19 ಲಕ್ಷ ಇವಿಎಂ ಯಂತ್ರಗಳು ಕಾಣೆ, ಸಭಾಧ್ಯಕ್ಷರಿಗೆ ಪುರಾವೆ ಸಲ್ಲಿಸಿದ ಕಾಂಗ್ರೆಸ್
ಬೆಂಗಳೂರು: 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಾಂಗ್ರೆಸ್ ಸಲ್ಲಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. 19 ಲಕ್ಷ ಇವಿಎಂ ಯಂತ್ರಗ
Published: 08th May 2022 04:30 PM | Last Updated: 08th May 2022 04:30 PM | A+A A-

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಎಚ್ ಕೆ ಪಾಟೀಲ್ ಮತ್ತಿತರರು
ಬೆಂಗಳೂರು: 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಾಂಗ್ರೆಸ್ ಸಲ್ಲಿಸಿದೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. 19 ಲಕ್ಷ ಇವಿಎಂ ಯಂತ್ರಗಳು ನಾಪತ್ತೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ನೀಡಿರುವುದಾಗಿ ತಿಳಿಸಿದರು.
19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಇದಕ್ಕೆ ಪೂರಕವಾಗಿ 2,750 ಪುಟಗಳ ಕಾಗದ ಪತ್ರಗಳನ್ನು ಸಲ್ಲಿಸಲಾಗಿದೆ. ಮನೊರಂಜನ್ ಸಂತೋಷ್ ರಾಯ್ ಪಿಎಲ್ ಮಾಡಿದ್ರು. ಅದರ ಮಾಹಿತಿಗಳನ್ನು ಸ್ಪೀಕರಿಗೆ ಅವರಿಗೆ ಸಲ್ಲಿಕೆ ಮಾಡಿದ್ದೇನೆ ಎಂದರು.
ಕಳೆದ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸಿದಂತೆ ಚುನಾವಣಾ ಸುಧಾರಣೆಗಳ ಹಾಗೂ ಕಾಣೆಯಾದ EVM ಯಂತ್ರಗಳ ಕುರಿತು ಕಾಗದ ಪತ್ರಗಳು ಹಾಗೂ ಪುರಾವೆಗಳನ್ನು ಕರ್ನಾಟಕ ವಿಧಾನಸಭೆ ಅಧ್ಯಕ್ಷರಾದ ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಬೆಂಗಳೂರಿನಲ್ಲಿ ಇಂದು ಸಲ್ಲಿಸಿದೆ . pic.twitter.com/LuyuXpht2g
— HK Patil (@HKPatil1953) May 8, 2022
ಇನ್ನು ಪಿಎಸ್ ಐ ಹಗರಣ, 40 % ಹಗರಣ, ಸಂತೋಷ್ ಪಾಟೀಲ್ ಆತ್ಮಹತ್ಯೆ, ದಿಂಗಾಲೇಶ್ವರ ಶ್ರೀಗಳ ಆರೋಪದ ನಂತರವೂ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಲು ಯಾವ ನೈತಿಕತೆಯಿದೆ ಎಂದು ಖಾರವಾಗಿ ನುಡಿದರು.