ಬಿಜೆಪಿಯ 'ನೀಲಿಗಣ್ಣಿನ ಹುಡುಗ' ಸವದಿಗೆ 2023ರ ಚುನಾವಣೆ ಟಿಕೆಟ್: ವಿಜಯೇಂದ್ರಗೆ ಪರ್ಯಾಯ ಲಿಂಗಾಯತ ನಾಯಕನಾಗಿ ಲಕ್ಷ್ಮಣ ಸವದಿ?

ಬಿಜೆಪಿ ನೀಲಿಗಣ್ಣಿನ ಹುಡುಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಪರಿಷತ್ ಚುನಾವಣೆ ಟಿಕೆಟ್ ನೀಡಿರುವುದು ಅವರ ಬೆಂಬಲಿಗರಲ್ಲಿ ಅಚ್ಚರಿ ಮೂಡಿಸಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸವದಿ ಸ್ಪರ್ದಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Published: 26th May 2022 01:54 PM  |   Last Updated: 26th May 2022 02:06 PM   |  A+A-


Laxman Savadi and vijayendra

ಲಕ್ಷ್ಮಣ ಸವದಿ ಮತ್ತು ವಿಜಯೇಂದ್ರ

The New Indian Express

ಬೆಳಗಾವಿ: ಬಿಜೆಪಿ ನೀಲಿಗಣ್ಣಿನ ಹುಡುಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಪರಿಷತ್ ಚುನಾವಣೆ ಟಿಕೆಟ್ ನೀಡಿರುವುದು ಅವರ ಬೆಂಬಲಿಗರಲ್ಲಿ ಅಚ್ಚರಿ ಮೂಡಿಸಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸವದಿ ಸ್ಪರ್ದಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿಗೆ ಮತ್ತೊಂದು ಅವಕಾಶ ನೀಡಿದೆ.

ಸವದಿಗೆ ಟಿಕೆಟ್ ನೀಡಿರುವ ಹಿಂದೆ ಬಿಜೆಪಿ ಹೈಕಮಾಂಡ್‌ನ ರಾಜಕೀಯ ಲೆಕ್ಕಾಚಾರ ಇದೆ ಎನ್ನಲಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಲಕ್ಷ್ಮಣ ಸವದಿ ಸಿದ್ಧತೆ ನಡೆಸಿದ್ದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರ ಲೆಕ್ಕಾಚಾರ ಕೆಳಗೆ ಮಾಡಿದ ಬಿಜೆಪಿ ಹೈ ಕಮಾಂಡ್ ಲಕ್ಷ್ಮಣ ಸವದಿ ಮತ್ತೊಂದು ಅವಧಿಗೆ ಅವಕಾಶ ಕೊಟ್ಟಿದೆ.

ಕಾಂಗ್ರೆಸ್‌ನಿಂದ ವಲಸೆ ಬಂದಿರುವ ಮಹೇಶ್ ಕುಮಟಳ್ಳಿಗೆ ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್ ನೀಡಲು ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಲು ಕಂಡಿದ್ದ ಲಕ್ಷ್ಮಣ ಸವದಿಯನ್ನು ವಿಧಾನಪರಿಷತ್‌ಗೆ ಕಳುಹಿಸಲಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದೆ.

ಇದನ್ನೂ ಓದಿ: ಟಿಕೆಟ್ ತಪ್ಪಿದ್ದಕ್ಕೂ ಬಿ.ಎಲ್ ಸಂತೋಷ್ ಗೂ ಯಾವುದೇ ಸಂಬಂಧವಿಲ್ಲ; ಮುಂದೆ ಎಂಎಲ್‌ಎ ಟಿಕೆಟ್ ಕೊಡ್ತಾರೆ:  ವಿಜಯೇಂದ್ರ

2023ರಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಮಹೇಶ್ ಕುಮಟಳ್ಳಿ ಸೇರಿದಂತೆ 17 ಪಕ್ಷಾಂತರವಾದ ಶಾಸಕರನ್ನು ಒಟ್ಟಿಗೆ ಇಟ್ಟುಕೊಳ್ಳಲು ಮತ್ತು ಅವರಲ್ಲಿ ಹಲವರು ಕಾಂಗ್ರೆಸ್ ಸೇರಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬಿಜೆಪಿಯು ಕುಮಟಳ್ಳಿಗೆ ಅಥಣಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಅಥಣಿಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಲಕ್ಷ್ಮಣ ಸವದಿ, ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮುಟಹಳ್ಳಿ ವಿರುದ್ಧ ಸೋಲನುಭವಿಸಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಆಪರೇಷನ್ ಕಮಲಕ್ಕೆ ಸಿಲುಕಿ ಕಾಂಗ್ರೆಸ್‌ನ ಕುಮುಟಳ್ಳಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು.

ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಿದ್ದ ಮಹೇಶ್ ಕುಮುಟಳ್ಳಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದರು. ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲೂ ಮಹೇಶ್ ಕುಮುಟಳ್ಳಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ.

ಸವದಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಏಕಾಏಕಿ ಏಕೆ ನಿರ್ಧರಿಸಿತು ಎಂಬುದು ಪಕ್ಷದ ಹಲವು ಮುಖಂಡರನ್ನು ಗೊಂದಲಕ್ಕೆ ತಳ್ಳಿದೆ. ಬಿ ವೈ ವಿಜಯೇಂದ್ರ (ಲಿಂಗಾಯತ ಕೂಡ) ಅವರಿಗೆ ಟಿಕೆಟ್ ನಿರಾಕರಿಸಿ ಬಿಜೆಪಿ ಮತ್ತೊಬ್ಬ ಲಿಂಗಾಯತ ನಾಯಕ (ಲಿಂಗಾಯತ-ಗಾಣಿಗ) ಸವದಿ ಅವರನ್ನು ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪರನ್ನು ಮೂಲೆಗೆ ಎತ್ತಿ ಬಿಸಾಡುವ ತಂತ್ರಗಾರಿಕೆ: ಬಿಜೆಪಿಯದ್ದು ಮಹಿಳಾ ಮನ್ನಣೆ ಅಲ್ಲ, ಬಿಎಸ್ ವೈ ಮುಕ್ತ ಬಿಜೆಪಿಯ ಚಿತಾವಣೆ!

ಕಳೆದ ಕೆಲವು ವರ್ಷಗಳಿಂದ, ಬಿಜೆಪಿ ನಾಯಕತ್ವವು ಯಡಿಯೂರಪ್ಪ ವಿರುದ್ಧ ಪಕ್ಷದಲ್ಲಿ ಸವದಿ ಅವರನ್ನು ಲಿಂಗಾಯತ ನಾಯಕ ಎಂದು ಬಿಂಬಿಸುತ್ತಿತ್ತು. ಈಗ ವಿಜಯೇಂದ್ರಗೆ ಪರ್ಯಾಯವಾಗಿ ಸವದಿ ಅವರನ್ನು ಬೆಳೆಸಲು ಬಿಜೆಪಿ  ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಅಥಣಿಯಿಂದ ಸವದಿ ಅವರನ್ನು ಕಣಕ್ಕಿಳಿಸಲು ಪಕ್ಷ ಉತ್ಸುಕವಾಗಿದೆ. ಅವರು ಹಿರಿಯ ನಾಯಕರಾಗಿರುವ ಕಾರಣದಿಂದ ಪಕ್ಷವು ಅವರನ್ನು ಪರಿಷತ್ತಿನ ಚುನಾವಣೆಯಲ್ಲಿ ಕಣಕ್ಕಿಳಿಸಿದೆ. ಯಾವುದೇ ಸಂದರ್ಭದಲ್ಲೂ ಅವರು ವಿಧಾನಸೌಧದಲ್ಲಿ ಉಳಿಯುವಂತೆ ಮಾಡಲು ಪಕ್ಷವು ಬಯಸಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಾಂತರಗೊಂಡ ಬಹುತೇಕ ಶಾಸಕರನ್ನು ಕಣಕ್ಕಿಳಿಸಲು ಬಿಜೆಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ ಎಂದು ಹೇಳಲಾಗುತ್ತದೆ. ಆದರೆ ಚುನಾವಣೆ ಬಂದಾಗ ಬಿಜೆಪಿ ನಾಯಕತ್ವವು  ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು  ಎಂದು ಮೂಲಗಳು ತಿಳಿಸಿವೆ.


Stay up to date on all the latest ರಾಜಕೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp