ಲೋಕಸಭೆ ಚುನಾವಣೆಗೆ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಸುಮಲತಾಗೆ ಎಚ್ ಡಿ ಕೆ ಟಾಂಗ್
ಮುಂದಿನ ಬಾರಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
Published: 31st March 2022 02:06 PM | Last Updated: 31st March 2022 02:12 PM | A+A A-

ಎಚ್.ಡಿ ಕುಮಾರಸ್ವಾಮಿ
ರಾಮನಗರ: ಮುಂದಿನ ಬಾರಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತಾನಾಡಿದ ಎಚ್ ಡಿ ಕುಮಾರಸ್ವಾಮಿ ಸಂಸದೆ ಸುಮಲತಾ ಗೆ ಟಾಂಗ್ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಇವತ್ತಿನ ಹೇಳಿಕೆಗಳನ್ನು ನೋಡಿದಾಗ ನನ್ನ ಮನಸ್ಸಿಗೆ ಬಂದಿದೆ . ಅವತ್ತು ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಒಟ್ಟುಗೂಡಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.
ಇದನ್ನೂ ಓದಿ: ಅನುಕಂಪ ಗಿಟ್ಟಿಸುವ ತಂತ್ರಗಳು ಯಾವಾಗಲೂ ಫಲ ಕೊಡುವುದಿಲ್ಲ: ಸುಮಲತಾ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
ಮಂಡ್ಯ ಅಭಿವೃದ್ಧಿ ವಿಚಾರವಾಗಿ ಕೆಲ ದಿನಗಳ ಹಿಂದೆ ಸಂಸದೆ ಸುಮಲತಾ ಅಂಬರೀಷ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ಪರಸ್ಪರ ವಾಗ್ದಾಳಿ ನಡೆದಿತ್ತು. ಸದಾ ಅನುಕಂಪ ಗಿಟ್ಟಿಸಲು ಸಾಧ್ಯವಿಲ್ಲಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದರು.