2023 ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಒಂದು ಅವಕಾಶ ಕೊಡಿ: ದೇವೇಗೌಡ

2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ಗೆ ಒಂದು ಅವಕಾಶ ಕೊಡಿ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಮುಳಬಾಗಲಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೀಪ ಬೆಳಗಿಸಿದರು.
ಮುಳಬಾಗಲಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೀಪ ಬೆಳಗಿಸಿದರು.

ಮುಳಬಾಗಿಲು: 2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ಗೆ ಒಂದು ಅವಕಾಶ ಕೊಡಿ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

ಮುಳಬಾಗಲಿನಲ್ಲಿ ನಡೆದ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕಕ್ಕೆ ಅದರಲ್ಲೂ ರೈತರಿಗಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಇದೇ ರೀತಿಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಇನ್ನೂ ಹಲವು ಕಾರ್ಯಕ್ರಮಗಳನ್ನು ಪ್ರಚಾರ ಮಾಡಲಿದ್ದಾರೆಂದು ಹೇಳಿದರು.

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ಜೆಡಿಎಸ್ ಬದಲಾವಣೆಯನ್ನು ಬಯಸುತ್ತದೆ ಎಂದು ತಿಳಿಸಿದರು.

ಕುಮಾರಸ್ವಾಮಿಯವರು ಮಾತನಾಡಿ, ಬಹುಮತದೊಂದಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಆರೋಗ್ಯ, ಶಿಕ್ಷಣ, ಇತರೆ ಅಭಿವೃದ್ಧಿ ಒದಗಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲಿದೆ ಎಂದರು. ಅಲ್ಲದೆ, ಪಕ್ಷ ಹಿತಾಸಕ್ತಿಯನ್ನು ಎತ್ತಿ ಹಿಡಿಯಲು ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ದೇವೇಗೌಡರಿಗೆ ಭರವಸೆ ನೀಡಿದರು.

ಬಿಜೆಪಿ ಮತ್ತು ಕಾಂಗ್ರೆಸ್‌ನಂತೆ ಜೆಡಿಎಸ್‌ ಪರ್ಸೆಂಟೇಜ್‌ ಕಮಿಷನ್‌ ಆರೋಪಗಳ ವಿರುದ್ಧ ನಾವು ಹೋರಾಟ ನಡೆಸುತ್ತಿಲ್ಲ ಎಂದು ಇದೇ ವೇಳೆ ಹೇಳಿದರು.

ಎತ್ತಿನಹೊಳೆ ಕುರಿತು ಮಾತನಾಡಿದ ಕುಮಾರಸ್ವಾಮಿ, ಈ ಯೋಜನೆಗೆ ಇಲ್ಲಿಯವರೆಗೆ 13 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಇದೀಗ ಮತ್ತೊಮ್ಮೆ ಯೋಜನೆಗೆ ರೂ.24 ಸಾವಿರ ಕೋಟಿ ಬೇಕೆಂದು ಹೇಳುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಕೋಲಾರಕ್ಕೆ ಭೇಟಿ ನೀಡಿದ್ದ ವೇಳೆ ಜೆಡಿಎಸ್ ಯಾತ್ರೆಯನ್ನು ಟೀಕಿಸಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿಯವರು, ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ‌ರೈತರ ಮನೆಗಳಿಗೆ ಭೇಟಿ ಮಾಡಿ ಕೈಲಾದ ಪರಿಹಾರ ನೀಡಿದ್ದು ಜೆಡಿಎಸ್ ಮುಖಂಡರು.

ಹಾವೇರಿ ಜಿಲ್ಲೆ, ಮಂಡ್ಯ ಜಿಲ್ಲೆ ನಂತರ ಅತಿ ಹೆಚ್ಚಿನ ಆತ್ಮಹತ್ಯೆ ಆಗಿದ್ದ ಜಿಲ್ಲೆಗಳು. ಹಾವೇರಿ ಜಿಲ್ಲೆಯಲ್ಲಿ ನಮ್ಮ ಹೆಚ್ಚಿನ ಬಲ ಇರಲಿಲ್ಲ. ಜನ ಬಲ ಇಲ್ಲದೆ ಇದ್ದರು 75 ಲಕ್ಷ ಪರಿಹಾರ ನೀಡಿದ್ದು ಜೆಡಿಎಸ್ ಪಕ್ಷ. ಸಿಂದನೂರಿನಲ್ಲಿ 52 ಲಕ್ಷ ಪರಹಾರ ನೀಡಿದ್ದೇವೆ. ನಾವು ರೈತರಲ್ಲಿ ಮನವಿ ಮಾಡಿದ್ದೆಆತ್ಮಹತ್ಯೆ ಮಾಡಿಕೊಳ್ಳಬೇಡಿ ನಮ್ಮ ಸರ್ಕಾರ ಬಂದರೆ ಸಾಲ ಮನ್ನಾ ಮಾಡ್ತೀನಿ ಅಂತ ಹೇಳಿದ್ದೆ.

ಬಿಜೆಪಿ,ಕಾಂಗ್ರೆಸ್ ನಾಯಕರು ಲಘುವಾಗಿ ಮಾತಾಡಿದರು. ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ರು. ನಾನು ಸಾಲ ಮನ್ನಾಕ್ಕೂ ನಮಗೂ ಸಂಬಂಧ ಇಲ್ಲ. ನಾನು‌ ನೀಡಿರುವ ಭಾಗ್ಯದ ಯೋಜನೆಗಳನ್ನ ನಿಲ್ಲಿಸಬಾರದು ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೂ, ರೈತರ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ ಎಂದು ವಿವರಿಸಿದರು.

ಸಿದ್ದರಾಮಯ್ಯ ಪಂಚರತ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರೇ ರಾಜ್ಯದ ಜನರ ಕಷ್ಟಗಳು ನನ್ನ ಮನಸ್ಸಿನಲ್ಲಿ ಇದೆ. ಈ ಪಕ್ಷ ಉಳಿದಿರುವುದು ಬಡ ಕುಟುಂಬಗಳಿಂದ. ನಿಮ್ಮ ಭಾಗ್ಯ ಯೋಜನೆಯಿಂದ ಬಡವರು ಉದ್ದಾರ ಆಗಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, 'ಕುಮಾರಸ್ವಾಮಿಯಿಂದ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ' ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com