ಹಗರಣದಲ್ಲಿ ಅಶ್ವತ್ಥ್ ನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ ಸವಾಲು
ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಬಂಧಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ.
Published: 06th May 2022 12:03 PM | Last Updated: 06th May 2022 12:59 PM | A+A A-

ಸಚಿವ ಗೋಪಾಲಯ್ಯ
ಬೆಂಗಳೂರು: ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಬಂಧಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದೇ ಕೆಲವರು ಮಾಡಿರುವ ಪಿತೂರಿ ಇದು. ಪುರಾವೆಗಳು ಇದ್ದರೆ ಅವರು ನ್ಯಾಯಾಲಯಕ್ಕೆ ಹೋಗಲಿ ಎಂದರು.
ಇದನ್ನೂ ಓದಿ: ಪಿಎಸ್ಐ ಹಗರಣ: ಬೇರುಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡ್ತೀವಿ- ಆರಗ ಜ್ಞಾನೇಂದ್ರ
ಈ ಹಿಂದಿನ ಸರ್ಕಾರದಲ್ಲಿ ಇದೇ ರೀತಿ ನಡೆದಿರುವ ನೇಮಕಾತಿ ಅಕ್ರಮಗಳ ಬಗ್ಗೆಯೂ ತನಿಖೆಯಾಗಬೇಕು. ಈಗಾಗಲೇ ಬಂಧಿತನಾಗಿರುವ ತುಮಕೂರು ಯುವಕ ಮತ್ತು ಆತನ ಸಹೋದರ ನಾವು ಅಶ್ವಥ್ ನಾರಾಯಣ್ ಅವರನ್ನು ನೋಡಿಯೇ ಇಲ್ಲ ಎನ್ನುತ್ತಿದ್ದಾರೆ. ಆದರೆ ವಿರೋಧ ಪಕ್ಷಗಳ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅಶ್ವಥ್ ನಾರಾಯಣ ಅವರು ಭಾಗಿಯಾಗಿರುವ ಕುರಿತು ಸಾಕ್ಷಿ ಇದ್ದರೆ ನೀಡಲಿ ಎಂದು ಒತ್ತಾಯಿಸಿದರು.
ದಲ್ಲಾಳಿಗಳ ವಿರುದ್ದ ಕಾನೂನು ಕ್ರಮ
ಇದೇ ವೇಳೆ ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಗೋಪಾಲಯ್ಯ ಅವರು ಹೇಳಿದ್ದಾರೆ.
ಇದನ್ನೂ ಓದಿ: ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ. ಹೆಚ್ಚು ರಾಗಿ ಬೆಳೆಯುವ ಹಾಸನ, ಹಳೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲ ಭಾಗದ ರಾಗಿ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಖರೀದಿ ಕೇಂದ್ರ ಮಧ್ಯ ವರ್ತಿಗಳು, ದಲ್ಲಾಲರು ಕಂಡು ಬಂದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು.
ರೈತರಿಗೆ ಅನುಕೂಲ ಕಲ್ಪಿಸುವ ಹಿನ್ನೆಲೆಯಲ್ಲಿ ಮತ್ತೆ ಎರಡು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದರು.