ರಾಜ್ಯಸಭೆ, ಎಂಎಲ್ಸಿ ಚುನಾವಣೆಯತ್ತ ಬಿಜೆಪಿ ಗಮನ: ಸಿಎಂ ಬಸವರಾಜ ಬೊಮ್ಮಾಯಿ
ಬಿಜೆಪಿ ರಾಜ್ಯಘಟಕ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
Published: 15th May 2022 11:57 PM | Last Updated: 16th May 2022 01:40 PM | A+A A-

ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಬಿಜೆಪಿ ರಾಜ್ಯಘಟಕ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸದ್ಯ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ನಿನ್ನೆಯೇ ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದ್ದು, ವರಿಷ್ಠರು ನಿಗಾ ವಹಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಸಂಪುಟ ವಿಸ್ತರಣೆ: ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಚರ್ಚೆ- ಮುಖ್ಯಮಂತ್ರಿ ಬೊಮ್ಮಾಯಿ
ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮತ್ತು ರಾಜ್ಯ ವಿಧಾನ ಪರಿಷತ್ತಿನ ತಲಾ ಎರಡು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಕ್ರಮವಾಗಿ ಜೂನ್ 10 ಮತ್ತು 13 ರಂದು ದ್ವೈವಾರ್ಷಿಕ ಚುನಾವಣೆಗಳು ನಡೆಯಲಿವೆ. ಅಲ್ಲದೆ, ಜೂನ್ 3 ರಂದು ಏಳು ಸ್ಥಾನಗಳಿಗೆ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಹಲವು ಸರ್ಕಾರಗಳು ಚುನಾವಣೆಯನ್ನು ಘೋಷಿಸಬಹುದು ಮತ್ತು ಈ ನಿಟ್ಟಿನಲ್ಲಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದರು.
ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆ
ಬೆಂಗಳೂರು ಪೌರಾಡಳಿತ ಸಂಸ್ಥೆ ಸೇರಿದಂತೆ ಕೆಲವೆಡೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಉಲ್ಲೇಖಿಸಿ ಉತ್ತರ ನೀಡಲಾಗಿದ್ದು, ಶೀಘ್ರದಲ್ಲೇ ಅದನ್ನು ಪ್ರಕಟಿಸಬಹುದು. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಪಕ್ಷದ ಹೈಕಮಾಂಡ್ಗೆ ದೂರವಾಣಿ ಮೂಲಕ ಸಂಪರ್ಕಿಸುವುದಾಗಿ ತಿಳಿಸಿದ ಬೊಮ್ಮಾಯಿ ಅವರು, ಸೂಚನೆ ಆಧರಿಸಿ ಸಚಿವ ಸಂಪುಟ ಪುನಾರಚನೆಗೆ ಮುಂದಾಗಬಹುದು. ಕರ್ನಾಟಕದಲ್ಲಿ ಖಾಲಿ ಇರುವ 34 ಮಂಜೂರಾದ ಹುದ್ದೆಗಳ ವಿರುದ್ಧ ಐದು ಸಚಿವ ಸ್ಥಾನಗಳಿವೆ ಮತ್ತು ಹಲವು ಆಡಳಿತಾರೂಢ ಬಿಜೆಪಿ ಶಾಸಕರು ಸಚಿವರಾಗಲು ಆಕಾಂಕ್ಷಿಯಾಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರ ಒಲವು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಧಾನಪರಿಷತ್ಗೆ ಎಂಟ್ರಿ ಕೊಟ್ಟು ಸಚಿವರಾಗಬಹುದು ಎಂಬ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ, ಎಲ್ಲವನ್ನೂ ಪಕ್ಷದ ಹೈಕಮಾಂಡ್ಗೆ ಬಿಡಲಾಗಿದೆ ಎಂದು ಚುಟುಕಾಗಿ ಹೇಳಿದರು. ದುರ್ಬಲ ಮುಖ್ಯಮಂತ್ರಿ ಎಂದು ವಿರೋಧ ಪಕ್ಷಗಳು ಆರೋಪ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, "ನೀವು (ಪತ್ರಕರ್ತರು) ಮಾತ್ರ ಹೀಗೆ ಹೇಳುತ್ತೀರಿ, ನಾವು ಹಿಜಾಬ್ ಸಮಸ್ಯೆ, ಆಜಾನ್ ಸಮಸ್ಯೆ ಮತ್ತು ಹಲಾಲ್ ಸಮಸ್ಯೆಯನ್ನು ಸಾಮರಸ್ಯದಿಂದ ಪರಿಹರಿಸಿದ್ದೇವೆ. ಆಜಾನ್ ಪ್ರಕರಣವೂ ಆಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಆಧರಿಸಿ ಪರಿಹರಿಸಲಾಗಿದೆ. ನ್ಯಾಯಾಲಯದ ನಿರ್ದೇಶನಗಳ ಪ್ರಕಾರ ಹಿಜಾಬ್ ಪ್ರಕರಣವನ್ನು ಸಹ ಪರಿಹರಿಸಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ನಾವು ವಿವಾದಗಳನ್ನು ಪರಿಹರಿಸಲು ಸಾಧ್ಯವಾಯಿತು. ನಾವು ನಮ್ಮ ಕರ್ತವ್ಯವನ್ನು ಪರಿಪೂರ್ಣ ರೀತಿಯಲ್ಲಿ ನಿರ್ವಹಿಸಿದ್ದೇವೆ ಎಂದು ಹೇಳಿದರು.