ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಸಂದೇಶ್ ನಾಗರಾಜ್ ಸೇರಿ ಹಲವರು ಬಿಜೆಪಿ ಸೇರ್ಪಡೆ
ಕಾಂಗ್ರೆಸ್ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಮಾಜಿ ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ ಹಲವು ನಾಯಕರು ಶನಿವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
Published: 07th May 2022 07:35 PM | Last Updated: 07th May 2022 07:35 PM | A+A A-

ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಹಲವರು ಬಿಜೆಪಿ ಸೇರ್ಪಡೆ
ಬೆಂಗಳೂರು: ಕಾಂಗ್ರೆಸ್ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಮಾಜಿ ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ ಹಲವು ನಾಯಕರು ಶನಿವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಇಂದು ಬೆಂಗಳೂರಿನ ಖಾಸಗಿ ಹೊಟೇಲೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪ್ರಮೋದ್ ಮಧ್ವರಾಜ್ ಹಾಗೂ ವರ್ತೂರು ಪ್ರಕಾಶ್ ಅವರು ಬಿಜೆಪಿ ಸೇರಿದರು.
ಇದನ್ನು ಓದಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ; ಶೀಘ್ರ ಬಿಜೆಪಿಗೆ
ಬಿಜೆಪಿ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಮಾಲೂರು ಮಂಜುನಾಥ್ ಗೌಡ, ಮಂಡ್ಯ ಭಾಗದ ಲಕ್ಷ್ಮೀ ಅಶ್ವಿನ್ ಗೌಡ, ಅಶೋಕ್ ಜಯರಾಮ್, ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಅವರನ್ನು ಸಿಎಂ ಬೊಮ್ಮಾಯಿ ಹಾಗೂ ನಳೀನ್ ಕುಮಾರ್ ಕಟೀಲ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಸಚಿವರಾದ ಆರ್ ಅಶೋಕ್, ಎಸ್.ಟಿ ಸೋಮಶೇಖರ್, ನಾರಾಯಣಗೌಡ, ಗೋಪಾಲಯ್ಯ, ಮುನಿರತ್ನ, ಸುಧಾಕರ್, ಸಂಸದ ಮುನಿಸ್ವಾಮಿ, ಎಂಎಲ್ಸಿ ಸಿ.ಪಿ ಯೋಗೇಶ್ವರ್ ಈ ವೇಳೆ ಉಪಸ್ಥಿತರಿದ್ದರು.