ಬಿಜೆಪಿಯ 'ನವಶಕ್ತಿ' ಸಮಾವೇಶಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪ್ಲ್ಯಾನ್!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಡಿದ್ದು ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಠ ಸಮುದಾಯದ ನವಶಕ್ತಿ ಸಮಾವೇಶಕ್ಕೆ ಸಜ್ಜಾಗಿರುವಂತೆಯೇ, ಇದೇ ಅಜೆಂಡಾದೊಂದಿಗೆ ಡಿಸೆಂಬರ್ ನಲ್ಲಿ ಎಸ್ -ಸಿ, ಎಸ್ ಟಿ ಸಮಾವೇಶ ನಡೆಸಲು ಕಾಂಗ್ರೆಸ್ ಯೋಜಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಡಿದ್ದು ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಠ ಸಮುದಾಯದ ನವಶಕ್ತಿ ಸಮಾವೇಶಕ್ಕೆ ಸಜ್ಜಾಗಿರುವಂತೆಯೇ, ಇದೇ ಅಜೆಂಡಾದೊಂದಿಗೆ ಡಿಸೆಂಬರ್ ನಲ್ಲಿ ಎಸ್ -ಸಿ, ಎಸ್ ಟಿ ಸಮಾವೇಶ ನಡೆಸಲು ಕಾಂಗ್ರೆಸ್ ಯೋಜಿಸಿದೆ.  

ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮತ್ತು ಮಾಜಿ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ ಅವರನ್ನು ಭೇಟಿ ಮಾಡಿ ನೀಡಿರುವಂತೆ ಸಲಹೆಯಂತೆ, ಕಾರ್ಯಕ್ರಮದ ರೂಪುರೇಷೆಗಾಗಿ ನಾಡಿದ್ದು,ಪೂರ್ವಭಾವಿ ಸಭೆ ಕರೆಯಲಾಗಿದೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ 7 ರಷ್ಟು ಮೀಸಲಾತಿಯನ್ನು ಹೆಚ್ಚಿಸಿದೆ. ಈಗ ಈ ನಿರ್ಧಾರವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವ ಜವಾಬ್ದಾರಿ ಕೇಂದ್ರದ ಮೇಲಿದೆ.

 ಬಿಜೆಪಿಯ ಎಸ್ ಟಿ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಬುಡಕಟ್ಟು ಸಚಿವರು ಹಾಗೂ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಪ್ರಭಾಕರ ಮೈಸನಾಯಕ ಹೇಳಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com