ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ, ಸಂಘಟನೆ ನಿಷೇಧಿಸಿ: ಎಚ್ ಡಿ ಕುಮಾರಸ್ವಾಮಿ ಆಕ್ರೋಶ

ಬೆಳಗಾವಿ ವಿಚಾರವಾಗಿ ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದು, ಕೂಡಲೇ ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Published: 02nd May 2022 04:16 PM  |   Last Updated: 02nd May 2022 05:15 PM   |  A+A-


Hd kumaraswamy

ಎಚ್.ಡಿ ಕುಮಾರಸ್ವಾಮಿ

Online Desk

ಬೆಂಗಳೂರು: ಬೆಳಗಾವಿ ವಿಚಾರವಾಗಿ ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದು, ಕೂಡಲೇ ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಸಂಘಟನೆಯ ಕಾರ್ಯಕರ್ತನೊಬ್ಬ ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಎಂಇಎಸ್ ಹುಡುಗನೊಬ್ಬ ಫೇಸ್‌ಬುಕ್‌ನಲ್ಲಿ ರಾಜ್ಯವನ್ನು ಒಡೆಯುವ ಸಂದೇಶ ಪೋಸ್ಟ್‌ ಹಾಕಿದ್ದು, ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೂ ಕನ್ನಡ ಭಾಷಿಕರಿದ್ದಾರೆ; ಚೀನಾ ಮನಃಸ್ಥಿತಿಯಿಂದ ಅಜಿತ್‌ ಪವಾರ್‌ ಹೊರಬರಲಿ: ಹೆಚ್ ಡಿ ಕುಮಾರಸ್ವಾಮಿ ತಿರುಗೇಟು

”ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ” ಎಂದು ಉದ್ರೇಕಕಾರಿ ಬರಹ ಬರೆದ ಶುಭಂ ಶೆಳಕೆ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಬೇಕು, ಬಂಧಿಸಿ ರಾಜ್ಯದಿಂದ ಹೊರಹಾಕಬೇಕು. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗಲೇ ರಾತ್ರೋರಾತ್ರಿ ʼಭಯೋತ್ಪಾದಕ ದಾಳಿʼ ನಡೆಸಿ ಹಿಂಸಾಕಾಂಡ ಸೃಷ್ಟಿಸಿದ್ದ, ನಮ್ಮ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಎಂಇಎಸ್ ಕಿರಾತಕರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ಮೃದುದೋರಣೆ ತಾಳಿದೆ ಎನ್ನುವುದು ನನ್ನ ನೇರ ಆರೋಪ.

ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ನಿಷೇಧಿಸಿ ಎಂದು ಇಡೀ ಕರ್ನಾಟಕವೇ ಒಕ್ಕೊರಲಿನಿಂದ ಆಗ್ರಹ ಮಾಡಿತ್ತು. ಬಿಜೆಪಿ ಸರ್ಕಾರ ಅಸಡ್ಡೆ ತೋರಿದ ಪರಿಣಾಮ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಭಾಷೆ-ಭಾಷೆಗಳ ಜನರ ನಡುವೆ ಬೆಂಕಿ ಹಚ್ಚುವ ಇವರು ಭಯೋತ್ಪಾದಕರು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿ

ಮಹಾರಾಷ್ಟ್ರ ದಿನದ ನೆಪದಲ್ಲಿ ಎಂಇಎಸ್ ಪುಂಡರು ನಾಡದ್ರೋಹ ಎಸಗಿದ್ದಾರೆ. ಕರ್ನಾಟಕದಲ್ಲೇ ಇದ್ದು ಕನ್ನಡ ನೆಲದ ವಿರುದ್ಧ ವಿಧ್ವಂಸಕ ಕೃತ್ಯ ಎಸಗಿರುವ ಶುಭಂ ಶೆಳಕೆ ಎಂಬ ಧೂರ್ತನು ಫೇಸ್‌ಬುಕ್‌ನಲ್ಲಿ ರಾಜ್ಯವನ್ನು ಒಡೆಯುವ ಸಂದೇಶ ಪೋಸ್ಟ್‌ ಮಾಡಿದ್ದಾನೆ. ವಿಡಿಯೋ ಮೂಲಕ ಕನ್ನಡಿಗರನ್ನು ಕೆಣಕಿದ್ದಾನೆ. ಕರ್ನಾಟಕದ ಭೂಪಟವನ್ನು ತಿರುಚಿ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ನಾಡದ್ರೋಹಿ ಗ್ರಾಫಿಕ್ ಮಾಡಿ ಅದನ್ನು ಪೋಸ್ಟ್‌ ಮಾಡಿರುವ ಶೆಳಕೆಗೆ ಚಳಿ ಬಿಡಿಸಬೇಕಿದೆ ಎಂದು ಕಿಡಿಕಾರಿದ್ದಾರೆ.

”ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ” ಎಂದು ಉದ್ರೇಕಕಾರಿ ಬರಹ ಬರೆದ ಅವನ ವಿರುದ್ಧ ಭಯೋತ್ಪಾದಕ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು. ಬೆಳಗಾವಿ ಗಲಾಟೆಯಲ್ಲಿ ಜೈಲು ಸೇರಿದ್ದ ಶುಭಂ ಶೆಳಕೆ, ಈಗ ರಾಜಾರೋಷವಾಗಿ ಓಡಾಡಿಕೊಂಡಿದ್ದಾನೆ ಎಂದರೆ ಏನರ್ಥ? ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರ ಇದೆಯಾ? ಅಥವಾ ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ? ತಲೆಯ ಮೇಲೆ ಕೇಸರಿ ಪೇಟ, ಭುಜದ ಮೇಲೆ ಕೇಸರಿಶಾಲು ಧರಿಸಿ ಪೋಸು ಕೊಡುವ ಎಂಇಎಸ್ ಪುಂಡರ ಮೇಲೆ ಪ್ರಕರಣ ದಾಖಲಿಸಲು ಬಿಜೆಪಿ ಸರ್ಕಾರದ ಮನಸ್ಸು ಒಪ್ಪುತ್ತಿಲ್ಲವಾ? ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ: ಹೆಚ್‌ಡಿಕೆ ಭರವಸೆ

ಬಿಜೆಪಿ ಸರ್ಕಾರಕ್ಕೆ ಇರುವುದು ಒಂದೇ ಆಯ್ಕೆ. ಎಂಇಎಸ್ ಅನ್ನು ಕೂಡಲೇ ನಿಷೇಧಿಸಬೇಕು ಹಾಗೂ ಕಿಡಿಗೇಡಿ ಶೆಳಕೆಯನ್ನು ಬಂಧಿಸಿ ರಾಜ್ಯದಿಂದ ಹೊರಹಾಕಬೇಕು. ಇಲ್ಲವಾದರೆ ʼಬಿಜೆಪಿಯನ್ನು ಮಹಾರಾಷ್ಟ್ರ ಏಕೀಕರಣ ಸಮಿತಿಯ ಬಾಲʼ ಎನ್ನದೇ ವಿಧಿ ಇಲ್ಲ. ʼರಾಜ್ಯವಿರೋಧಿ ರಾಷ್ಟ್ರೀಯವಾದʼವನ್ನು ಕನ್ನಡಿಗರು ಎಂದೂ ಸಹಿಸುವುದಿಲ್ಲ ಎನ್ನುವುದನ್ನು ಬಿಜೆಪಿ ನೆನಪಿನಲ್ಲಿ ಇಟ್ಟುಕೊಂಡರೆ ಒಳ್ಳೆಯದು ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.


Stay up to date on all the latest ರಾಜಕೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp