ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಡಿಕೆಶಿ, ಸಿದ್ದರಾಮಯ್ಯ ಅವರೇ ಉಸಿರುಗಟ್ಟಿಸಿ ಮುಗಿಸಲಿದ್ದಾರೆ: ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದ್ದಾರೆ.

Published: 19th March 2022 12:01 PM  |   Last Updated: 19th March 2022 12:24 PM   |  A+A-


Shobha Karandlaje

ಶೋಭಾ ಕರಂದ್ಲಾಜೆ

The New Indian Express

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟ್ ಬ್ಯಾಂಕ್ ರಾಜಕಾರಣದಿಂದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಮುಳುಗುತ್ತಿದ್ದು, ಇಷ್ಟಾದರೂ ಪಕ್ಷದ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿಲ್ಲ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ. ಸಿದ್ದರಾಮಯ್ಯ ಸ್ವತಃ ವಕೀಲರು, ಅವರೇ ಹೈಕೋರ್ಟ್ ತೀರ್ಪನ್ನು ವಿರೋಧಿಸುತ್ತಾರೆ ಎಂದರೆ ಅವರ ಓಟ್ ಬ್ಯಾಂಕ್ ಮಾನಸಿಕ ಜನರಿಗೆ ಅರ್ಥವಾಗುತ್ತದೆ. ಕಾಂಗ್ರೆಸ್ ಇಂತಹ ರಾಜಕೀಯ ಮಾಡಿ ದೇಶವನ್ನು ಅಧೋಗತಿಗೆ ತಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಎಲ್ಲಿದೆಯೆಂದು ಟಾರ್ಚ್ ಹಾಕಿ ಹುಡುಕುವ ಪರಿಸ್ಥಿತಿ ಇದೆ ಎಂದು ಟೀಕಿಸಿದರು.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆಯಲ್ಲಿನ ಸೋಲು ಎಚ್ಚರಿಕೆ ಗಂಟೆ, ಆದರೆ ಕರ್ನಾಟಕದಲ್ಲಿ ಗೆಲ್ಲುವ ವಿಶ್ವಾಸವಿದೆ: ಸಿದ್ದರಾಮಯ್ಯ

ದೇಶದ ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆದರೆ, ಕೆಲವರು ಕಾನೂನುಗಳಿಂತ ಮೇಲು ಎಂಬ ದುರಂಕಾರ ತೋರುತ್ತಿದ್ದು, ಅವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು, ಎಲ್ಲಾ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆ ದಯವಿಟ್ಟು ಶಾಲೆಗೆ ಬನ್ನಿ. ಅಲ್ಲಿನ ಪ್ರಾಂಶುಪಾಲರು ಶಿಕ್ಷಕರು ನಿಮ್ಮ ರಕ್ಷಣೆ ಮಾಡುತ್ತಾರೆ. ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ಪರೀಕ್ಷೆ ಬರೆಯಿರಿ. ಚೆನ್ನಾಗಿ ಓದಿ ಉದ್ಯೋಗ ಪಡೆಯಿರಿ. ಹಿಂದೂ ಮಾತ್ರವಲ್ಲ ಮುಸ್ಲಿಂ ಹೆಣ್ಣುಮಕ್ಕಳು ಕೂಡ ಸ್ವಂತ ಕಾಲ ಮೇಲೆ ನಿಲ್ಲಬೇಕು.

ಕೈಗೆ ದುಡ್ಡು ಬಂದರೆ ಆಗ ಮಹಿಳೆಯರಿಗೆ ಧ್ವನಿ ಬರುತ್ತದೆ. ಎಲ್ಲಾ ಧರ್ಮದವರಿಗೂ  ಇದು ಅನ್ವಯವಾಗುತ್ತದೆ. ನಿಮ್ಮ ಜೀವನದಲ್ಲಿ ಕಷ್ಟ ಬಂದಾಗ ಯಾವುದೇ ಸಂಘಟನೆಗಳು ಬರುವುದಿಲ್ಲ. ಈಗ ಯಾರದೋ ಪಿತೂರಿಗೆ ಬಲಿಯಾಗಬೇಕಿ ಎಂದು ಮನವಿ ಮಾಡಿಕೊಂಡರು.


Stay up to date on all the latest ರಾಜಕೀಯ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp