
ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಮತ್ತು ಸಾಂಸ್ಥಿಕ ಚುನಾವಣೆ ನಡೆಸಲು ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪಕ್ಷವನ್ನು ಬಲಪಡಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗಿದೆ. ಬಿಜೆಪಿ ಮತ್ತು ಅದರ ಸಿದ್ಧಾಂತದ ವಿರುದ್ಧ ನಾವು ಹೋರಾಡುತ್ತೇವೆ, ಮುಂದಿನ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಹೊಸದಿಲ್ಲಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಪಕ್ಷವನ್ನು ಬಲಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ. ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಕೇಂದ್ರ ನಾಯಕತ್ವದ ನಿರ್ಧಾರಗಳನ್ನು ಕೆಪಿಸಿಸಿ ಮತ್ತು ತಾಲ್ಲೂಕು ಮತ್ತು ಬ್ಲಾಕ್ ಮಟ್ಟದ ಘಟಕಗಳು ಕಾರ್ಯಗತಗೊಳಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು: ಡಿ ಕೆ ಶಿವಕುಮಾರ್
ಪಕ್ಷವು ಪುನಶ್ಚೇತನಕ್ಕೆ ಮುಂದಾಗಿದ್ದು, ಆಗಸ್ಟ್ನಲ್ಲಿ ಸಾಂಸ್ಥಿಕ ಚುನಾವಣೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಲ್ಲಿಯವರೆಗೆ ರಾಜ್ಯ ಘಟಕವನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಪದಾಧಿಕಾರಿಗಳು ಮತ್ತು ಸಾಂಸ್ಥಿಕ ಸ್ಥಾನಗಳ ನಿರೀಕ್ಷಿತರ ಪಟ್ಟಿಯೊಂದಿಗೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.