'ಅಂತರ್ಧಾನ'ದಲ್ಲಿದ್ದ ರಮ್ಯಾ ಹಠಾತ್ ಪ್ರತ್ಯಕ್ಷ: ರಾಹುಲ್ ಗೆ ಎಐಸಿಸಿ ಪಟ್ಟ ಕಟ್ಟಲು ಚರ್ಚೆ; ಮೀರ್‌ಸಾದಿಕ್ ಬಣದಿಂದ ಡಿಕೆಶಿ ಹರಕೆ ಕುರಿ!
ಮಾಜಿ ಸಂಸದೆ ರಮ್ಯಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಟ್ಟಿಟ್ಟರ್ ವಾರ್ ಕುರಿತಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
Published: 13th May 2022 01:48 PM | Last Updated: 13th May 2022 01:48 PM | A+A A-

ರಮ್ಯಾ ಮತ್ತು ಡಿಕೆ ಶಿವಕುಮಾರ್
ಬೆಂಗಳೂರು: ಮಾಜಿ ಸಂಸದೆ ರಮ್ಯಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಟ್ಟಿಟ್ಟರ್ ವಾರ್ ಕುರಿತಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ. ಭ್ರಷ್ಟಾಧ್ಯಕ್ಷ ರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ.
ಇಷ್ಟು ದಿನಗಳ ಕಾಲ "ಅಂತರ್ಧಾನ" ಸ್ಥಿತಿಯಲ್ಲಿದ್ದ ರಮ್ಯಾ ಈಗ ಕೆಪಿಸಿಸಿ ಅಧ್ಯಕ್ಷ @DKShivakumar ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ.
— BJP Karnataka (@BJP4Karnataka) May 13, 2022
ಈ ಅನಿರೀಕ್ಷಿತ ದಾಳಿಯ ಹಿಂದೆ #ಮೀರ್‌ಸಾದಿಕ್ ಕೈವಾಡವಿದೆ.
ಡಿಕೆಶಿ ಅವರೇ, ನಿಮ್ಮ ವಿರೋಧಿ ಶಕ್ತಿಗಳ ಕೈ ಮೇಲಾಗುತ್ತಿದೆಯೇ?#ಹರಕೆಯಡಿಕೆ
ಇಷ್ಟು ದಿನಗಳ ಕಾಲ "ಅಂತರ್ಧಾನ" ಸ್ಥಿತಿಯಲ್ಲಿದ್ದ ರಮ್ಯಾ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ. ಈ ಅನಿರೀಕ್ಷಿತ ದಾಳಿಯ ಹಿಂದೆ ಮೀರ್‌ಸಾದಿಕ್ ಕೈವಾಡವಿದೆ. ಡಿಕೆಶಿ ಅವರೇ, ನಿಮ್ಮ ವಿರೋಧಿ ಶಕ್ತಿಗಳ ಕೈ ಮೇಲಾಗುತ್ತಿದೆಯೇ?
ಮಾಜಿ ಸಚಿವ ಮಹಾದೇವಪ್ಪ ಅವರು ರಮ್ಯಾ ಪರ ಬ್ಯಾಟ್ ಬೀಸಿದ್ದಾರೆಯೇ ಹೊರತು ಡಿಕೆಶಿ ಪರವಲ್ಲ! ಮಹಾದೇವಪ್ಪ, ಸಿದ್ದರಾಮಯ್ಯ ಅತ್ಯಾಪ್ತರಲ್ಲೋರ್ವರು. ಸಿದ್ದರಾಮಯ್ಯ ಆಪ್ತರೆಲ್ಲಾ ರಮ್ಯಾ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದೆಲ್ಲ ಏನನ್ನು ಸೂಚಿಸುತ್ತದೆ? ಮೀರ್‌ಸಾದಿಕ್ ಬಣ ಡಿಕೆಶಿಯನ್ನು ಹರಕೆಯ ಕುರಿಯಾಗಿಸಲು ಹೊರಟಿದೆಯೇ? ಎಂದು ಪ್ರಶ್ನಿಸಿದೆ.
ಡಿಕೆಶಿ ಅವರೇ, ನಿಮ್ಮ ವಿರುದ್ಧ ಈಗ ನಡೆಯುತ್ತಿರುವುದು ಮೀರ್‌ಸಾದಿಕ್ ಬಣದ ಸಂಚು. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಹಾಗೂ ನಿಮ್ಮ ತಂಡವನ್ನು ರೌಡಿಪಟ್ಟಿಗೆ ಸೇರಿಸುವ ತಂತ್ರ ನಡೆಯುತ್ತಿದೆ ಎಂದು ಲೇವಡಿ ಮಾಡಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ.
— BJP Karnataka (@BJP4Karnataka) May 13, 2022
ಇದೇ ವೇಳೆ @siddaramaiah ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ.#ಭ್ರಷ್ಟಾಧ್ಯಕ್ಷ ರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ.#ಹರಕೆಯಡಿಕೆ