ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆ

ಇತ್ತೀಚಿಗೆ ನಡೆದ ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ನಂತರ ಏಪ್ರಿಲ್ 1 ರಂದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ...

Published: 26th March 2022 08:35 AM  |   Last Updated: 26th March 2022 08:35 AM   |  A+A-


amit shah

ಅಮಿತ್ ಶಾ

The New Indian Express

ಬೆಂಗಳೂರು: ಇತ್ತೀಚಿಗೆ ನಡೆದ ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ನಂತರ ಏಪ್ರಿಲ್ 1 ರಂದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ಅವರು ರಾಜ್ಯದಲ್ಲಿ ಕೇಸರಿ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಅಲ್ಲದೆ ರಾಜ್ಯದ ಪ್ರಮುಖ ಲಿಂಗಾಯತ ಧಾರ್ಮಿಕ ಸಂಸ್ಥೆಯಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ 116ನೇ ಜಯಂತಿಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಇದೇ ವೇಳೆ ಕರ್ನಾಟಕದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ದೇಶದ ಮೊದಲ ಸಹಕಾರ ಸಚಿವ ಅಮಿ ಶಾ ಅವರು ಭಾಗವಹಿಸುವ ಸಾಧ್ಯತೆ ಇದೆ. 

ಇದನ್ನು ಓದಿ: ಜಮ್ಮು-ಕಾಶ್ಮೀರದ ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ಅಮಿತ್ ಶಾ: ಉಗ್ರರ ವಿರುದ್ಧ ಪೂರ್ವಭಾವಿ ಕಾರ್ಯಾಚರಣೆಗೆ ಕರೆ!

ಅಮಿತ್ ಶಾ ಅವರ ರಾಜ್ಯ ಭೇಟಿ ಈಗಾಗಲೇ ಬಿಜೆಪಿ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆಗೆ ಮತ್ತು ನಿಗಮ ಮಂಡಳಿ ನೇಮಕ ಪಟ್ಟಿಗೆ ಒಪ್ಪಿಗೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ಬೊಮ್ಮಾಯಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಮುಂದಿನ ವಿಧಾನಸಭೆ ಚುನಾವಣೆಯನ್ನು ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಈಗ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಗೆದ್ದ ನಂತರ ರಾಜ್ಯದಲ್ಲೂ ಅದೇ ರೀತಿಯ ತಂತ್ರ ರೂಪಿಸಬಹುದು ಎನ್ನಲಾಗಿದೆ.


Stay up to date on all the latest ರಾಜಕೀಯ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp