ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರ ಒಲವು
ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕೆಂದು ಪಕ್ಷದ ಕೆಲವರು ಬಯಸುತ್ತಿರುವುದರಿಂದ ಮತ್ತೊಮ್ಮೆ ಗಾಂಧಿ ಕುಟುಂಬದ ವರ್ಚಸ್ಸಿನ ಮೇಲೆ ದೇಶಾದ್ಯಂತ ಸೊರಗಿರುವ ಪಕ್ಷದ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ.
Published: 15th May 2022 08:33 AM | Last Updated: 15th May 2022 09:14 AM | A+A A-

ರಾಹುಲ್ ಗಾಂಧಿ ಅವರೊಂದಿಗೆ ಡಿಕೆ ಶಿವಕುಮಾರ್ ಮತ್ತಿತರ ಚಿತ್ರ
ಬೆಂಗಳೂರು: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕೆಂದು ಪಕ್ಷದ ಕೆಲವರು ಬಯಸುತ್ತಿರುವುದರಿಂದ ಮತ್ತೊಮ್ಮೆ ಗಾಂಧಿ ಕುಟುಂಬದ ವರ್ಚಸ್ಸಿನ ಮೇಲೆ ದೇಶಾದ್ಯಂತ ಸೊರಗಿರುವ ಪಕ್ಷದ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ.
ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ರಾಜ್ಯದಿಂದ
ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಯೋಚಿಸಿರುವುದಾಗಿ ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ಆದಾಗ್ಯೂ, ಪ್ರಿಯಾಂಕಾ ಗಾಂಧಿ ಅವರ ಹೆಸರು 2020ರಿಂದಲೂ ಪ್ರತಿ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿಯೂ ಕೇಳಿಬರುತ್ತಿದೆ. ಆದರೆ, ಅವರು ಪಾರ್ಲಿಮೆಂಟ್ ಪ್ರವೇಶಿಸಲು ರಾಜ್ಯ ಸಭಾ ಚುನಾವಣೆ ಆಯ್ಕೆ ಮಾಡಿಕೊಳ್ಳುತ್ತಾರೆ ಅನ್ನಿಸುತ್ತಿಲ್ಲ. ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಮತ್ತೊಮ್ಮೆ ಪುನರ್ ನಾಮನಿರ್ದೇಶನವಾಗುವ ಸಾಧ್ಯತೆಯಿದೆ. ಒಂದು ವೇಳೆ ಜೈರಾಮ್ ರಮೇಶ್ ಬೇರೆೊಂದು ರಾಜ್ಯದಿಂದ ಸ್ಪರ್ಧಿಸಿದರೆ ದೀಪೆಂದರ್ ಸಿಂಗ್ ಹೂಡಾ ಹರಿಯಾಣದಿಂದ ಸ್ಪರ್ಧಿಸುತ್ತಿರುವುದರಿಂದ ಮತ್ತೋರ್ವ ಅಭ್ಯರ್ಥಿಯನ್ನು ಪಕ್ಷ ಹಾಕಲಿದೆ ಎಂದು ಮತ್ತೋರ್ವ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆ
ಜೈರಾಮ್ ರಮೇಶ್ ಹೊರತುಪಡಿಸಿದಂತೆ ಮಾಜಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಮತ್ತು ಮಾಜಿ ಲೋಕಸಭಾ ಸಂಸದ ವಿ.ಎಸ್. ಉಗ್ರಪ್ಪ ಕೂಡಾ ಲಾಬಿ ಮಾಡುತ್ತಿದ್ದಾರೆ. ಆಸ್ಕರ್ ಫರ್ನಾಂಡೀಸ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ತಮ್ಮ ಸಮುದಾಯದ ಮುಖಂಡರನ್ನು ಸದಸ್ಯರನ್ನಾಗಿ ಮಾಡುವಂತೆ ಕೆಲ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ವಿಧಾನಸಭೆಯಿಂದ ಚುನಾಯಿತರಾದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಬಿಜೆಪಿಯ ಕೆ ಸಿ ರಾಮಮೂರ್ತಿ, ಜೈರಾಮ್ ರಮೇಶ್ ಮತ್ತು ದಿವಂಗತ ಆಸ್ಕರ್ ಫೆರ್ನಾಡೀಸ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ಬಿಜೆಪಿಯು ನಿರ್ಮಲಾ ಸೀತಾರಾಮನ್ ಮತ್ತು ಕೆ ಸಿ ರಾಮಸ್ವಾಮಿ ಅವರ ಹೆಸರನ್ನು ಮರುನಾಮಕರಣ ಮಾಡುವ ಸಾಧ್ಯತೆಯಿದೆ ಮತ್ತು ನಾಲ್ಕನೇ ಸದಸ್ಯರನ್ನು ಆಯ್ಕೆ ಮಾಡಲು 13-14 ಶಾಸಕರ ಕೊರತೆಯಿರುವ ಜೆಡಿ (ಎಸ್) ಕಾಂಗ್ರೆಸ್ ಮತ್ತು ಬಿಜೆಪಿಯ ಹೆಚ್ಚುವರಿ ಮತಗಳನ್ನು ಎದುರು ನೋಡುತ್ತಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಿ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು, ಇಷ್ಟು ಶಾಸಕರ 45 ಮತಗಳ ಅಗತ್ಯವಿದೆ. 122 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ನಾಮನಿರ್ದೇಶಿತರಲ್ಲಿ ಇಬ್ಬರನ್ನು ಸುಲಭವಾಗಿ ಆಯ್ಕೆ ಮಾಡಬಹುದು, 69 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಹುದು ಮತ್ತು 32 ಶಾಸಕರನ್ನು ಹೊಂದಿರುವ ಜೆಡಿಎಸ್ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಆದರೆ ಜೆಡಿ(ಎಸ್) ಬಿಜೆಪಿಯ ಮೂರನೇ ಅಭ್ಯರ್ಥಿಯನ್ನು ಬೆಂಬಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಏಕೆಂದರೆ ಅದರ ಕೆಲವು ಶಾಸಕರು ಈಗಾಗಲೇ ಪಕ್ಷವನ್ನು ತೊರೆಯಲು ಯೋಜಿಸಿದ್ದಾರೆ ಮತ್ತು ಪಕ್ಷದ ನಿರ್ಧಾರಕ್ಕೆ ಬದ್ಧರಾಗುವ ಸಾಧ್ಯತೆಯಿಲ್ಲ.
ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸ್ಪರ್ಧಿಸಲು ಪ್ರಯತ್ನಿಸಬಹುದು ಆದರೆ ಜೆಡಿಎಸ್ನಿಂದಲೂ ಅಚ್ಚರಿಯ ಅಭ್ಯರ್ಥಿ ಇರಬಹುದು ಎಂದು ಮೂಲವೊಂದು ಟಿಎನ್ಐಇಗೆ ತಿಳಿಸಿದೆ.