ವಿಜಯದಶಮಿ ವೇಳೆಗೆ ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯವಾಗಿ 'ತೃತೀಯ ರಾಜಕೀಯ ಶಕ್ತಿ' ಉದಯ: ಕೆಸಿಆರ್

ವಿಜಯದಶಮಿ  ವೇಳೆಗೆ (ಅಕ್ಟೋಬರ್ 5) ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾದ ತೃತೀಯ ರಾಜಕೀಯ ಶಕ್ತಿ ರೂಪಿಸುವುದಾಗಿ ಘೋಷಿಸಿದ್ದಾರೆ.

Published: 27th May 2022 09:18 AM  |   Last Updated: 27th May 2022 01:23 PM   |  A+A-


ದೇವೇಗೌಡರ ನಿವಾಸದಲ್ಲಿ ತೆಲಂಗಾಣ ಸಿಎಂ ಕೆಸಿಆರ್

Telangana CM K C Rao with JD(S) leaders H D Deve Gowda and H D Kumaraswamy at thier residence

The New Indian Express

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸುವುದು ಮತ್ತು ತೃತೀಯ ರಂಗದ ಕನಸು ಹೊತ್ತು ದೇಶ ಸುತ್ತುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಸುಧೀರ್ಘವಾಗಿ ಚರ್ಚಿಸಿದರು. ವಿಜಯದಶಮಿ  ವೇಳೆಗೆ (ಅಕ್ಟೋಬರ್ 5) ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾದ ತೃತೀಯ ರಾಜಕೀಯ ಶಕ್ತಿ ರೂಪಿಸುವುದಾಗಿ ಘೋಷಿಸಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ದೇಶದಲ್ಲಿ ಅತೀ ಶೀಘ್ರದಲ್ಲೇ ಬದಲಾವಣೆಯಾಗಲಿದೆ ಹಾಗೂ ದೇಶವೂ ಬದಲಾಗಲಿದೆ. ಎರಡು-ಮೂರು ತಿಂಗಳು ಕಾಯಿರಿ ಎಂದು ಕೆಸಿಆರ್‌ ಅವರು ಸೂಚ್ಯವಾಗಿ. ದೇಶದ ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಬದಲಾವಣೆ ತರಬೇಕಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿದರು.

ಹೈದರಾಬಾದ್‌ನಿಂದ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಳಿದ ಕೆಸಿಆರ್‌ ಅವರು ನೇರವಾಗಿ ದೇವೇಗೌಡರ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು. ಬಳಿಕ ತಮ್ಮ ನಿವಾಸಕ್ಕೆ ಆಗಮಿಸಿದ ಕೆಸಿಆರ್‌ ಅವರನ್ನು ದೇವೇಗೌಡರು ಆತ್ಮೀಯವಾಗಿ ಬರಮಾಡಿಕೊಂಡರು.

ಮೂರನೇ ಶಕ್ತಿ ಇಂದು ಅನಿವಾರ್ಯವಾಗಿದೆ. ಆಗ ತೆಗೆದುಕೊಂಡ ನಿರ್ಣಯ ಬೇರೆ, ಈಗ ತೆಗೆದುಕೊಳ್ಳುವ ನಿರ್ಣಯ ಬೇರೆ. ದೇಶದ ಇತಿಹಾಸಕ್ಕೆ ಇದು ಫೌಂಡೇಷನ್ ಹಾಕಲಿದೆ. ದೇಶ ಹಲವು ಸಮಸ್ಯೆ ಎದುರಿಸುತ್ತಿದೆ. ಜನರ ಸಮಸ್ಯೆ ಮುಂದಿಟ್ಟುಕೊಂಡೇ ಹೋಗುತ್ತೇವೆ.

ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾಗದೆ ಬೆಂಗಳೂರಿಗೆ ದೌಡಾಯಿಸಿದ ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಆಕ್ರೋಶ!

ದೇಶದಲ್ಲಿ ಹಲವು‌ ಸಂಪನ್ಮೂಲಗಳಿದ್ದರೂ ಇವತ್ತಿಗೂ ಹಲವು‌ ಸಮಸ್ಯೆಗಳ ಬಗ್ಗೆ ಚರ್ಚೆ, ಪರಿಹಾರ ಇಲ್ಲ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನು ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಯುವಕರಿಗೆ ಉದ್ಯೋಗ ಕೊಟ್ರಾ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ" ಎಂದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೆ.ಚಂದ್ರಶೇಖರರಾವ್ ಹರಿಹಾಯ್ದರು.

ದೇಶದಲ್ಲಿ ಅತೀ ಶೀಘ್ರದಲ್ಲೇ ಬದಲಾವಣೆಯಾಗಲಿದೆ ಹಾಗೂ ದೇಶವೂ ಬದಲಾಗಲಿದೆ. ಎರಡು-ಮೂರು ತಿಂಗಳು ಕಾಯಿರಿ ಎಂದು ಕೆಸಿಆರ್‌ ಅವರು ಸೂಚ್ಯವಾಗಿ. ದೇಶದ ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಬದಲಾವಣೆ ತರಬೇಕಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿದರು.

ಮುಂಬರುವ ರಾಷ್ಟ್ರಪತಿ ಚುನಾವಣೆ ವೇಳೆಗೆ ಪರ್ಯಾಯ ಶಕ್ತಿ ರಚಿಸುವಂತೆ ಚಂದ್ರಶೇಖರ್ ರಾವ್ ಅವರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಜುಲೈ ಅಂತ್ಯದಲ್ಲಿ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರಅವಧಿ ಅಂತ್ಯವಾಗಲಿದೆ, ಹೀಗಾಗಿ ರಾಷ್ಟ್ರಪತಿ ಚುನಾವಣೆ ಮುಂದಾಳತ್ವವನ್ನು ದೇವೇಗೌಡರು ವಹಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.


Stay up to date on all the latest ರಾಜಕೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp