ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್
ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂವಿಧಾನದ ಕರ್ತವ್ಯವನ್ನು ಸೂಕ್ತ ರೀತಿಯಲ್ಲಿ ಪಾಲನೆ ಮಾಡಬೇಕೆಂದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ.
Published: 03rd May 2022 07:45 AM | Last Updated: 03rd May 2022 12:07 PM | A+A A-

ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್
ಮೈಸೂರು: ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂವಿಧಾನದ ಕರ್ತವ್ಯವನ್ನು ಸೂಕ್ತ ರೀತಿಯಲ್ಲಿ ಪಾಲನೆ ಮಾಡಬೇಕೆಂದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಡಿದ ಅವರು, ಒಂದಲ್ಲ ಒಂದು ವಿಚಾರಕ್ಕೆ ರಾಜ್ಯ ಸರಕಾರ ಮೂಲೆಗುಂಪಾಗುತ್ತಿದೆ. ಪಿಎಸ್ಐ ಹಗರಣ ಮತ್ತು ಇತರ ವಿವಾದಗಳು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದಿವೆ. ಬೊಮ್ಮಾಯಿ ಇದಕ್ಕೆ ಕಡಿವಾಣ ಹಾಕಿ ಸರಕಾರಕ್ಕೆ ಹೊಸ ಛಾಪು ಮೂಡಿಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ: ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ಸಿ ವಿಶ್ವನಾಥ್ ಟೀಕೆ
ಇದೇ ವೇಳೆ ಪಕ್ಷವು ಹೊಸ ಮುಖಗಳಿಗೆ ಮತ್ತು ಯುವಕರಿಗೆ ಆದ್ಯತೆ ನೀಡಲಿದೆ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಉಲ್ಲೇಖಿಸಿದ ವಿಶ್ವನಾಥ್ ಅವರು, ಅವರ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ವಂಶಾಡಳಿತ ರಾಜಕಾರಣವನ್ನು ಕೊನೆಗಾಣಿಸಲು ನಾನೂ ಬಯಸುತ್ತೇನೆಂದು ತಿಳಿಸಿದ್ದಾರೆ.