ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಸಿದ್ಧತೆ ಆರಂಭವಾಗಿರುವಂತೆಯೇ ಇತ್ತ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಸಿದ್ಧತೆ ಆರಂಭವಾಗಿರುವಂತೆಯೇ ಇತ್ತ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಿನ್ನೆ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನ ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಹೇಳಿದ್ದಾರೆ.

ಪಕ್ಷದ ಅಭ್ಯರ್ಥಿಗಳನ್ನ ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೂ ಇಲ್ಲ, ನನಗೂ ಇಲ್ಲ. ಆ ಅಧಿಕಾರ ಏನಿದ್ದರೂ ಎಐಸಿಸಿಗೆ ಇದೆ. ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದಾರೆ. ಯಾವ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಅಲ್ಲಿರುವವರಿಗೆ ಉತ್ತೇಜನ ನೀಡಲು ಹೇಳಿರಬಹುದು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಹೈಕಮಾಂಡ್‌ಗೆ ಮಾತ್ರ ಅಭ್ಯರ್ಥಿಗಳನ್ನು ತೀರ್ಮಾನಿಸುವ ಅಧಿಕಾರ ಇದೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com