ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ ಗೆ ಗುಡ್ ಬೈ; ಶೀಘ್ರ ಬಿಜೆಪಿಗೆ

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

Published: 07th May 2022 05:49 PM  |   Last Updated: 07th May 2022 06:00 PM   |  A+A-


Pramod Madhwaraj

ಪ್ರಮೋದ್ ಮಧ್ವರಾಜ್

Online Desk

ಉಡುಪಿ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಪ್ರಮೋದ್ ಮಧ್ವರಾಜ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. 

ರಾಜೀನಾಮೆ ಪತ್ರದಲ್ಲಿ, ನನಗೆ ಪಕ್ಷದಲ್ಲಿ ದುಡಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ. ಉಡುಪಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದೆ. ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷನನ್ನಾಗಿ ನೇಮಿಸಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಆದರೆ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾರೆ.

2018 ರಲ್ಲಿ ಸರ್ವೇಯೊಂದರಲ್ಲಿ ನಾನು ರಾಜ್ಯದ ಅತ್ಯುತ್ತಮ ಕಾರ್ಯನಿರವಹಿಸಿದ ಶಾಸಕರ ಪೈಕಿ ಮೊದಲಿಗನಾಗಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ ಪ್ರಮೋದ್ ಮದ್ವರಾಜ್ ಬಿಜೆಪಿ ಸೇರುವುದು ಖಚಿತವಾಗಿದ್ದು, ಶೀಘ್ರ ವರಿಷ್ಠರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ ಪಕ್ಷ ಯಾವ ಸ್ಥಾನ ಮಾನ ನೀಡಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ.
 


Stay up to date on all the latest ರಾಜಕೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp