ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿ
ದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Published: 28th March 2022 09:14 PM | Last Updated: 29th March 2022 01:01 PM | A+A A-

ಎಂಬಿ ಪಾಟೀಲ್ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರು
ಬೆಂಗಳೂರು: ದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಜಿ ಸಚಿವ ಎಂ.ಬಿ. ಪಾಟೀಲ್ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರದ್ದು ನಾವು ಹಿಂದೂಗಳು, ನಾವು ಮುಂದೆ ಎಂಬ ನೀತಿ. ಆದರೆ, ನಮ್ಮದು ಹಿಂದೂ, ಮುಸಲ್ಮಾನರು, ಸಿಖ್ಖರು, ಕ್ರೈಸ್ತರು, ಒಕ್ಕಲಿಗರು, ಲಿಂಗಾಯಿತರು, ಪರಿಶಿಷ್ಟರು, ಹಿಂದುಳಿದವರು ಎಲ್ಲರೂ ಒಂದು ಎಂಬ ನೀತಿ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ ಎಂದರು.
ರಾಜ್ಯದಲ್ಲಿ ನಡೆದ ವಿವಿಧ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿ ಸರ್ಕಾರ, ಜಾತಿ, ಧರ್ಮದ ಆಧಾರದ ಮೇಲೆ ಸಮಾಜ ಒಡೆಯುವ ಪ್ರಯತ್ನ ನಡೆಸುತ್ತಿದೆ ಎಂದು ಡಿಕೆ ಶಿವ ಕುಮಾರ್ ಆರೋಪಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar, ರಾಜ್ಯಸಭಾ ವಿಪಕ್ಷನಾಯಕರಾದ @kharge, ವಿಧಾನಸಭಾ ವಿಪಕ್ಷನಾಯಕರಾದ @siddaramaiah ಅವರ ಸಮ್ಮುಖದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವರಾದ @MBPatil ಅವರು ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪದಗ್ರಹಣ ಮಾಡಿದರು. pic.twitter.com/ygyTZu4ADV
— Karnataka Congress (@INCKarnataka) March 28, 2022