2023 ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ: ಪ್ರಧಾನಿ ಮೋದಿಯಿಂದ ವಿವಿಧ ಸಮುದಾಯಗಳನ್ನು ಸೆಳೆಯುವ ಪ್ರಯತ್ನ

ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಬಂದು ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕೊಂಡಾಡಿದ್ದರೂ, 2023ರ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ಅವರ ಭೇಟಿ ರಾಜಕೀಯ ಅಂಶಗಳನ್ನು ಒಳಗೊಂಡಿದೆ. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಬಂದು ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕೊಂಡಾಡಿದ್ದರೂ, 2023ರ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ಅವರ ಭೇಟಿ ರಾಜಕೀಯ ಅಂಶಗಳನ್ನು ಒಳಗೊಂಡಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ಪ್ರತಿಮೆ ಅನಾವರಣ, ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ, ಓನಕೆ ಒಬಮ್ಮ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ  ಒಕ್ಕಲಿಗ, ಕುರುಬ, ಎಸ್ ಟಿ ನಾಯಕ ಮತ್ತು ದಲಿತ ಸಮುದಾಯಗಳನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಈ ಐತಿಹಾಸಿಕ ಪುರುಷರು ವಿವಿಧ ಸಮುದಾಯಗಳನ್ನು ಪ್ರತಿನಿಧಿಸುತ್ತಾರೆ. ಈ ಚುನಾವಣೆಯಲ್ಲಿ ಈ ಸಮುದಾಯದ ಕೆಲವೊಂದು ವರ್ಗಗಳನ್ನು ಸೆಳೆಯಬಹುದು. ಆದರೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿದ್ದರಾಮಯ್ಯ, ಬಿ.ಶ್ರೀರಾಮುಲು ಮತ್ತು ಮಲ್ಲಿಕಾರ್ಜುನ ಖರ್ಗೆ ಈ ಸಮುದಾಯದ ಪ್ರಮುಖ ಐಕಾನ್ ಗಳಾಗಿದ್ದಾರೆ ಎಂದು ರಾಜಕೀಯ ಪಂಡಿತರು ಹೇಳುತ್ತಾರೆ. 

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ ನಂತರ ಅವರನ್ನು ವಿಶ್ವ ನಾಯಕ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಹಾಡಿ ಹೊಗಳಿದ್ದಾರೆ. ಕೆಂಪೇಗೌಡರಂತೆ ಮೋದಿ ನಾಯಕತ್ವದ ಕೌಶಲ್ಯ ಪ್ರದರ್ಶಿಸುತ್ತಿದ್ದಾರೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಆರ್ಥಿಕತೆಯನ್ನು ಮುಂಚೂಣಿಗೆ ತಂದಿದ್ದಾರೆ. ಕೆಂಪೇಗೌಡರು ಬೆಂಗಳೂರು ಪ್ರಗತಿಗಾಗಿ ಜನರನ್ನು ಒಟ್ಟುಗೂಡಿಸಿದರೆ, ಮೋದಿ ಅವರು ಕೌಶಲ್ಯ, ಮಾನವ ಸಂಪನ್ಮೂಲಗಳ ಕೌಶಲ್ಯ ಮತ್ತು ಪುನರ್ ಕೌಶಲ್ಯಗಳ ಮಹತ್ವವನ್ನು ಅರಿತಿದ್ದಾರೆ ಎಂದರು. 

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್, ಕೆಂಪೇಗೌಡರು ತಲೆಯಲ್ಲಿ ಹಾಕುತ್ತಿದ್ದಂತೆ ವಿಶೇಷವಾದ ಶಿರಸ್ತ್ರಾಣವನ್ನು ಮೋದಿಗಾಗಿ ತಯಾರಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೋದಿಯವರ ತಲೆಯ ಮೇಲೆ ಪೇಟಾ ಇಟ್ಟರು. ಆದರೆ ಅದನ್ನು ಸರಿಯಾಗಿ ಧರಿಸದೇ ಇರುವುದನ್ನು ಗಮನಿಸಿದ ನಿರ್ಮಲಾನಂದನಾಥ ಸ್ವಾಮೀಜಿ, ಕೆಂಪೇಗೌಡರು ಧರಿಸುತ್ತಿದ್ದ ಶಿರಾಸ್ತ್ರಾಣವನ್ನು ಕರಾರುವಕ್ಕಾಗಿ ತಲೆಗೆ ಹಾಕಿ ಅದರ ಮಹತ್ವವನ್ನು ಪ್ರಧಾನಿಗೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com