ಸಾಲು ಸಾಲು ಭ್ರಷ್ಟಾಚಾರ, ಲಂಚ ಪ್ರಕರಣಗಳ ನಡುವೆ ರಾಜ್ಯದಲ್ಲಿ ಬದಲಾವಣೆ ರಾಜಕೀಯ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಒಂದು ವರ್ಷದೊಳಗೆ ಮತ್ತೊಂದು ಬದಲಾವಣೆಯನ್ನು ನೋಡಬಹುದು ಎಂಬ ವದಂತಿಗಳು ಹರಿದಾಡುತ್ತಿವೆ.
ಅಮಿತ್ ಶಾ
ಅಮಿತ್ ಶಾ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಒಂದು ವರ್ಷದೊಳಗೆ ಮತ್ತೊಂದು ಬದಲಾವಣೆಯನ್ನು ನೋಡಬಹುದು ಎಂಬ ವದಂತಿಗಳು ಹರಿದಾಡುತ್ತಿವೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಕಳೆದ ವಾರ ಮೈಸೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ  ಸಂಘಟನಾ ಕಾರ್ಯದರ್ಶಿ ಬಿಎಎಲ್ ಸಂತೋಷ್ ಹೇಳಿದ್ದರು.

ಆದರೆ ಶಿಕಾರಿಪುರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ಲಿಂಗಾಯತ ನಾಯಕ ಬಿಎಸ್ ಯಡಿಯೂರಪ್ಪ, ‘ಸಿಎಂ ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.

ಆದರೆ ಕಾರಣಗಳಿಲ್ಲದೇ ಸಂತೋಷ್ ಇಂತಹ ಮಹತ್ವದ ಹೇಳಿಕೆ ನೀಡುವುದಿಲ್ಲ  ಎಂದು ಬಿಜೆಪಿ ಮೂಲಗಳು ತಿಳಿಸಿವೆ,  ಬಿಜೆಪಿ ಕೇಂದ್ರ ನಾಯಕತ್ವವು ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರವನ್ನು ಗಂಭೀರವಾಗಿ ಪರಿಗಣಿಸಿದೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಇದು ಸೂಕ್ತ ಸಮಯವಲ್ಲದಿದ್ದರೂ, ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಬಗ್ಗೆ ಅವರು ಚಿಂತಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com