ವೋಟರ್ ಐಡಿ ಹಗರಣ: ಕಾಂಗ್ರೆಸ್ ನಾಯಕರಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ

ಮತದಾರರ ಸಮೀಕ್ಷೆ ಹೆಸರಲ್ಲಿ ಜನರ ಮಾಹಿತಿಯನ್ನು ಬಿಜೆಪಿ ಸರ್ಕಾರ ಕದಿಯುವ ಕೆಲಸ ಮಾಡಿದೆ, ಇದರ ವಿರುದ್ಧ ಸಿಎಂ ಬೊಮ್ಮಾಯಿ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಇಂದು ಗುರುವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ
ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ
Updated on

ಬೆಂಗಳೂರು: ಮತದಾರರ ಸಮೀಕ್ಷೆ ಹೆಸರಲ್ಲಿ ಜನರ ಮಾಹಿತಿಯನ್ನು ಬಿಜೆಪಿ ಸರ್ಕಾರ ಕದಿಯುವ ಕೆಲಸ ಮಾಡಿದೆ, ಇದರ ವಿರುದ್ಧ ಸಿಎಂ ಬೊಮ್ಮಾಯಿ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಇಂದು ಗುರುವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರನ್ನು ಸುದ್ದಿಗೋಷ್ಠಿ ಬಳಿಕ ಭೇಟಿ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ.

ಖಾಸಗಿ ಸಂಸ್ಥೆಯು ಜನರ ಮತದಾನದ ದಾಖಲೆ ಮಾಹಿತಿಗಳನ್ನು ಸಂಗ್ರಹಿಸಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಆಯುಕ್ತ ಮತ್ತು ಇತರ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com