ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಿಸದ ಬಿಜೆಪಿ: 8ನೇ ಬಾರಿಗೆ ಬಸವರಾಜ ಹೊರಟ್ಟಿ ಆಯ್ಕೆ ಮಾಡಲು ಶಿಕ್ಷಕರ ಪ್ರತಿಜ್ಞೆ!

ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ.

Published: 24th May 2022 11:03 AM  |   Last Updated: 24th May 2022 12:51 PM   |  A+A-


Basavaraj Horatti

ಬಸವರಾಜ ಹೊರಟ್ಟಿ

The New Indian Express

ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಕರು ಈ ನಿರ್ಣಯ ಅಂಗೀಕರಿಸಿದರು.  ಕಳೆದ 42 ವರ್ಷಗಳಿಂದ ಹೊರಟ್ಟಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು. ಹೊರಟ್ಟಿಯವರು ಶಿಕ್ಷಕರ ಶ್ರೇಯೋಭಿವೃದ್ಧಿಗಾಗಿ ಮತ್ತು ಶಿಕ್ಷಣ ಕ್ಷೇತ್ರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಶಿಕ್ಷಕರಿಗೆ ಇನ್ನೂ ಹಲವು ಪ್ರಮುಖ ಸಮಸ್ಯೆಗಳಿದ್ದು ಅವಿನ್ನೂ ಬಗೆಹರಿದಿಲ್ಲ, ಹೀಗಾಗಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಏಕೈಕ ವ್ಯಕ್ತಿ ಹೊರಟ್ಟಿ ಅವರು ಎಂದು ಶಿಕ್ಷಕರು ಮನಗಂಡಿದ್ದು, ಹೊರಟ್ಟಿಗೆ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸುವಂತೆ ನಿರ್ಣಯದಲ್ಲಿ ಮನವಿ ಮಾಡಿದ್ದಾರೆ. ಶಿಕ್ಷಕರ ಈ ನಿರ್ಣಯಕ್ಕೆ ಕೃತಜ್ಞತೆ ಸಲ್ಲಿಸಿದ ಹೊರಟ್ಟಿ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವುದಾಗಿ ಹೇಳಿದರು.

ಇದನ್ನೂ ಓದಿ: ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಫೈನಲ್: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್; ಲಕ್ಷ್ಮಣ ಸವದಿಗೆ ಲಕ್!

ಬಿಜೆಪಿ ಇನ್ನೂ ಹೊರಟ್ಟಿ ಅವರನ್ನು ಅಧಿಕೃತ ಅಭ್ಯರ್ಥಿ ಎಂದು ಘೋಷಿಸದಿದ್ದರೂ ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಅವರು ಅವಳಿ ನಗರಗಳ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರಿಂದ ಬೆಂಬಲ ಕೋರಿದರು.


Stay up to date on all the latest ರಾಜಕೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp