ಜೆಡಿಎಸ್ ಅತೃಪ್ತ ಶಾಸಕರಿಗೆ ಎಚ್.ಡಿ ಕುಮಾರಸ್ವಾಮಿ ಕರೆ: ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತೇಪೆ ಹಚ್ಚಲು ಯತ್ನ!
2023ರ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆಯಲು ಸಿದ್ಧರಾಗಿರುವ ಅತೃಪ್ತ ಶಾಸಕರನ್ನು ಸೆಳೆಯಲು ಜೆಡಿಎಸ್ ಮತ್ತು ಪಕ್ಷದ ಮುಖಂಡ ಎಚ್ಡಿ ಕುಮಾರಸ್ವಾಮಿ ಪ್ರಯತ್ನ ಮುಂದುವರಿಸಿದ್ದಾರೆ.
Published: 26th May 2022 01:02 PM | Last Updated: 26th May 2022 01:40 PM | A+A A-

ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆಯಲು ಸಿದ್ಧರಾಗಿರುವ ಅತೃಪ್ತ ಶಾಸಕರನ್ನು ಸೆಳೆಯಲು ಜೆಡಿಎಸ್ ಮತ್ತು ಪಕ್ಷದ ಮುಖಂಡ ಎಚ್ಡಿ ಕುಮಾರಸ್ವಾಮಿ ಪ್ರಯತ್ನ ಮುಂದುವರಿಸಿದ್ದಾರೆ.
ವಿಜಯೇಂದ್ರಗೆ ಎಂಎಲ್ಸಿ ಟಿಕೆಟ್ ನಿರಾಕರಿಸಿದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶವನ್ನು ಪಕ್ಷ ಬಿಡಲು ನಿರ್ಧರಿಸಿರುವ ಶಾಸಕರಿಗೆ ರವಾನಿಸಲು ಕುಮಾರಸ್ವಾಮಿ ಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 3 ರಂದು ನಡೆಯಲಿರುವ ಎಂಎಲ್ಸಿ ಚುನಾವಣೆ ಮತ್ತು ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ ಕುಮಾರಸ್ವಾಮಿ ಅವರು ದೂರವಾಣಿಯಲ್ಲಿ ಶಾಸಕರೊಂದಿಗೆ ಮಾತನಾಡಿ ತೇಪೆ ಹಾಕಲು ಪ್ರಯತ್ನಿಸುತ್ತಿದ್ದಾರೆ.
ಮಾಜಿ ಸಚಿವ, ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್, ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಮತ್ತು ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ಅವರು ಜೆಡಿಎಸ್ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆಯ . ಇವರೆಲ್ಲ ‘ಜನತಾ ಜಲಧಾರೆ’ ಕಾರ್ಯಕ್ರಮಗಳಿಗೆ ಗೈರಾಗಿದ್ದರು.
ಕಾರ್ಯಕ್ರಮಗಳಿಗೆ ಹಾಜರಾಗದ ಶಾಸಕರನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಬ್ಬರೂ ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.
ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಿರ್ಧರಿಸಿರುವ ಕುಮಾರಸ್ವಾಮಿ ಹಿಂದಿನದನ್ನು ಮರೆತು ಮುಂದುವರಿಯಲು ಬಯಸಿದ್ದಾರೆ" ಎಂದು ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.
ಇತ್ತೀಚೆಗೆ ಮಾಜಿ ಸಚಿವ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಮೊಮ್ಮಗಳ ನಿಧನಕ್ಕೆ ಸಂತಾಪ ಸೂಚಿಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಜಿಟಿ ದೇವೇಗೌಡರ ಮನೆಗೆ ಭೇಟಿ ನೀಡಿದ್ದಾರೆ. ಆದರೆ ಜೆಡಿಎಸ್ನ ಕೆಲವು ಒಕ್ಕಲಿಗ ನಾಯಕರು ಮತ್ತವರ ಮಕ್ಕಳಿಗೆ ಟಿಕೆಟ್ ಖಚಿತವಾಗಿಲ್ಲ.
ಇದನ್ನೂ ಓದಿ: ಬಿ.ಎಲ್ ಶಂಕರ್ ಕಾಂಗ್ರೆಸ್ ಗೆ ಹೋಗಿ ಏನಾದ್ರು? ಪಕ್ಷಕ್ಕೆ ಡ್ಯಾಮೇಜ್ ಮಾಡಲು ಹೋದರೆ ಅವರೇ ಬೀದಿಪಾಲಾಗುತ್ತಾರೆ: ಎಚ್ ಡಿಕೆ
ಕುಟುಂಬಕ್ಕೆ ಒಂದೇ ಟಿಕೆಟ್ ನೀಡುವುದಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ನ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಹೀಗಾಗಿ ಜಿ ಟಿ ದೇವೇಗೌಡರು ಜೆಡಿಎಸ್ ನಲ್ಲೇ ಉಳಿಯುವ ಸಾಧ್ಯತೆಯಿದೆ.
ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿ ಶೀತಲ ಸಮರ ಕಾಂಗ್ರೆಸ್ ಸೇರ್ಪಡೆಯಾಗಬೇಕೆಂದು ನಿರ್ಧರಿಸಿದ್ದವರ ಮೇಲೆ ಪರಿಣಾಮ ಬೀರುತ್ತಿದೆ. ಎಚ್.ಡಿ ಕುಮಾರಸ್ವಾಮಿ ಕರೆ ಮಾಡಿದ್ದಾರೆ ಆದರೆ ನಾನು ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಜೆಡಿಎಸ್ ಶಾಸಕರೊಬ್ಬರು ತಿಳಿಸಿದ್ದಾರೆ.