ಆಡಳಿತ ವಿರೋಧಿ ಅಂಶ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ: ಸಿಎಂ ಬೊಮ್ಮಾಯಿ

ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಸಮಯದಲ್ಲಿ ಆಡಳಿತ ಪಕ್ಷಗಳು ಎದುರಿಸುವ ಅಧಿಕಾರ ವಿರೋಧಿ ಅಂಶವು ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

Published: 12th March 2022 11:27 AM  |   Last Updated: 12th March 2022 01:40 PM   |  A+A-


CM bommai

ಸಿಎಂ ಬೊಮ್ಮಾಯಿ

The New Indian Express

ಬೆಂಗಳೂರು: ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಸಮಯದಲ್ಲಿ ಆಡಳಿತ ಪಕ್ಷಗಳು ಎದುರಿಸುವ ಅಧಿಕಾರ ವಿರೋಧಿ ಅಂಶವು ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿರುವ ಅವರು, "ಬಿಜೆಪಿಗೆ ಮಾತ್ರ ಮತ್ತೆ ಮತ್ತೆ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದೆ ಮತ್ತು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶಗಳಲ್ಲಿ ಅದು ಮತ್ತೊಮ್ಮೆ ಸಾಬೀತಾಗಿದೆ" ಎಂದು ಹೇಳಿದ್ದಾರೆ.

2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 'ನಮ್ಮಪ್ಪನಾಣೆಗೂ ಯಡಿಯೂರಪ್ಪ- ಕುಮಾರಸ್ವಾಮಿ ಸಿಎಂ ಆಗಲ್ಲ ಎಂದರು, ಇಬ್ಬರೂ ಆಗಿಬಿಟ್ಟರು: ಸಿದ್ದರಾಮಯ್ಯಗೆ ಸಿಎಂ  ಬೊಮ್ಮಾಯಿ ಮಾತಿನೇಟು

ಈ ವೇಳೆ ಬೊಮ್ಮಾಯಿಯವರ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಬಲಿಸಿದರು. ಮುಂದಿನ ಚುನಾವಣೆಯಲ್ಲಿ ಪಕ್ಷ 140 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಮೂಲಕ ಕಾಂಗ್ರೆಸ್ ಮತ್ತೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಬಳಿಕ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದನ್ನು ಉಲ್ಲೇಖಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಮತ್ತೆ ಅಧಿಕಾರಕ್ಕೆ ಬರುವುದು ದೊಡ್ಡ ಸಾಧನೆಯಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: 'ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಶನಿ ಎಂಬ ಪೂಜಾರಿಯವರ ಮಾತು ನೆನಪಾಗುತ್ತಿದೆ; ಶತಮಾನದ ಪಕ್ಷ, ಇತಿಹಾಸದ ಪುಟ ಸೇರುವ ಸಮಯ ಬಂದಿದೆ'

ಇದಕ್ಕೆ ಉತ್ತರಿಸಿದ ಬೊಮ್ಮಾಯಿ, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಈಗಾಗಲೇ ಅಧಿಕಾರಕ್ಕೆ ಬಂದಿದ್ದು, ಮತ್ತೆ ಅಧಿಕಾರಕ್ಕೆ ಬರುವುದು ದೊಡ್ಡ ಸಾಧನೆಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಉತ್ತರಿಸಿದ ಬೊಮ್ಮಾಯಿ, ಆಡಳಿತ ವಿರೋಧಿತನದಿಂದ ಚುನಾವಣೆಯಲ್ಲಿ ಆಡಳಿತ ಪಕ್ಷ ಸೋಲು ಕಾಣುವಂತಾಗುತ್ತದೆ. ಆದರೆ, ಬಿಜೆಪಿ ಪದೇ ಪದೇ ಅಧಿಕಾರಕ್ಕೆ ಬರುವ ಪಕ್ಷವಾಗಿದೆ. ಎರಡು-ಮೂರು ಬಾರಿಯಲ್ಲ. ಪದೇ ಪದೇ ಅಧಿಕಾರಕ್ಕೆ ಬರುತ್ತಿರುತ್ತದೆ. ಅಧಿಕಾರದಲ್ಲಿದ್ದು, ಮತ್ತೆ ಅಧಿಕಾರಕ್ಕೆ ಬರುವುದೂ ಕೂಡ ಸಾಧನೆಯೇ ಆಗಿದೆ. ಕರ್ನಾಟಕದಲ್ಲೂ ಈ ಸಾಧನೆಯನ್ನು ಮಾಡುತ್ತೇವೆ. 2023ರಲ್ಲೂ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದಿದ್ದಾರೆ.

ಕಳೆದ 70 ವರ್ಷಗಳಿಂದ ಜನರು ಸಾಕಷ್ಟು ರಾಜಕೀಯ ಪಕ್ಷಗಳನ್ನು ಜನರು ನೋಡಿದ್ದಾರೆ. ಪಕ್ಷಗಳು ಹೇಳಿದ್ದನ್ನೆಲ್ಲಾ ನಂಬುತ್ತಿದ್ದರು. ಯಾವ ಪಕ್ಷ ಏನು ಹೇಳುತ್ತದೆ ಎಂಬುದು ಮುಖ್ಯವಲ್ಲ. ಯಾರು ಹೇಳುತ್ತಿದ್ದಾರೆಂಬುದು ಮುಖ್ಯವಾಗುತ್ತದೆ. ಬಿಜೆಪಿ ಕೆಲಸವೇ ಎಲ್ಲವನ್ನೂ ಹೇಳುತ್ತದೆ ಎಂದಿದ್ದಾರೆ.


Stay up to date on all the latest ರಾಜಕೀಯ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp