರಾಜ್ಯದ ಎಲ್ಲರನ್ನೂ ಒಳಗೊಂಡು ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದು, ಆರ್ಥಿಕ ಶಿಸ್ತನ್ನು ಒಳಗೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದಿದೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಆಯವ್ಯಯ ಹೆಚ್ಚು ಒತ್ತು ನೀಡಿದೆ. ರೈತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರು ಸ್ವಾಭಿಮಾನದ ಜೀವನ ನಡೆಸಲು ಪೂರಕವಾದ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು.

ಇದರಿಂದಾಗಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನಾಡಿನ ಅಭಿವೃದ್ಧಿಗೂ ಪೂರಕವಾಗಲಿದೆ. ನಗರ ಪ್ರದೇಶಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು 2022-23ನೇ ಸಾಲಿನ ಬಜೆಟ್ ನಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಘೋಷಿಸಿರುವುದು ಸ್ವಾಗತಾರ್ಹ ಎಂದರು.

ಇದನ್ನೂ ಓದಿ: ದೂರದೃಷ್ಟಿ ಇಲ್ಲದ 'ಅಡ್ಡ ಕಸುಬಿ' ಬಜೆಟ್- ಸಿದ್ದರಾಮಯ್ಯ

ಜನಹಿತಕ್ಕೆ ಮಣೆ, ಅಭಿವೃದ್ಧಿಗೆ ಒತ್ತು: ಸಚಿವ ಎಂಟಿಬಿ ನಾಗರಾಜ್ ಅಭಿಮತ
ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23ನೇ ಸಾಲಿನ ಚೊಚ್ಚಲ ಬಜೆಟ್, ಜನಸ್ನೇಹಿ, ಪ್ರಗತಿಪರ ಮತ್ತು ಅಭಿವೃದ್ಧಿ ಪರ ಬಜೆಟ್ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಕೋವಿಡ್ ನಂತರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ರೂಪಿಸಿರುವ ಬಜೆಟ್ ರಾಜ್ಯದ ಪ್ರಗತಿಯ ಬಗ್ಗೆ ಹೊಸ ವಿಶ್ವಾಸವನ್ನು ಮೂಡಿಸಿದೆ. ಮುಖ್ಯಮಂತ್ರಿಗಳು ರಾಜ್ಯದ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳನ್ನು ಇರಿಸಿರುವುದನ್ನು ಬಜೆಟ್ ನಲ್ಲಿ ಕಾಣಬಹುದು. ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಲಾಗುವುದಲ್ಲದೆ; ಪ್ರಸಕ್ತ ಸಾಲಿನಲ್ಲಿ ಒಂದು ಸಾವಿರ ಕೋಟಿ ರೂಪಾಯಿಗಳ ಅನುದಾನ ಒದಗಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿಗಳು ಮಾಡಿದ್ದು, ಇದರಿಂದ ಶೀಘ್ರದಲ್ಲೇ ಯೋಜನೆ ಆರಂಭವಾಗುವ ಆಶಾಭಾವನೆ ಮೂಡಿದೆ ಎಂದು ಹೇಳಿದರು.

ಇದನ್ನೂ ಓದಿ: ಇದು ಬೆಳವಣಿಗೆ ಆಧಾರಿತ, ಸೂಕ್ಷ್ಮ ಬಜೆಟ್: ಸಿಎಂ ಬೊಮ್ಮಾಯಿ

ಪೌರ ಕಾರ್ಮಿಕರಿಗೆ ಮಾಸಿಕ ಎರಡು ಸಾವಿರ ರೂ.ಗಳ ಸಂಕಷ್ಟ ಭತ್ಯೆಯನ್ನು ಪ್ರಕಟಿಸಿರುವುದಲ್ಲದೆ, ಬಿಸಿಯೂಟ ತಯಾರಕರು ಮತ್ತು ಸಹಾಯಕರಿಗೆ ಹಾಗೂ ಗ್ರಾಮ ಸಹಾಯಕರ ಮಾಸಿಕ ಗೌರವ ಧನವನ್ನು ಹೆಚ್ಚಿಸುವ ಮೂಲಕ ಮುಖ್ಯಮಂತ್ರಿಗಳ ಅಂತಃಕರಣ ಬಡಜನರ ಕಲ್ಯಾಣಕ್ಕಾಗಿ ಮೀಡಿದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆರು ಲಕ್ಷ ‘ಬಿ’ ಖಾತೆ ಸ್ವತ್ತುಗಳನ್ನು ‘ಎ’ ಖಾತೆಗಳನ್ನಾಗಿ ಮಾರ್ಪಡಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿಗಳು ತಮ್ಮ ಬಜೆಟ್ ಪ್ರಸ್ತಾಪದಲ್ಲಿ ಮಂಡಿಸಿದ್ದು, ಇದರಿಂದ ಬೆಂಗಳೂರಿನ ಜನರ ಬಹು ದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

ಪೀಣ್ಯ ಕೈಗಾರಿಕಾ ಘಟಕಗಳ ಬೆಳವಣಿಗೆಗೆ ಇನ್ನೊಂದು ಸಣ್ಣ ಮತ್ತು ಪೂರಕವಾಗಿ ಅತಿ ಸಣ್ಣ ಕೈಗಾರಿಕಾ ಪಾರ್ಕ್ ಅಭಿವೃದ್ಧಿ ಪಡಿಸುವ ಮತ್ತು ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಸಂಸ್ಥೆಗಳು ಸ್ಥಾಪಿಸುವ ಹೊಸ ಕೈಗಾರಿಕಾ ಪ್ರದೇಶಗಳಲ್ಲಿನ ಸಣ್ಣ ನಿವೇಶನಗಳಲ್ಲಿ ಆದ್ಯತೆ ನೀಡುವ ಪ್ರಸ್ತಾಪದಿಂದ ಕೈಗಾರಿಕೆಗಳಿ ಪ್ರಗತಿಗೆ ಮತ್ತು ಉದ್ಯೋಗ ಸೃಷ್ಟಿಗೂ ನೆರವಾಗಲಿದೆ ಎಂದರು.

ಇದನ್ನೂ ಓದಿ: ದೇವಾಲಯಗಳ ಅಭಿವೃದ್ಧಿಯ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆನೆ ಬಲ ತುಂಬಿದ ಬಜೆಟ್‌: ಸಚಿವೆ ಶಶಿಕಲಾ ಜೊಲ್ಲೆ

ಅಭಿವೃದ್ದಿ ಪೂರಕ ಹಾಗೂ ಚಲನಶೀಲ ಬಜೆಟ್: ಗೃಹ ಸಚಿವ ಆರಗ ಜ್ಞಾನೇಂದ್ರ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ 2022-23 ಸಾಲಿನ ಆಯವ್ಯಯ, ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ದಿ ದೃಷ್ಟಿಕೋನ ವನ್ನು ಹೊಂದಿದ್ದು, ಪ್ರಗತಿಗೆ ಪೂರಕವಾಗಿದೆ ಎಂದಿದ್ದಾರೆ.

ಇದೊಂದು ಅಭಿವೃದ್ಧಿ ಪೂರಕ, ಚಲನಶೀಲ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಭರವಸೆ ಮೂಡಿಸುವ ಆಯವ್ಯಯ ವಾಗಿದೆ. ಮಾರಕ ಕರೋನ ಸಾಂಕ್ರಮಿಕ. ರೋಗದಿಂದ, ಕರ್ನಾಟಕವೂ ಸೇರಿದಂತೆ ಇಡೀ ವಿಶ್ವವೇ ಆರ್ಥಿಕವಾಗಿ ತತ್ತರಿಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರು, ತಮಗಿರುವ ಅಪಾರ ಆಡಳಿತ ಜ್ಞಾನ ಹಾಗೂ ಸಾಂವಿಧಾನಿಕ ಅನುಭವದ ಸ್ಪರ್ಶವನ್ನು ಆಯವ್ಯಯದಲ್ಲಿ ತೋರಿಸಿದ್ದಾರೆ ಎಂದರು.

ಅಭಿವೃದ್ಧಿಯಲ್ಲಿ ಇಡೀ ರಾಷ್ಟ್ರದಲ್ಲಿಯೇ ಮುಂಚೂಣಿ ರಾಜ್ಯ ವಾಗಿರುವ ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು, ಆರ್ಥಿಕತೆಯ ಬೆನ್ನೆಲುಬಾಗಿರುವ, ಮಾನವ ಸಂಪನ್ಮೂಲ, ಇಂಧನ, ನೀರವಾರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಹಿಂದುಳಿದ, ಪರಿಶಿಷ್ಟ ಜಾತಿ ಜನಾಂಗ ಹಾಗೂ ಹಿಂದುಳಿದ ಪ್ರದೇಶಗಳ ಅಭಿವೃದ್ದಿ ಕಾರ್ಯಗಳಿಗೆ, ಹೊಸ ಚೈತನ್ಯ ಒದಗಿಸುವ ನಿಟ್ಟಿನಲ್ಲಿ ಈ ಆಯವ್ಯಯ, ಭರವಸೆಯ ಬೆಳಕು ಎನಿಸಲಿದೆ‌ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್ 2022: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: ದಿನೇಶ್ ಗೂಳಿಗೌಡ

ಸಮರ್ಪಕ ಬಜೆಟ್ ಮಂಡನೆಗೆ ಅವರ ಹಿಂದೆ ಇರುವವರು ಬಿಡಬೇಕಲ್ಲ: ಮಾಜಿ ಸಿಎಂ ಕುಮಾರಸ್ವಾಮಿ
ಆರ್ಥಿಕ ಸಚಿವರಾಗಿ ಮೊದಲ ಬಜೆಟ್ ನ್ನ ಬೊಮ್ಮಯಿರವರು ಮಂಡನೆ ಮಾಡುತ್ತಿದ್ದಾರೆ, ಸುದೀರ್ಘ ಆಡಳಿತ ಅನುಭವ ಹೊಂದಿದ್ದಾರೆ. ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ, ನಿರೀಕ್ಷೆಯನ್ನ ಈಡೇರಿಸಲು ಸಿಎಂ ಹಿಂದೆ ಇರುವವರು ಪರ್ಮಿಷನ್ ಕೊಡ್ಬೇಕು ಅಲ್ವಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ವಿಧಾನಸೌಧದ ಬಳಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯ ಬಜೆಟ್ ಮಂಡನೆ ಇದ್ದೂ ಸಿಎಂ ಮೇಲೆ ರಾಜ್ಯದ ಜನತೆ ಭಾರಿ ನಿರೀಕ್ಷಯನ್ನಿಟ್ಟಿದ್ದಾರೆ ಆದರೆ ಪರೋಕ್ಷವಾಗಿ ಜನಪರ ಬಜೆಟ್ ಮಂಡನೆ ಮಾಡಲು ಆರ್ ಎಸ್ ಎಸ್ ನಾಯಕರು ಅವಕಾಶ ಕೊಡ್ಬೇಕು ಅಲ್ವಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಡವರ ಮನೆಗೆ ಬೆಳಕು ನೀಡುವ ಬಜೆಟ್: ಸುನೀಲ್ ಕುಮಾರ್

ತುಳಿತಕ್ಕೆ ಒಳಗಾದ ಬಡಕುಟುಂಬಗಳಿಗೆ ಯಾವ ಕಾರ್ಯಕ್ರಮ ಕೊಡ್ತಾರೆ ಅಂತ ಕಾಯ್ತಾ ಇದಿನಿ, ಅವರ ಬುಟ್ಟಿಯಲ್ಲಿ ಯಾವ ಯಾವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ನೋಡೋಣ,ಜೊತೆಗೆ  ಪಾದಯಾತ್ರೆ ಮುಗಿಸಿ ಬಂದ ಮಹಾ ನಾಯಕರು ಪಾದಯಾತ್ರೆ ಅನುಭವ ತೆಗೆದುಕೊಂಡು ಬಂದಿದ್ದಾರೆ. ನಮ್ಮ ನೀರು ನಮ್ಮ ಹಕ್ಕು ಅಂತ ಬಂದಿದ್ದಾರೆ  ದೇಹದಿಂದ ಬೆವರು ಸುರಿತು ಬಂದಿದ್ದಾರೆ ಅಲ್ವಾ ನೀರು ಉಳಿಸಿಕೊಳ್ಳಲು ದಾಖಲೆ ಸಮೇತ ಚರ್ಚೆ ಮಾಡ್ತಾರಾ ನೋಡೋಣ ಎಂದು ವಿಪಕ್ಷಗಳನ್ನ ಕುಟುಕಿದ್ದಾರೆ

ಒಟ್ಟು 26 ಅಣೆಕಟ್ಟು ಕಾಗ್ರೆಸ್ ನವರು ಕಟ್ಟಿದ್ದಾರಂತೆ ಯಾರು ಕಟ್ಟಿಲ್ವಾಂತೆ ನಿನ್ನೆ ರಾಮಲಿಂಗ ರೆಡ್ಡಿ ಹೇಳಿದ್ದನ್ನ ಕೇಳಿದ್ದೇನೆ. ದೇವೇಗೌಡ್ರು ಪ್ರಧಾನಿಯಾಗಿ 9 ಟಿ ಎಂ ಸಿ ನೀರು ಕೊಡ್ಲಿಲ್ಲ ಅಂದಿದ್ರೆ ಆಗ್ತಿತ್ತಾ ? ನಾನೇಕೆ ವಿರೋಧ ಮಾಡ್ಲಿ. ಮೇಕೆದಾಟು ಯೋಜನೆ ಗೆ ಬಿಜೆಪಿ, ಜೆಡಿಎಸ್ ನಿಂದ ವಿರೋಧ ಎಂದು ಕಾಂಗ್ರೆಸ್ ನಾಯಕರ ಆರೋಪ ಮಾಡಿದರು ಈ  ವಿಚಾರ ಕೇಂದ್ರ ಸರ್ಕಾರದ ಬಳಿ ಜೀವಂತವಾಗಿ ಉಳಿದಿರುವುದು ಕುಮಾರಸ್ವಾಮಿ ಕೊಟ್ಟಿರುವ ಡಿ ಪಿ ಆರ್ ಎಂದು ಅವರು ಹೇಳಿದರು.


Stay up to date on all the latest ರಾಜಕೀಯ news
Poll
Rajasthan Chief Minister Ashok Gehlot and Congress leader Sachin Pilot ( File Photo | PTI)

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯವು ಈ ವರ್ಷ ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಾನಿ ಮಾಡುತ್ತದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp