2023 ವಿಧಾನಸಭಾ ಚುನಾವಣೆ: ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆ- ಅರುಣ್ ಸಿಂಗ್ ವಿಶ್ವಾಸ

2023 ರಾಜ್ಯ ವಿಧಾನಸಬಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published: 16th May 2022 11:14 AM  |   Last Updated: 16th May 2022 01:18 PM   |  A+A-


BJP National General Secretary Arun Singh adjusts the spectacles of a woman during a health camp in Chikkaballapur on Sunday. Health Minister Dr K Sudhakar looks on

ಚಿಕ್ಕಬಳ್ಳಾಪುರದಲ್ಲಿ ಭಾನುವಾರ ನಡೆದ ಆರೋಗ್ಯ ಶಿಬಿರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಮಹಿಳೆಯೊಬ್ಬರ ಕನ್ನಡಕವನ್ನು ಸರಿಪಡಿಸಿದರು.

The New Indian Express

ಬೆಂಗಳೂರು: 2023 ರಾಜ್ಯ ವಿಧಾನಸಬಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಗೆಲುವು ಸಾಧಿಸುವುದು ಸವಾಲಾಗಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ. 2023 ರ ಚುನಾವಣೆಗೆ ಮುಂಚಿತವಾಗಿ, ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವತ್ತ ಗಮನಹರಿಸುತ್ತಿದೆ. ಇತರೆ ಪಕ್ಷಗಳ ನಾಯಕರನ್ನು ಸೇರ್ಪಡೆಗೊಳಿಸಲಾಗುತ್ತದೆ. ಪ್ರಮುಖವಾಗಿ ಪಕ್ಷವು ದುರ್ಬಲವಾಗಿರುವ ಪ್ರದೇಶಗಳಲ್ಲಿ ಇತರೆ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.  

ಇದೇ ವೇಳೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಒಂದು ಪಿತೂರಿ ಪಕ್ಷವಾಗಿ ಮಾರ್ಪಟ್ಟಿದೆ ಮತ್ತು ಸುಳ್ಳು ನಿರೂಪಣೆಯನ್ನು ನೀಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್'ನ್ನು ಬೆಂಬಲಿಸುತ್ತಿರುವ ರಾಜ್ಯ ಗುತ್ತಿಗೆದಾರರ ಸಂಘವು ಕೆಲವು ಸದಸ್ಯರು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬಹುಮತಕ್ಕೆ, ರಾಜ್ಯ ರಾಜಕೀಯದ ದಿಕ್ಸೂಚಿ ಬದಲಾವಣೆಗೆ ಹಳೇ ಮೈಸೂರು ನಿರ್ಣಾಯಕ: ಮೂರು ಪಕ್ಷಗಳಿಗೂ ಇದು 'ರಾಯಲ್' ವಾರ್!

ನಾವು ಎಲ್ಲದಕ್ಕೂ ಉತ್ತರ ನೀಡಬೇಕಾಗಿಲ್ಲ. ಈ ರೀತಿ ಮಾಡಿದರೆ ಸಮಸ್ಯೆ ದೊಡ್ಡದಾಗುತ್ತದೆ. ನಾವು ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕಿದ್ದು, ಈ ಮೂಲಕ ಜನಪರ ಕೆಲಸಗಳನ್ನು ಮಾಡುತ್ತಿದ್ದೇವೆ. ಉತ್ತರಪ್ರದೇಶ, ಗೋವಾ, ಮಣಿಪುರ ಹಾಗೂ ಉತ್ತರಾಖಂಡದಲ್ಲೂ ಇದೇ ತಂತ್ರವನ್ನು ಬಳಸಿದ್ದೆವು. ಸರ್ಕಾರ ಮತ್ತು ಪಕ್ಷ ಅಭಿವೃದ್ಧಿಯತ್ತ ಗಮನಹರಿಸುತ್ತಿದ್ದು, ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಸರ್ಕಾರ ಮತ್ತು ಮುಖ್ಯಮಂತ್ರಿ ಬೊಮ್ಮಾಯಿಯವರ ವರ್ಚಸ್ಸು ಉತ್ತಮವಾಗಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳ ಕೆಲಸಗಳ ಬಗ್ಗೆ ಜನರಿಗೆ ತಿಳಿಯುವಂತೆ ಮಾಡಬೇಕು. ಸರ್ಕಾರವು ರಕ್ಷಣಾತ್ಮಕವಾಗಿಲ್ಲ, ಆದರೆ ಅದು ಆಕ್ರಮಣಕಾರಿಯಾಗಿರಲು ಸಾಧ್ಯವಿಲ್ಲ. ಜನರಿಗಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಅವರು, ರಾಜ್ಯದಲ್ಲಿ ಕೆಲವೊಮ್ಮೆ ಭ್ರಷ್ಟಾಚಾರ, ಕೆಲವೊಮ್ಮೆ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಶುರುವಾಗಿರುತ್ತದೆ. ಆದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಸಿಎಂ ಬೊಮ್ಮಾಯಿಯವರು ಉತ್ತಮ ಕೆಲಸ ಮಾಡುತ್ತಿದ್ದು, ಇದು ಹೀಗೆಯೇ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದಳಪತಿಗಳ ಪ್ರಾಬಲ್ಯದ ಹಳೇ ಮೈಸೂರಿಗೆ ಬಿಜೆಪಿ ಲಗ್ಗೆ: ಒಂದೊಂದಾಗಿ ಉದುರುತ್ತಿವೆ ಜೆಡಿಎಸ್ ವಿಕೆಟ್? ರೈತರ ವೋಟ್ ಬ್ಯಾಂಕ್ ಗೆ 'ಎಎಪಿ' ಕತ್ತರಿ!

ಕಾಂಗ್ರೆಸ್ ವಂಶಾಡಳಿತದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ಹೆಸರನ್ನು ವಿಧಾನಪರಿಷತ್ ಚುನಾವಣೆಗೆ ಬಿವೈ ಶಿಫಾರಸ್ಸು ಮಾಡುತ್ತಿರುವ ಕುರಿತು ಮಾತನಾಡಿ, ಪಕ್ಷಕ್ಕಾಗಿ ಕೆಲಸ ಮಾಡುವ ನಾಯಕರಿಗೆ ಅವಕಾಶ ನೀಡುವುದನ್ನು ನಿರಾಕರಿಸಲಾಗುವುದಿಲ್ಲ ಎಂದಿದ್ದಾರೆ.

ರಾಜ್ಯಸಭೆ ಚುನಾವಣೆ ಕುರಿತು ಮಾತನಾಡಿ, ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ ಮೂರು ಸ್ಥಾನಗಳ ಗೆಲ್ಲುವ ವಿಶ್ವಾಸ ನನಗಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಕಾರ್ಯತಂತ್ರಗಳ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.


Stay up to date on all the latest ರಾಜಕೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp