ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ದತ್ತುಪುತ್ರನಂತೆ ನೋಡುತ್ತಿದೆ: ಸಿಎಂ ಇಬ್ರಾಹಿಂ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ದತ್ತು ಪುತ್ರನಂತೆ ನೋಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಗುರುವಾರ ಹೇಳಿದ್ದಾರೆ.
Published: 27th May 2022 08:25 AM | Last Updated: 27th May 2022 01:22 PM | A+A A-

ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್ ಕೆ ರಾಮು ಅವರು, ಪಕ್ಷದ ಅಧ್ಯಕ್ಷ ಸಿ ಎಂ ಇಬ್ರಾಹಿಂ, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರೊಂದಿಗೆ ಗುರುವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.
ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ದತ್ತು ಪುತ್ರನಂತೆ ನೋಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಗುರುವಾರ ಹೇಳಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಮು ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿರುವ ಅವರು, ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ, ಆ ಪಕ್ಷದ ಸಂಸ್ಕೃತಿಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಒಂಬತ್ತು ತಿಂಗಳಲ್ಲಿ ಬಿಜೆಪಿ ಆಡಳಿತ ಕೊನೆಗೊಳ್ಳಲಿದ್ದು, ಮುಂದಿನ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ ಎಚ್.ಡಿ ದೇವೇಗೌಡ ಅವರು ಸಿಎಂ ಆಗುತ್ತಾರೆಂದು ಹೇಳಿದ್ದೆ. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದಿದ್ದು ನಿಜವಾಯಿತು. ಈಗ ನುಡಿದಂತೆ ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: 2023ರ ವಿಧಾನಸಭೆ ಚುನಾವಣೆ: 2013 ರಂತೆ ಕುರುಬ ಕಮಾಂಡರ್ ಆಗಿ ಸಿದ್ದರಾಮಯ್ಯ ಸಾರಥ್ಯ!
ಜೆಡಿಎಸ್ ರಾಜ್ಯಾದ್ಯಂತ ಭಾವನಾತ್ಮಕ ಸಂಬಂಧ ಹೊಂದಿರುವ ಕುಟುಂಬವಿದ್ದಂತೆ. ಪಕ್ಷಕ್ಕೆ ಯಾವುದೇ ನಿರ್ಧಾರ ಕೈಗೊಳ್ಳುವ ಶಕ್ತಿ ಇದೆ, ಆದರೆ, ನರೇಂದ್ರ ಮೋದಿ ಅಥವಾ ಸೋನಿಯಾ ಗಾಂಧಿ ಅವರಿಂದ ಅದು ಸಾಧ್ಯವಾಗಿಲ್ಲ. ದೇವೇಗೌಡರಿಗೆ ರಾಜ್ಯದ ನಾಡಿಮಿಡಿತ ಗೊತ್ತಿದೆ, ಯಾವ ಬೆಳೆ ಬೆಳೆಯಬೇಕು ಎಂಬುದು ಗೊತ್ತಿದೆ. ಆದರೆ, ಮೋದಿಗೆ ವಿಷಯಗಳ ಅರಿವಿಲ್ಲ. ನಾ ಖೌಂಗಾ ನಾ ಖಾನೆ ದುಂಗಾ (ನಾನು ಲಂಚ ತೆಗೆದುಕೊಳ್ಳುವುದಿಲ್ಲ ಅಥವಾ ನನ್ನ ಸಹೋದ್ಯೋಗಿಗಳಿಗೆ ಲಂಚ ತೆಗೆದುಕೊಳ್ಳಲು ಬಿಡುವುದಿಲ್ಲ) ಎಂಬ ಪ್ರಧಾನಿಯವರ ಹೇಳಿಕೆಗೆ ವಿರುದ್ಧವಾಗಿ ಸರ್ಕಾರದಲ್ಲಿ ಅತಿರೇಕದ ಭ್ರಷ್ಟಾಚಾರ ನಡೆಯುತ್ತಿರುವುದು ದುರದೃಷ್ಟಕರವಾಗಿದೆ ಎಂದರು.