ಪರೇಶ್ ಮೆಸ್ತಾ ಸಾವು ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡಿದೆ, ಆಡಳಿತ ನಡೆಸುವಲ್ಲಿ ವಿಫಲ: ಕಾಂಗ್ರೆಸ್ ಟೀಕೆ
ಬಿಜೆಪಿಯವರು ತಮ್ಮ ಪ್ರಣಾಳಿಕೆಯನ್ನು ಪಾಲಿಸಿದ್ದಾರಾ? ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ರೂ.1 ಲಕ್ಷದವರೆಗೆ ಸಾಲಮನ್ನಾ ಮಾಡುವುದಾಗಿ ಹೇಳಿದಂತೆ ನಡೆದುಕೊಂಡರಾ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಪ್ರಶ್ನಿಸಿದ್ದಾರೆ.
Published: 25th November 2022 08:09 AM | Last Updated: 25th November 2022 01:27 PM | A+A A-

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಉತ್ತರ ಕನ್ನಡದಲ್ಲಿ ಹಾಲಕ್ಕಿ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು
ಕುಮಟಾ (ಉತ್ತರಕನ್ನಡ): ‘ಪರೇಶ್ ಮೇಸ್ತ ಸಾವು ಪ್ರಕರಣದಲ್ಲಿ ಹನಿ ಹನಿ ರಕ್ತಕ್ಕೂ ನ್ಯಾಯ ಕೊಡಿಸುವುದಾಗಿ ಇಲ್ಲಿನ ಸಂಸದ ಹೇಳಿದ್ದರು. ನ್ಯಾಯ ಕೊಡಿಸಿದರೆಯೇ? ಬಿಜೆಪಿಯವರು ತಮ್ಮ ಪ್ರಣಾಳಿಕೆಯನ್ನು ಪಾಲಿಸಿದ್ದಾರಾ? ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ರೂ.1 ಲಕ್ಷದವರೆಗೆ ಸಾಲಮನ್ನಾ ಮಾಡುವುದಾಗಿ ಹೇಳಿದಂತೆ ನಡೆದುಕೊಂಡರಾ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಪ್ರಶ್ನಿಸಿದ್ದಾರೆ.
ಐದು ವರ್ಷಗಳ ಹಿಂದೆ ನಡೆದ ಪರೇಶ್ ಮೇಸ್ತ ಸಾವಿನ ಪ್ರಕರಣದ ಸತ್ಯಾಸತ್ಯತೆ ತಿಳಿಸುವ ನಿಟ್ಟಿನಲ್ಲಿ ಇಲ್ಲಿಯ ಮಣಕಿ ಮಹಾತ್ಮಾ ಗಾಂಧಿ ಮೈದಾನದಲ್ಲಿ ಗುರುವಾರ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಡಬಲ್ ಇಂಜಿನ್ ಸರ್ಕಾರ ನುಡಿದಂತೆ ನಡೆದಿದೆಯಾ? ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿತ್ತು? ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ರೈತರ ಸಾಲ ಮನ್ನಾ ಮಾಡಿಲ್ಲ. ರೈತರ ಆದಾಯ ದ್ವಿಗುಣಗೊಳಿಸಿಲ್ಲ. ಈ ಭಾಗದ ಬಹುದಿನಗಳ ಬೇಡಿಕೆಯಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ ಸೇರಿಸಲು ಅದಕ್ಕೆ ಸಾಧ್ಯವಾಗಿಲ್ಲ. ಕೋವಿಡ್ ಪೀಡಿತರ ಆಸ್ಪತ್ರೆ ವೆಚ್ಚ ಭರಿಸಿಲ್ಲ. ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಲ್ಲ. ಆಕ್ಸಿಜನ್ ದುರಂತದಲ್ಲಿ ಸತ್ತವರಿಗೆ ಸರ್ಟಿಫಿಕೇಟ್ ಕೂಡ ಕೊಟ್ಟಿಲ್ಲ. ಅಷ್ಟೇಕೆ, ಬಾಡಿಗೆ ವಾಹನ ಚಾಲಕರಿಗೆ ಪ್ಯಾಕೇಜ್ ಪರಿಹಾರ ಕೂಡ ಕೊಟ್ಟಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಬಿಜೆಪಿಯ ಬಿ ಟೀಮ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬಿಜೆಪಿ ಹೇಗಾದರೂ ಮಾಡಿ ಚುನಾವಣೆ ಗೆಲ್ಲುವ ಯತ್ನ ಮಾಡುತ್ತಿದೆ. ಓಟರ್ ಲಿಸ್ಟ್‌ನಿಂದ 27 ಲಕ್ಷ ಜನರನ್ನು ತೆಗೆದು ಹಾಕಿದೆ. ತಮಗೆ ಬೇಕಾದವರನ್ನು ಮಾತ್ರ ಇಟ್ಟು ಉಳಿದವರ ಹೆಸರನ್ನು ಡಿಲೀಟ್ ಮಾಡಿದೆ. ಇ.ವಿ. ಯಂತ್ರಗಳನ್ನೂ ಬದಲಿಸುವ ಕೆಲಸ ಮಾಡಲಾಗುತ್ತಿದೆ. ದೆಹಲಿಗೆ ಹೋಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಕೊಟ್ಟಿದ್ದೇವೆ. ಅಲ್ಲಿಂದಲೇ ನೇರವಾಗಿ ಕುಮಟಾಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.
ಪರೇಶ ಮೇಸ್ತ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಂಡರು. ಜನರನ್ನು ತಪ್ಪು ದಾರಿಗೆ ಎಳೆದು ಮತ ಪಡೆದುಕೊಂಡರು. ಬಿಜೆಪಿಯವರು ಈ ಪ್ರಕರಣದ ಫಲಾನುಭವಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ಏನಾಗಿದೆ ಎನ್ನುವುದನ್ನು ಈ ಜಿಲ್ಲೆಯ ಜನ ಚೆನ್ನಾಗಿ ತಿಳಿದಿದ್ದಾರೆ. ಹೀಗಾಗಿ, ಮತ್ತೆ ಬಿಜೆಪಿ ಕೈಗೆ ಅಧಿಕಾರ ಕೊಡಬೇಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ನ ಮುಂದಿನ ಸ್ವಯಂಘೋಷಿತ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ
ಬಳಿಕ ವಿವಿಧ ಅಕ್ರಮಗಳು ಮತ್ತು ಉಚಿತ ಅಕ್ಕಿ ವಿತರಣೆಯಂತಹ ಯೋಜನೆಗಳ ಸ್ಥಗಿತಗೊಳಿಸಿರುವುದನ್ನು ಪ್ರಸ್ತಾಪಿಸಿದ ಅವರು, ಕೋವಿಡ್ -19 ಅನ್ನು ತಪ್ಪಾಗಿ ನಿರ್ವಹಿಸುವುದರಿಂದ ರಾಜ್ಯವು 4 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಕಳೆದುಕೊಂಡಿದೆ ಎಂದು ಹೇಳಿದರು.
ನಂತರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಐದು ಜಿಲ್ಲೆಗಳ ನೂತನ ಕಾಂಗ್ರೆಸ್ ಅಧ್ಯಕ್ಷರ ನೇಮಕ
ಸರ್ಕಾರ ವಿಫಲವಾಗಿದೆ, ಜಿಲ್ಲೆಗೆ ಯಾವುದೇ ಹೊಸ ಯೋಜನೆ ನೀಡುವಲ್ಲಿ ಯಾವ ಶಾಸಕರೂ ಯಶಸ್ವಿಯಾಗಲಿಲ್ಲ. ''ಭ್ರಷ್ಟಾಚಾರ ಹೆಚ್ಚಾಗಿದೆ. ಅಗತ್ಯ ವಸ್ತುಗಳು ಜನಸಾಮಾನ್ಯರಿಗೆ ತಲುಪುತ್ತಿಲ್ಲ. ಯುವಕರು ನಿರುದ್ಯೋಗಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರು ರೈತರ ಸಾಲ ಮನ್ನಾ ಮಾಡಿದ್ದು, ಬಡವರ ಬಗ್ಗೆ ನಿಜವಾದ ಕಾಳಜಿ ಹೊಂದಿದ್ದರು ಎಂದು ದೇಶಪಾಂಡೆ ಹೇಳಿದರು.
ಬಳಿಕ ಹತ್ಯೆಗೀಡಾದ ಕಾರ್ಮಿಕರ ಮನೆಗೆ ಭೇಟಿ ನೀಡಿದ ಬಿಜೆಪಿ ನಾಯಕರನ್ನು ಯುಟಿ ಖಾದರ್ ಲೇವಡಿ ಮಾಡಿದರು. “ಅವರ ಸ್ವಂತ ಕಾರ್ಯಕರ್ತರೇ ಅವರನ್ನು ಓಡಿಸಿದರು. ಅವರ ಮೇಲೆ ನಂಬಿಕೆ ಇಲ್ಲದಂತಾಗಿದೆ ಎಂದರು.