ಭಾರತ್ ಜೋಡೋ ಬಳಿಕ ರಾಜ್ಯದಾದ್ಯಂತ ಬಸ್ ಯಾತ್ರೆಗೆ ಕಾಂಗ್ರೆಸ್ ಮುಂದು: ಉತ್ತರದೆಡೆಗೆ ಸಿದ್ದು, ಡಿಕೆಶಿ ದಕ್ಷಿಣ?

2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಭಾರತ್ ಜೋಡೋ ಬಳಿಕ ಇದೀಗ ಬಸ್ ಯಾತ್ರೆ ಆರಂಭಿಸಲು ಮುಂದಾಗಿದ್ದು, ಈ ಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಪಾಲ್ಗೊಳ್ಳಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಭಾರತ್ ಜೋಡೋ ಬಳಿಕ ಇದೀಗ ಬಸ್ ಯಾತ್ರೆ ಆರಂಭಿಸಲು ಮುಂದಾಗಿದ್ದು, ಈ ಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಪಾಲ್ಗೊಳ್ಳಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಉತ್ತರದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ಡಿಕೆ ಶಿವಕುಮಾರ್ ದಕ್ಷಿಣ ಭಾಗಗಳಲ್ಲಿ ಯಾತ್ರೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.

ಈ ಸಂಬಂಧ ಶೀಘ್ರದಲ್ಲೇ ಸಭೆ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ, ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಇತರೆ ನಾಯಕರು ನಾಯಕರಿಗೆ ಜವಾಬ್ದಾರಿ ನೀಡುವ ಕುರಿತು ನಿರ್ಧರಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಡಿಸೆಂಬರ್‌ನಲ್ಲಿ ಆರಂಭವಾಗಲಿರುವ ಬಸ್ ಯಾತ್ರೆ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ಈ ಸಂಬಂಧ ಪಕ್ಷದ ನಾಯಕತ್ವ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ನಾಯಕರಾಗಿದ್ದು, ಆ ಭಾಗಗಳಲ್ಲಿ ಅವರ ಅಸ್ತಿತ್ವ ಹೆಚ್ಚಿದ್ದು, ಬಾದಾಮಿಯ ಶಾಸಕರಾಗಿರುವ ಕಾರಣ ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಜವಾಬ್ದಾರಿ ನೀಡುವಂತೆ ಪಕ್ಷದ ಕೆಲವರು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಕ್ಕಲಿಗ ಜನಾಂಗದವರಾಗಿರುವ ಕಾರಣ ಶಿವಕುಮಾರ್ ಅವರು ದಕ್ಷಿಣ ಭಾಗದ ಪ್ರವಾಸ ಮಾಡಬೇಕೆಂದು ಪಕ್ಷದ ಮುಖಂಡರು ಬಯಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರಿಗೆ ಇಂತಹ ಪ್ರಸ್ತಾಪದ ಬಗ್ಗೆ ತಿಳಿದಿದೆ, ಮುಂದಿನ ಕೆಲವು ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಲೀಂ ಅವರು ಮಾಹಿತಿ ನೀಡಿದ್ದಾರೆ.

ಪಕ್ಷದ ಒಗ್ಗಟ್ಟು ಮುಖ್ಯವಾಗಿದ್ದು, ಜಿಲ್ಲೆಗಳಲ್ಲಿ ಸಂಚರಿಸುವಾಗ ಇಬ್ಬರೂ ನಾಯಕರು ಜೊತೆಗಿರಬೇಕು. ಈ ಹಿಂದೆ ಕೆಲವು ಅನುಯಾಯಿಗಳು ಸಿದ್ದರಾಮಯ್ಯ ಒಬ್ಬರೇ ಬಸ್ ಯಾತ್ರೆಗೆ ಹೋಗಬೇಕೆಂದು ಬಯಸಿದ್ದರು, ಆದರೆ ಪಕ್ಷದ ನಾಯಕತ್ವ ಇಬ್ಬರೂ ಅದನ್ನು ಮಾಡಬೇಕೆಂದು ನಿರ್ಧರಿಸಿತು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com