ಮಿತ್ರಪಕ್ಷಗಳನ್ನೇ ನುಂಗಿಹಾಕುವುದು ಸೈದ್ಧಾಂತಿಕ ರಾಜಕಾರಣವಾ? ಕಾಂಗ್ರೆಸ್ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ದಾಕ್ಷಿಣ್ಯದಿಂದ!
ಮೈತ್ರಿ ಸರ್ಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರ್ಕಾರವನ್ನು ಮಾಡಿ ಹಿಂಬಾಗಿಲಿನಿಂದ ಆಪರೇಷನ್ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ?
Published: 16th May 2022 01:53 PM | Last Updated: 16th May 2022 01:57 PM | A+A A-

ರಾಹುಲ್ ಗಾಂಧಿ
ಬೆಂಗಳೂರು: ಮೈತ್ರಿ ಸರ್ಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರ್ಕಾರವನ್ನು ಮಾಡಿ ಹಿಂಬಾಗಿಲಿನಿಂದ ಆಪರೇಷನ್ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ? ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ “ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ..” ಹೀಗೆಂದು ಕಾಂಗ್ರೆಸ್ ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ರಾಹುಲ್ ಗಾಂಧಿ ವ್ಯಾಖ್ಯಾನ ಮಾಡಿದ್ದಾರೆ. ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು? ರಾಹುಲ್ ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಎಂದು ಸವಾಲು ಹಾಕಿದ್ದಾರೆ ಎಚ್ಡಿ ಕುಮಾರಸ್ವಾಮಿ.
“ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ..”
— H D Kumaraswamy (@hd_kumaraswamy) May 16, 2022
ಹೀಗೆಂದು @INCIndia ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ @RahulGandhi ವ್ಯಾಖ್ಯಾನ ಮಾಡಿದ್ದಾರೆ.
ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು?
ರಾಹುಲ್ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು. 1/6
ಪ್ರಾದೇಶಿಕ ಪಕ್ಷಗಳ ಭೀತಿ ಎದುರಿಸುತ್ತಿರುವ ಫೋಬಿಯಾದಲ್ಲಿರುವ ಕಾಂಗ್ರೆಸ್; ಆಂಧ್ರ, ತೆಲಂಗಾಣ, ಒಡಿಶಾ ಸೇರಿದಂತೆ ಯಾವ ರಾಜ್ಯಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
ಪ್ರಾದೇಶಿಕ ಪಕ್ಷಗಳ ಭೀತಿ ಎದುರಿಸುತ್ತಿರುವ ಫೋಬಿಯಾದಲ್ಲಿರುವ ಕಾಂಗ್ರೆಸ್; ಆಂಧ್ರ, ತೆಲಂಗಾಣ, ಒಡಿಶಾ ಸೇರಿದಂತೆ ಯಾವ ರಾಜ್ಯಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು. 6/6
— H D Kumaraswamy (@hd_kumaraswamy) May 16, 2022
ಯುಪಿಎ ಒಂದು ಹಾಗೂ ಎರಡು ಸರ್ಕಾರದಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಸಂಪುಟದಲ್ಲಿ ಅದೇ ಡಿಎಂಕೆಯ ಜತೆ 10 ವರ್ಷ ಅಧಿಕಾರದ ಸೋಪಾನ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್ʼಗೆ ಮಾತ್ರ ಇದೆ ಎನ್ನುವ ರಾಹುಲ್ ಗಾಂಧಿ ಅವರು, ತಮ್ಮ ಪಕ್ಷ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ ಮತ್ತು ದಾಕ್ಷಿಣ್ಯದಿಂದ ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.
ಮೈತ್ರಿ ಸರಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರಕಾರವನ್ನೂ ಮಾಡಿ ಹಿಂಬಾಗಿಲಿನಿಂದ ಆಪರೇಷನ್ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ? 5/6
— H D Kumaraswamy (@hd_kumaraswamy) May 16, 2022