ರಾಜ್ಯಕ್ಕೆ ಅಮಿತ್ ಶಾ ಭೇಟಿ: ನಾಯಕತ್ವ ಬದಲಾವಣೆ ಕುರಿತು ಹೆಚ್ಚಿದ ಕುತೂಹಲ

ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿರುವ ನಡುವಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲವನ್ನು ಹೆಚ್ಚಾಗುವಂತೆ ಮಾಡಿದೆ.

Published: 03rd May 2022 08:28 AM  |   Last Updated: 03rd May 2022 12:56 PM   |  A+A-


amit shah and CM bommai

ಅಮಿತ್ ಶಾ ಹಾಗೂ ಸಿಎಂ ಬೊಮ್ಮಾಯಿ

The New Indian Express

ಬೆಂಗಳೂರು: ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿರುವ ನಡುವಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲವನ್ನು ಹೆಚ್ಚಾಗುವಂತೆ ಮಾಡಿದೆ.

ದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಅವರು ಆಗಮಿಸಿದ್ದು, ಶಾ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ವಾಗತಿಸಿದರು.

ಮೇ 3ರಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ ಅವರು ಬಸವ ಜಯಂತಿ ನಿಮಿತ್ತ ಅಣ್ಣ ಬಸವಣ್ಣರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.

ನಂತರ ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸುವ ಮೂಲಕ ವಿವಿಗೆ ಅಧಿಕೃತವಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದೇ ವೇಳೆ ಬಳ್ಳಾರಿಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಸಾಲು ಸಾಲು ಭ್ರಷ್ಟಾಚಾರ, ಲಂಚ ಪ್ರಕರಣಗಳ ನಡುವೆ ರಾಜ್ಯದಲ್ಲಿ ಬದಲಾವಣೆ ರಾಜಕೀಯ!

ಇದರ ಜೊತೆಗೆ ಇ ಬೀಟ್ ಅಪ್ಲಿಕೇಷನ್ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12 ರ ನಂತರ ಸಾತನೂರು ಗ್ರಾಮಕ್ಕೆ ತೆರಳಿ ನ್ಯಾಟ್ ಗ್ರಿಡ್ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ.

ಬಳಿಕ ಮುಖ್ಯಮಂತ್ರಿ ಬೊಮ್ಮಾಯಿಯವರ ನಿವಾಸದಲ್ಲಿ ಗೌರವಾರ್ಥವಾಗಿ ಆಯೋಜಿಸಲಾಗಿರುವ ಭೋಜನ ಕೂಟದಲ್ಲಿ ಅಮಿತ್ ಶಾ ಭಾಗಿಯಾಲಿದ್ದಾರೆ.

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಈ ಭೋಜನ ಕೂಟ ನಡೆಯಲಿದ್ದು, 40ಕ್ಕೂ ಹೆಚ್ಚು ಬಗೆಯ ಖಾದ್ಯಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಮುಖಂಡರನ್ನು ತಣಿಸಲಿವೆ.

ಪಂಜಾಬಿ, ಗುಜರಾತಿ ಹಾಗೂ ದಕ್ಷಿಣ ಭಾರತೀಯ ಶೈಲಿಯ ಭೋಜನ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 350 ರಿಂದ 400 ಮಂದಿ ಭೋಜನ ಸ್ವೀಕರಿಸುವ ನಿರೀಕ್ಷೆಗಳಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ: ಯಡಿಯೂರಪ್ಪ

ಭೋಜನ ಕೂಟದ ಬಳಿಕ ಮಧ್ಯಾಹ್ನ 2.30ರ ಸುಮಾರಿಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಕೋರ್ ಸಮಿತಿ ಮತ್ತು ಮೋರ್ಚಾ ಅಧ್ಯಕ್ಷರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ವಿಶೇಷವೆಂದರೆ ಈ ಸಭೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಗಮಿಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿಯ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಕಾಣಿಸಿಕೊಳ್ಳುತ್ತಿದ್ದಾರೆ.

ಸಭೆ ಬಳಿಕ ಸಂಜೆ 5.30ರ ವೇಳೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರವ ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಗೇಮ್ಸ್ 2021 ಸಮಾರೋಪ ಸಮಾರಂಭದಲ್ಲಿ ಅಮಿತ್ ಶಾ ಆಗಮಿಸುತ್ತಿದ್ದಾರೆ.

ಕಾರ್ಯಕ್ರಮಗಳ ನೆಪದಲ್ಲಿ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಅವರು, ಈ ವೇಳೆ ಸಚಿವರು ತಮ್ಮ ಕ್ಷೇತ್ರದಲ್ಲಿ ಜನ ಪರ ಕೆಲಸ, ಭ್ರಷ್ಟ ರಹಿತ ಆಡಳಿತ, ಪಕ್ಷದ ವರ್ಚಸ್ಸು ಹೆಚ್ಚಿಸುವ ಕಾರ್ಯಕ್ರಮ ಸೇರಿದಂತೆ ಹಲವು ಮಾನದಂಡ ಇಟ್ಟುಕೊಂಡು ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಮಾನದಂಡದಲ್ಲಿ ಉತ್ತಿರ್ಣರಾದ ಶಾಸಕರಿಗೆ ಸಚಿವ ಸ್ಥಾನ ಒಲಿದು ಬರಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಹಲವು ಮಹತ್ತರ ಬದಲಾವಣೆಗಳು?

ಈ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಮುಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ಹಾಗೂ ವಂಶಾಡಳಿತ ರಾಜಕಾರಣದ ಕುರಿತಂತೆ ನೀಡಿದ್ದ ಹೇಳಿಕೆಯೊಂದು ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ದೆಹಲಿ, ಗುಜರಾತ್‌ ನಗರಪಾಲಿಕೆ ಚುನಾ​ವ​ಣೆ​ಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇ​ವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿ​ದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್‌ ನೀಡಲಿಲ್ಲ. ಗುಜರಾತ್‌ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಗುಜ​ರಾ​ತ್‌​ನಲ್ಲಿ ಮುಖ್ಯ​ಮಂತ್ರಿ ಸೇರಿ ಇಡೀ ಕ್ಯಾಬಿ​ನೆಟ್‌ ಅನ್ನೇ ಪುನರ್‌ ರಚಿ​ಸಿ​ದ್ದೆವು ಎಂದು ಹೇಳಿದ್ದರು.

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ, ಮುಂಬರುವ ಚುನಾವಣೆದೆ ಸಂಘಟನಾತ್ಮಕ ಸಿದ್ಧತೆ ಸೇರಿದಂತೆ ಬಿಜೆಪಿಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿರುವಾಗಲೇ ಸಂತೋಷ್ ಅವರ ಹೇಳಿಕೆ ಎಲ್ಲಿಲ್ಲದ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೀಗ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗಲಿವೆ ಎಂದು ಹೇಳಲಾಗುತ್ತಿದೆ.


Stay up to date on all the latest ರಾಜಕೀಯ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp