ಪಂಚರಾಜ್ಯಗಳ ಚುನಾವಣೆಯಲ್ಲಿನ ಸೋಲು ಎಚ್ಚರಿಕೆ ಗಂಟೆ, ಆದರೆ ಕರ್ನಾಟಕದಲ್ಲಿ ಗೆಲ್ಲುವ ವಿಶ್ವಾಸವಿದೆ: ಸಿದ್ದರಾಮಯ್ಯ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Published: 13th March 2022 08:18 AM  |   Last Updated: 13th March 2022 08:18 AM   |  A+A-


siddaramaiah

ಸಿದ್ದರಾಮಯ್ಯ

The New Indian Express

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ,

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿನ ಸೋಲು ಹಾಗೂ ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಮಾತನಾಡಿದ್ದಾರೆ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳು ಕರ್ನಾಟಕದ ಚುನಾವಣೆಗಳ     ಮೇಲೆ ಪರಿಣಾಮ ಬೀರುತ್ತವೆ ಎಂದು ನೀವು ಭಾವಿಸುತ್ತೀರಾ?
ಒಂದು ರಾಜ್ಯದ ಚುನಾವಣೆಯ ಫಲಿತಾಂಶಗಳು ಮತ್ತೊಂದು ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ರಾಜ್ಯದಲ್ಲಿ ಹಿಂದಿನ ಚುನಾವಣೆಗಳ ಫಲಿತಾಂಶಗಳೂ ಕೂಡ ಯಾವುದೇ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದು, ಹೀಗಾಗಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್‌ನಲ್ಲಿ ನಾವು ಅಧಿಕಾರದಲ್ಲಿದ್ದೆವು. ನಾವು ಅಲ್ಲಿ ಗೆಲ್ಲಬೇಕಿತ್ತು, ಆದರೆ ನಾವು ಮಾಡಿದ ತಪ್ಪಿನಿಂದ ಸೋತಿದ್ದೇವೆ.

ಇದು ಕಾಂಗ್ರೆಸ್ ಗೆ ಎಚ್ಚರಿಕೆಯ ಸಂಕೇತವಂತೆ?
ಇದು ಎಚ್ಚರಿಕೆಯಂತಿದೆ ಎಂಬುದನ್ನು ನಾನು ಒಪ್ಪುತ್ತೇನೆ. ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನಡೆಯಬೇಕು. ನಾವು ಅದನ್ನು ಮಾಡುತ್ತೇವೆ.

ಪಂಚ ರಾಜ್ಯಗಳ ಚುನಾವಣೆಯ ನಂತರ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಮರುಪರಿಶೀಲಿಸಬೇಕಾಗಿದೆ ಎಂದು ನೀವು ಭಾವಿಸುತ್ತೀರಾ?
ಕರ್ನಾಟಕ ಚುನಾವಣೆಗೆ ನಮ್ಮ ಕಾರ್ಯತಂತ್ರಗಳ ಕುರಿತು ನಾವು ಇನ್ನೂ ಚರ್ಚಿಸಿಲ್ಲ. ಎಲ್ಲರೂ ಒಟ್ಟಿಗೆ ಕುಳಿತು ಚರ್ಚಿಸುತ್ತೇವೆ. ಆದರೆ, ರಾಜ್ಯದ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಯ ಫಲಿತಾಂಶಗಳನ್ನು ನೋಡಿದರೆ. ನಾವು ನಂಬರ್ ಒನ್ ಮತ್ತು ಬಿಜೆಪಿ ಎರಡನೇ ಸ್ಥಾನದಲ್ಲಿರುವುದು ತಿಳಿದುಬರುತ್ತಿದೆ. ಜನರ ನಾಡಿಮಿಡಿತ ನಮಗೆ ತಿಳಿದಿದೆ, ರಾಜ್ಯದ ಜನತೆ ಬಿಜೆಪಿಯನ್ನು ತಿರಸ್ಕರಿಸಲಿದೆ. 2023 ರ ಚುನಾವಣೆಯ ಬಳಿಕ ನಮಗೆ ಅವಕಾಶ ನೀಡುತ್ತಾರೆಂಬ ವಿಶ್ವಾಸವಿದೆ.

ಬಿಜೆಪಿಯ ಕೇಂದ್ರ ನಾಯಕತ್ವವು ಪ್ರಬಲವಾಗಿದೆ ಮತ್ತು ಪಕ್ಷವು ಆಡಳಿತ ವಿರೋಧಿತನವನ್ನು ಜಯಿಸುತ್ತದೆ ಎಂಬುದನ್ನು ಈ ಫಲಿತಾಂಶಗಳು ಮತ್ತೊಮ್ಮೆ ಸಾಬೀತುಪಡಿಸಿವೆ. ಈ ಬಗ್ಗೆ ನಿಮ್ಮ ಅಭಿಪ್ರಾಯ?
ನಮ್ಮ ಬಲಿಷ್ಠ ನಾಯಕತ್ವದಿಂದಾಗಿ ಮನಮೋಹನ್ ಸಿಂಗ್ ಎರಡು ಬಾರಿ ಪ್ರಧಾನಿಯಾದರು. ಆಗ ಪಕ್ಷದ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರೇ ಈಗ ನಮ್ಮ ಪಕ್ಷದ ಅಧ್ಯಕ್ಷರೂ ಆಗಿದ್ದಾರೆ. ಚುನಾವಣೆ ಗೆಲ್ಲುವುದು ಮತ್ತು ಸೋಲುವುದು ಪ್ರಜಾಪ್ರಭುತ್ವದ ಭಾಗ. ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಪ್ರಬಲ ನಾಯಕರಲ್ಲ ಎಂದು ನೀವು ಹೇಳುತ್ತೀರಾ? ಅಂದಿನ ಚುನಾವಣೆಯಲ್ಲಿ ಜನಸಂಘ ಮತ್ತು ಬಿಜೆಪಿ ಏಕೆ ಸೋತಿದ್ದವು?

2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಎಷ್ಟಿದೆ? ವಿಧಾನಸಭೆ ಅಧಿವೇಶನ ಮುಗಿದ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುತ್ತೀರಾ?
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ನಾವು ಜಾರಿಗೆ ತಂದಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಸ್ಮರಿಸಿಕೊಂಡು ಜನರು ನಮಗೆ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ. ಜನರ ಮುಂದೆ ಹೋಗೋಣ. ಮುಂದಿನ ಭವಿಷ್ಯವನ್ನು ಅವರೇ ನಿರ್ಧರಿಸುತ್ತಾರೆ. ಅಧಿವೇಶನ ಮುಗಿದ ನಂತರ ಜನರ ಮುಂದೆ ಹೋಗುತ್ತೇವೆ.

ಬಿಜೆಪಿ ಕೇಂದ್ರ ನಾಯಕತ್ವದ ಬಲವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಎದುರಿಸಬೇಕಾಗಿದೆ...
ಬಿಜೆಪಿ ಏನು ಬೇಕಾದರೂ ಮಾಡಲಿ. ಆದರೆ ಅಂತಿಮವಾಗಿ ಜನರೇ ನಿರ್ಧರಿಸುತ್ತಾರೆ. ನಾವು ಕರ್ನಾಟಕದಲ್ಲಿ ಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸ ಹೊಂದಿದ್ದೇವೆ. ಎಎಪಿ ದೆಹಲಿಯಲ್ಲಿ ಮತ್ತು ಈಗ ಪಂಜಾಬ್‌ನಲ್ಲಿ ಗೆದ್ದಿದೆ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಏನಾಯಿತು ಎಂಬುದು ನಿಮಗೆ ತಿಳಿದಿದೆ.

ಮೇಕೆದಾಟು ಯೋಜನೆಯನ್ನು ಕರ್ನಾಟಕ ಮತ್ತು ತಮಿಳುನಾಡು ಚರ್ಚಿಸಿ ಪರಿಹರಿಸಬೇಕು ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇತ್ತೀಚೆಗೆ ಹೇಳಿದ್ದಾರೆ. ಈ ಬಗ್ಗೆ ನಿಮ್ಮ ಬಳಿ ಮುಂದಿರುವ ದಾರಿ ಯಾವುದು?
ಅನುಮತಿ ನೀಡುವುದಿಲ್ಲ ಮತ್ತು ರಾಜ್ಯಗಳ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಸಚಿವರಾಗಿ ಇಂತಹ ಹೇಳಿಕೆ ನೀಡಬಾರದಿತ್ತು. ಯೋಜನೆಯಲ್ಲಿ ಯಾವುದೇ ವಿವಾದವಿಲ್ಲ. ಸುಪ್ರೀಂ ಕೋರ್ಟ್, ಫೆಬ್ರವರಿ 16, 2018 ರಂದು ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣವನ್ನು ನಿರ್ಧರಿಸಿತು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಾಮಾನ್ಯ ವರ್ಷದಲ್ಲಿ ತಮಿಳುನಾಡಿನ 177.75 ಟಿಎಂಸಿ ಅಡಿ ಪಾಲಿನ ನೀರನ್ನು ಬಿಡುಗಡೆ ಮಾಡಿದ ನಂತರ ನಮ್ಮ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ನಾವು ಜಲಾಶಯವನ್ನು ನಿರ್ಮಿಸಲು ಬಯಸುತ್ತಿದ್ದೇವೆ. ಯೋಜನೆಯನ್ನು ಪ್ರಶ್ನಿಸಲು ಅವರು (ತಮಿಳುನಾಡು) ಯಾರು? ಸುಪ್ರೀಂಕೋರ್ಟ್ ನಿರ್ಧರಿಸಿದಂತೆ ಅವರು 177.75 ಟಿಎಂಸಿ ಅಡಿ ಕೇಳಲು ಮಾತ್ರ ಅರ್ಹರಾಗಿದ್ದಾರೆ. ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಬೇಕು. ರಾಜಕೀಯ ಕಾರಣಗಳಿಗಾಗಿ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆಂದು ಹೇಳಿದ್ದಾರೆ.


Stay up to date on all the latest ರಾಜಕೀಯ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp