ಹನುಮಾನ್ ಚಾಲೀಸಾ ಹಾಕಿದ ಮಾತ್ರಕ್ಕೆ ಹಿಂದುತ್ವ ಉಳಿಯುವುದಿಲ್ಲ: ಪ್ರಮೋದ್ ಮುತಾಲಿಕ್‌ ನ ಒದ್ದು ಒಳಗೆ ಹಾಕಬೇಕು!

ಸಮಾಜದಲ್ಲಿ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್‌ ಅಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಆಗ ಎಲ್ಲವೂ ಸರಿ ಹೋಗುತ್ತದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Published: 10th May 2022 08:59 AM  |   Last Updated: 10th May 2022 12:55 PM   |  A+A-


Pramod Muthalik

ಪ್ರಮೋದ್ ಮುತಾಲಿಕ್

The New Indian Express

ಬಾಗಲಕೋಟೆ:  ಸಮಾಜದಲ್ಲಿ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್‌ ಅಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಆಗ ಎಲ್ಲವೂ ಸರಿ ಹೋಗುತ್ತದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಇಂತಹ ವಿಷಯಗಳು ಬೃಹದಾಕಾರವಾಗಿ ಬೆಳೆಯಲು ಸಕಾ೯ರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ನಿಲ್ಲಿಸಬೇಕು. ಸಮಾಜದ ಸಾಮರಸ್ಯ ಹಾಳಾದ ಮೇಲೆ ರಿಪೇರಿ ಮಾಡಲಿಕ್ಕಾಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಬೆಳಿಗ್ಗೆಯಿಂದ ನೋಡಿದ್ದೇನೆ. ಇದು ರಾಮ ಸೇನೆನೋ, ರಾವಣನ ಸೇನೆನೋ ಇದೊಂದು ಕಡೆ ಇರಲಿ.  ಸುಪ್ರೀಂ ಕೋರ್ಟ್‌ ನಿಗದಿಪಡಿಸಿದ ಪ್ರಮಾಣದಲ್ಲಿ ಸ್ಪೀಕರ್‌ ಇರಲಿ. ಸರ್ಕಾರ ಇದಕ್ಕೆ ಪರ್ಮಿಷನ್ ಕೊಟ್ಟು ಬಿಡಲಿ. ಇದಕ್ಕೇನು ದೊಡ್ಡ ಪ್ರಚಾರದ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ಆಜಾನ್ ವಿರುದ್ಧ ಹಿಂದೂ ಸಂಘಟನೆಗಳ ಸಮರ, ಮುಂಜಾನೆಯಿಂದ ದೇವಸ್ಥಾನಗಳಲ್ಲಿ ಸುಪ್ರಭಾತ!

ಹನುಮಾನ್ ಚಾಲೀಸಾ ಹಾಕಿದ ಮಾತ್ರಕ್ಕೆ ಹಿಂದುತ್ವ ಉಳಿಯುವುದಿಲ್ಲ, ದಿನಂಪ್ರತಿ ಮನೆಯಲ್ಲಿ ನಾವು ಹೇಳೋಲ್ವೆ. ಏನಾದರೂ ಸಮಸ್ಯೆ ಆದರೆ, ಆರೋಗ್ಯ ತೊಂದರೆ ಆದರೆ ಹನುಮಾನ್ ಚಾಲೀಸಾ ಹೇಳ್ತೀವಿ. ಇದೇನು ದೊಡ್ಡ ಸಾಧನೆ ಏನಲ್ಲ. ಮೊದಲು ಇವರನ್ನು ಒದ್ದು ಒಳಗಡೆ ಹಾಕದೇ ಇದ್ದರೆ ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ನೆಲೆಸಲು ಕಷ್ಟ ಎಂದು ಹೇಳಿದರು.

ನಮಗೆ ಇದೆಲ್ಲಾ ಬೇಕಾಗಿಲ್ಲ. ಹೋದ ವರ್ಷದ ರೈತರ ಬೆಳೆ ವಿಮೆ ದುಡ್ಡೇ ಬಂದಿಲ್ಲ. ಇದಕ್ಕೆ ನಮ್ಮ ಹೋರಾಟ ಇರಬೇಕು. ಏನು ಗಂಟೆ ಬಾರಿಸಿದರೆ ನಿಮಗೆಲ್ಲಾ ಸಿಕ್ಕಿ ಬಿಡುತ್ತಾ.  ಸಂಘಟನೆಗಳಿಂದ ಆ ಬಗ್ಗೆ ಹೋರಾಟ ನಡೆಯಬೇಕಿದೆಯೇ ಹೊರತು ಕೋಮು ದ್ವೇಷ ಬಿತ್ತುವುದಲ್ಲ ಎಂದರು.


Stay up to date on all the latest ರಾಜಕೀಯ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Ivan

    maraschino correctly said. Government should take action against antisocial elements
    7 months ago reply
flipboard facebook twitter whatsapp