ಯತ್ನಾಳ್ ಆರೋಪ ಗಂಭೀರ, ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ: ಸಿದ್ದರಾಮಯ್ಯ
ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಗೆ ಒಂದು ಹೊಸ ಅಸ್ತ್ರ ಸಿಕ್ಕಂತಾಗಿದೆ.
Published: 07th May 2022 03:21 PM | Last Updated: 07th May 2022 05:48 PM | A+A A-

ಸಿದ್ದರಾಮಯ್ಯ
ಬೆಂಗಳೂರು: ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಗೆ ಒಂದು ಹೊಸ ಅಸ್ತ್ರ ಸಿಕ್ಕಂತಾಗಿದೆ.
ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದಿದ್ದಾರೆ.
ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ @BJP4Karnataka ಶಾಸಕ ಬಸವನಗೌಡ ಪಾಟೀಲ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ. 1/8#ಪೇಮೆಂಟ್_ಸಿಎಂ
— Siddaramaiah (@siddaramaiah) May 7, 2022
ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದಿದ್ದರೆ ಬಿಜೆಪಿ ಮುಖಂಡರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಅದರ ನಂತರ ಬೊಮ್ಮಾಯಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ. ಅವರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆದರೆ ತನಿಖೆಯೂ ಸಲೀಸಾಗುತ್ತದೆ. ಸತ್ಯವೂ ಹೊರಬರುತ್ತದೆ ಎಂದಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಹರಾಜಿನ ಮೂಲಕ ಮಾರಾಟವಾಗುವ 'ಪೇಮೆಂಟ್ ಸೀಟು' ಎನ್ನುವುದು ಯತ್ನಾಳ್ ಆರೋಪದಿಂದ ಬಯಲಾಗಿದೆ. ಈ ಸೀಟುಗಳು ಕೇವಲ ಮುಖ್ಯಮಂತ್ರಿ ಕುರ್ಚಿಗೆ ಮಾತ್ರ ಸೀಮಿತವಾಗಿಲ್ಲ. ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎಂಬ ಆರೋಪವಿದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು. ಇದು ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ. ಈ ಸೀಟಿಗಾಗಿ ಹಿಂದಿನ ಮತ್ತು ಈಗಿನ ಮುಖ್ಯಮಂತ್ರಿಗಳು ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದೂ ಬಹಿರಂಗವಾಗಬೇಕು. 4/8#ಪೇಮೆಂಟ್_ಸಿಎಂ
— Siddaramaiah (@siddaramaiah) May 7, 2022
ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂಧೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ. ಇದರಿಂದ ಒಬ್ಬ ಅಮಾಯಕ ಗುತ್ತಿಗೆದಾರ ಜೀವ ಕಳೆದುಕೊಂಡ. ಸಾವಿರಾರು ಅಮಾಯಕ ಪಿಎಸ್ ಐ ಹುದ್ದೆ ಆಕಾಂಕ್ಷಿಗಳು ಭವಿಷ್ಯ ಕಳೆದುಕೊಂಡರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.