ಅರ್ಜಿ ಆಹ್ವಾನಿಸಿದ್ದೆ ತಪ್ಪಾಯ್ತ? ಕಾಂಗ್ರೆಸ್ ಗೆ ತಲೆನೋವಾದ ಟಿಕೆಟ್ ಹಂಚಿಕೆ; ಹನುಮಂತನ ಬಾಲದಂತೆ ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ!
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿರುವುದು ತೀವ್ರ ಲಾಬಿಗೆ ಕಾರಣವಾಗಿದೆ.
Published: 26th November 2022 10:26 AM | Last Updated: 26th November 2022 01:17 PM | A+A A-

ಡಿ.ಕೆ ಶಿವಕುಮಾರ್
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿರುವುದು ತೀವ್ರ ಲಾಬಿಗೆ ಕಾರಣವಾಗಿದೆ.
ಆಕಾಂಕ್ಷಿಗಳು ಅರ್ಜಿ ಶುಲ್ಕವಾಗಿ ರೂ 5,000 ಪಾವತಿಸಬೇಕು, ಜೊತೆಗೆ ಸಾಮಾನ್ಯ ಕ್ಷೇತ್ರಗಳಿಗೆ ರೂ 2 ಲಕ್ಷ ಮತ್ತು ಎಸ್‌ಸಿ/ಎಸ್‌ಟಿ ಮೀಸಲು ಸ್ಥಾನಗಳಿಗೆ ರೂ 1 ಲಕ್ಷ ಪಾವತಿಸಬೇಕು. ಇದು ಪಕ್ಷದೊಳಗಿನ ಬಂಡಾಯ ಮತ್ತು ಭಿನ್ನಾಭಿಪ್ರಾಯಕ್ಕೆ ಉತ್ತೇಜನ ನೀಡುವ ಮೂಲಕ ಪಕ್ಷದ ವರಿಷ್ಠರಿಗೆ ಸವಾಲಾಗಿ ಪರಿಣಮಿಸಲಿದೆ.
224 ವಿಧಾನಸಭಾ ಕ್ಷೇತ್ರಗಳಲ್ಲಿ 69 ಹಾಲಿ ಕಾಂಗ್ರೆಸ್ ಶಾಸಕರಿದ್ದಪ, 2018 ರ ಚುನಾವಣೆಯಲ್ಲಿ ಸೋಲಿನ ರುಚಿ ಕಂಡ 16 ಸಚಿವರು ಹಾಗೂ ಇಬ್ಬರು ಸಂಸದರು 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಇದನ್ನೂ ಓದಿ: ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್: ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಟಕ್ಕರ್?
ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಶಿಕಾರಿಪುರ ಕ್ಷೇತ್ರದಲ್ಲಿ 15 ನಟಿ, ಮಾಜಿ ಸಚಿವೆ ಉಮಾಶ್ರೀ ಪ್ರತಿನಿಧಿಸಿದ್ದ ತೇರದಾಳದಲ್ಲಿ 15 ಮಂದಿ ಆಕಾಂಕ್ಷಿಗಳಿದ್ದಾರೆ. ಬೆಂಗಳೂರು ನಗರದಲ್ಲಿ ಮಹದೇವಪುರ ಮೀಸಲು ಕ್ಷೇತ್ರದಿಂದ 14 ಮಂದಿ ಆಕಾಂಕ್ಷಿಗಳಿದ್ದರೆ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 12 ಮಂದಿ ಆಕಾಂಕ್ಷಿಗಳಿದ್ದಾರೆ.
ಮಹದೇವಪುರ ಅಥವಾ ಸಕಲೇಶಪುರ ಕ್ಷೇತ್ರಗಳಲ್ಲಿ ಸ್ಪರ್ಧಿಸಲುಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸಕ್ತಿ ವಹಿಸಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ 11 ಹಾಗೂ ಮುಳಬಾಗಲು ಕ್ಷೇತ್ರದಲ್ಲಿ 9 ಮಂದಿ ಆಕಾಂಕ್ಷಿಗಳಿದ್ದಾರೆ.
ಈ ಆಕಾಂಕ್ಷಿಗಳು ಪಕ್ಷದೊಳಗೆ ತಮ್ಮದೇ ಆದ ನಿಷ್ಠಾವಂತರನ್ನು ಹೊಂದಿದ್ದಾರೆ ಮತ್ತು ಟಿಕೆಟ್ ನಿರಾಕರಿಸಿದರೆ ಅವರ ಬೆಂಬಲಿಗರು ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವುದಿಲ್ಲ ಎಂದು ಹಲವರು ಭಾವಿಸುತ್ತಾರೆ.
ಇದನ್ನೂ ಓದಿ: ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ಅಸಮಾಧಾನ
ಕೆಲವು ಆಕಾಂಕ್ಷಿ ಅಭ್ಯರ್ಥಿಗಳು ಈಗಾಗಲೇ ಪಂಚಾಯಿತಿವಾರು ಪ್ರವಾಸ ಆರಂಭಿಸಿದ್ದು, ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸದಿಂದ ಬೂತ್ ಮಟ್ಟದ ಸಭೆಗಳನ್ನು ಆಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ ಆಕಾಂಕ್ಷಿಗಳಲ್ಲಿ ಉಂಟಾಗಬಹುದಾದ ನಿರಾಶೆಯನ್ನು ಪರಿಹರಿಸಲು ಕಾಂಗ್ರೆಸ್‌ನ ಪ್ರಮುಖ ನಾಯಕರು ಮಂಡಳಿಯಾದ್ಯಂತ ಕ್ಷೇತ್ರವಾರು ಸಭೆಗಳನ್ನು ನಡೆಸುವ ಅಗತ್ಯವಿದೆ. ಪಕ್ಷವು ಈಗ ಕೆಲವು ಕ್ಷೇತ್ರಗಳು ಮತ್ತು ಜಿಲ್ಲೆಗಳಲ್ಲಿ ಗುಂಪುಗಾರಿಕೆಯಿಂದ ನಲುಗುತ್ತಿದೆ. ಹೀಗಾಗಿ ಪಕ್ಷದ ಉನ್ನತ ನಾಯಕರು ತಳಮಟ್ಟದ ಕಾರ್ಯಕರ್ತರು ಅಥವಾ ಮುಖಂಡರ ಕೋಪವನ್ನು ಎದುರಿಸಲು ಸಾಧ್ಯವಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದರು.