ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆದರೆ ಎದುರಿಸಲು ಕಾಂಗ್ರೆಸ್ ಸಿದ್ಧ: ಡಿ ಕೆ ಶಿವಕುಮಾರ್

ರಾಜ್ಯದಲ್ಲಿ ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ನಡೆದರೆ ಮತದಾರರನ್ನು ಎದುರಿಸಲು ತಮ್ಮ ಪಕ್ಷ ಸಿದ್ಧವಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

Published: 29th March 2022 06:10 PM  |   Last Updated: 30th March 2022 12:58 PM   |  A+A-


Dk Shivakumar

ಡಿ.ಕೆ ಶಿವಕುಮಾರ್

PTI

ಬೆಂಗಳೂರು: ರಾಜ್ಯದಲ್ಲಿ ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ನಡೆದರೆ ಮತದಾರರನ್ನು ಎದುರಿಸಲು ತಮ್ಮ ಪಕ್ಷ ಸಿದ್ಧವಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ನವೆಂಬರ್ 27 ರಂದು ಚುನಾವಣೆ ಘೋಷಣೆ ಮಾಡಬಹುದು ಎಂದು ಸಂಭವನೀಯ ದಿನಾಂಕವನ್ನೂ ಉಲ್ಲೇಖಿಸಿದ್ದಾರೆ.

ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ವಾರದ ಕೊನೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ತಯಾರಿ ಮತ್ತು ಪದಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರು(ಚುನಾವಣಾ ಆಯೋಗ) ಬಯಸಿದಾಗ ಅದನ್ನು(ಚುನಾವಣೆ ಘೋಷಿಸಲಿ) ಮಾಡಲಿ... ನಾಳೆಯೇ, ಈ ತಿಂಗಳು, ನವೆಂಬರ್ 27 ಅಥವಾ ಮುಂದಿನ ಮಾರ್ಚ್ ನಲ್ಲಿ ಚುನಾವಣೆ ಘೋಷಿಸಲಿ. ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದಿದ್ದಾರೆ.

ನವೆಂಬರ್ 27 ಅನ್ನು ಚುನಾವಣೆ ಘೋಷಣೆಯ ದಿನಾಂಕ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿರುವ ಬಗ್ಗೆ ಕೇಳಿದಾಗ, "ನೀವು(ವರದಿಗಾರರು) ಮಾಹಿತಿ ಪಡೆಯುವಂತೆಯೇ ನಮಗೂ ಕೆಲವು ಮಾಹಿತಿಗಳು ಸಿಗುತ್ತವೆ" ಎಂದು ಶಿವಕುಮಾರ್ ಹೇಳಿದರು.

ಇದನ್ನು ಓದಿ: ರಾಜಕೀಯ ಜುಗಲ್ಬಂದಿ: ಮೊದಲು ರಾಹುಲ್ ಗಾಂಧಿ, ನಂತರ ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿ

ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ವಿವರಗಳನ್ನು ಹಂಚಿಕೊಂಡ ಶಿವಕುಮಾರ್ ಅವರು, ಮಾರ್ಚ್ 31 ರಂದು ಕರ್ನಾಟಕಕ್ಕೆ ಬರುತ್ತಿದ್ದು, ತುಮಕೂರು ಜಿಲ್ಲೆಯ ಪ್ರಮುಖ ಲಿಂಗಾಯತ ಮಠವಾದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮ ವಾರ್ಷಿಕೋತ್ಸವದಂದು ಅವರ ಗದ್ದುಗೆಗೆ ನಮನ ಸಲ್ಲಿಸಲಿದ್ದಾರೆ ಎಂದರು.

ಅಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ, ನೇರವಾಗಿ ಮಠಕ್ಕೆ ಭೇಟಿ ನೀಡಿ ನಗರಕ್ಕೆ ವಾಪಸಾಗಲಿದ್ದಾರೆ. ಬಳಿಕ ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೆ ಶಾಸಕರು, ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು ಮತ್ತು ಪದಾಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಕಾಂಗ್ರೆಸ್‌ನ ವಿಸ್ತೃತ ಕಾರ್ಯಕಾರಿ ಸಮಿತಿಯನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.


Stay up to date on all the latest ರಾಜಕೀಯ news
Poll
CM Basavaraja Bommai is press meet

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕಾಲ ಸನ್ನಿಹಿತ ಎಂಬ ಭಾವನೆ ಇದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp