ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡದ ಕೇಂದ್ರ ಸರ್ಕಾರ: ಕಾಂಗ್ರೆಸ್ ಆರೋಪ

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡದೆ ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಸಿದ್ದರಾಮಯ್ಯ ಮತ್ತಿತರರು
ಸಿದ್ದರಾಮಯ್ಯ ಮತ್ತಿತರರು

ಬೆಂಗಳೂರು: ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡದೆ ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೇಂದ್ರದ ವಿರುದ್ಧ ಟೀಕೆ ಮಾಡಿರುವ ಕಾಂಗ್ರೆಸ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ದೊರಕಿಸಲು ಸಮಿತಿ ರಚಿಸಿ ಬಾವುಟಕ್ಕೆ ಅನುಮೋದನೆ ನೀಡಿ, ಕೇಂದ್ರದ ಮಾನ್ಯತೆಗೆ ಕಳುಹಿಸಿತ್ತು. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಪ್ರಸ್ತಾವನೆ ತಿರಸ್ಕರಿಸಿ, ನಮ್ಮ ಭಾವನೆಗಳಿಗೆ ಧಕ್ಕೆ ತಂದಿತು ಎಂದು ಹೇಳಿದೆ.

ಕೇಂದ್ರೀಯ ಪರೀಕ್ಷೆಗಳಲ್ಲಿ ಹಿಂದಿ ಇಂಗ್ಲೀಷ್ ಗೆ ಮಾತ್ರ ಮಣೆ. ಕನ್ನಡಕ್ಕೆ ಇಲ್ಲ ಮಾನ್ಯತೆ. ಕನ್ನಡ ಮತ್ತು ಕನ್ನಡಿಗರಿಗೆ ಆಗುತ್ತಿರುವ ದ್ರೋಹ '' ಕೋಟಿ ಕಂಠ ಗಾಯನದಿಂದ ಪರಿಹಾರವಾಗುವುದೇ? ತೋರಿಕೆಗೆ ಕನ್ನಡ, ಹಿಂದಿ ಹೇರಿಕೆ ಮೇಲೆ ಪ್ರೀತಿ. ಕನ್ನಡ ವಿರೋಧಿ ಬಿಜೆಪಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com