ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್: ಯಡಿಯೂರಪ್ಪ ಪ್ರತಿಕ್ರಿಯೆ ಹೀಗಿದೆ...
ಬಹು ನಿರೀಕ್ಷೆ ಇಟ್ಟುಕೊಂಡಿದ್ದ ವಿಧಾನ ಪರಿಷತ್‌ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Published: 25th May 2022 01:55 PM | Last Updated: 25th May 2022 02:35 PM | A+A A-

ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು: ಬಹು ನಿರೀಕ್ಷೆ ಇಟ್ಟುಕೊಂಡಿದ್ದ ವಿಧಾನ ಪರಿಷತ್‌ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿಯಲ್ಲಿನ 'ಸಂತೋಷ ಕೂಟ' ಇಡೀ ಬಿಎಸ್ ವೈ ಕುಟುಂಬವನ್ನು ವನವಾಸಕ್ಕೆ ಕಳಿಸುವಲ್ಲಿ ಯಶಸ್ವಿಯಾಗಿದೆ: ಕಾಂಗ್ರೆಸ್ ವ್ಯಂಗ್ಯ
ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಮುಂದೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದು ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈಗೇಕೆ ಆ ಬಗ್ಗೆ ಚರ್ಚೆ ಎಂದು ಕೇಳಿದರು.
ಇದನ್ನೂ ಓದಿ: ಪಕ್ಷದ ನಿರ್ಧಾರ ಗೌರವಿಸಿ, ಸೌಜನ್ಯದಿಂದ ವರ್ತಿಸಿ: ಬೆಂಬಲಿಗರಿಗೆ ಬಿಎಸ್‌ವೈ ಪುತ್ರ ವಿಜಯೇಂದ್ರ ಮನವಿ
2023ರ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.