'ಗುಜರಾತ್ ಹತ್ಯಾಕಾಂಡದ ಸಿನಿಮಾ ಬಂದರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ'

ಗುಜರಾತ್ ಹತ್ಯಾಕಾಂಡದ ಸಿನಿಮಾ ಮಾಡಿದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ ಎಂದು ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವ್ಯಂಗ್ಯವಾಡಿದ್ದಾರೆ

Published: 21st March 2022 09:28 AM  |   Last Updated: 21st March 2022 01:37 PM   |  A+A-


Siddaramaiah

ಸಿದ್ದರಾಮಯ್ಯ

Online Desk

ಮಂಗಳೂರು: ಗುಜರಾತ್ ಹತ್ಯಾಕಾಂಡದ ಸಿನಿಮಾ ಮಾಡಿದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ ಎಂದು ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಬಂದಿರೋದು ಎಲ್ಲವೂ ಸುಳ್ಳು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಗುಜರಾತ್‍ನಲ್ಲಿ ಮುಸಲ್ಮಾನರು ಮಾಡಿದ ಅತ್ಯಾಚಾರವನ್ನು ಯಾರು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯ ಬೇಕಾದರೆ ಒಂದು ಸಲ ಹೋಗಿ ಬರಲಿ, 56 ಜನರನ್ನು ರೈಲಿನಲ್ಲಿ ಬೆಂಕಿ ಹಾಕಿ ಕೊಂದಿದ್ದರು. ಅವರ ಮನೆಗೆ ಹೋಗಿ ಕುಟುಂಬದ ದುಃಖ ಏನು ಎಂದು ಕೇಳಿದಾಗ ಗೊತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಸ್ತೆ ಮಧ್ಯೆ ದನದ ಮಾಂಸ ತಿನ್ನುತ್ತೇವೆ ಎನ್ನುವ ಸಿದ್ದರಾಮಯ್ಯ ಇವತ್ತು ಬದುಕಿರುವುದು ಅವರ ತಾಯಿ ಹಾಗೂ ಹೆಂಡತಿ ಬೆಳಗ್ಗೆಯಿಂದ ರಾತ್ರಿವರೆಗೆ ದೇವರ ಪೂಜೆ ಮಾಡಿರುವುದರಿಂದ ಅನ್ನೋದು ಅವರಿಗೆ ಗೊತ್ತಿರಲಿ.

ಇದನ್ನೂ ಓದಿ: ಸಿಎಂ ಆಗುವ ಆಕಾಂಕ್ಷೆ ಹೊಂದಿರುವುದು ತಪ್ಪಲ್ಲ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯನವರ ಮನೆಯಲ್ಲಿ ಪೂಜೆ ಮಾಡುತ್ತಾರೆ ಎಂದು ಅವರ ಹೆಂಡತಿ ಮತ್ತು ತಾಯಿಯನ್ನು ಮನೆಯಿಂದ ಹೊರಗೆ ಹಾಕ್ತಾರ, ಅವರ ಪುಣ್ಯದ ಫಲದಿಂದ ಸಿದ್ದರಾಮಯ್ಯ ಬದುಕಿದ್ದಾರೆ ಅನ್ನೋದು ಅವರಿಗೆ ಗೊತ್ತಿರಬೇಕು. ಹಿಂದೂ ಸಮಾಜವನ್ನು ಹೀಯಾಳಿಸುವ ಕೆಲಸ ಅವರು ಮಾಡಬಾರದು ಎಂದು ಕಿವಿಮಾತು ಹೇಳಿದರು.


Stay up to date on all the latest ರಾಜಕೀಯ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • nagarathna Sreenivas

    good advise
    8 months ago reply
flipboard facebook twitter whatsapp