ಅಧಿಕಾರಕ್ಕೆ ಬಂದಿದ್ದೇ ಆದರೆ, ಶರಾವತಿ ಸಂತ್ರಸ್ತರ ಸಮಸ್ಯೆಗಳ ಪರಿಹರಿಸುತ್ತೇವೆ: ಸಿದ್ದರಾಮಯ್ಯ

2023ರ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಅಧಿಕಾರಕ್ಕೆ ಬಂದ ಬಳಿಕ ಶರಾವತಿ ಸಂತ್ರಸ್ತರ ಸಮಸ್ಯೆಗಳು ಮತ್ತು ಮಲೆನಾಡು ರೈತರ ಎಲ್ಲ ಸಮಸ್ಯೆಗಳನ್ನು ಕಾಂಗ್ರೆಸ್ ಬಗೆಹರಿಸಲಿದೆ ಎಂದು ಸೋಮವಾರ ಹೇಳಿದರು.
ಜನಾಕ್ರೋಶ ಸಮಾವೇಶದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ದೀಪ ಬೆಳಗಿಸಿದರು.
ಜನಾಕ್ರೋಶ ಸಮಾವೇಶದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ದೀಪ ಬೆಳಗಿಸಿದರು.

ಶಿವಮೊಗ್ಗ: 2023ರ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಅಧಿಕಾರಕ್ಕೆ ಬಂದ ಬಳಿಕ ಶರಾವತಿ ಸಂತ್ರಸ್ತರ ಸಮಸ್ಯೆಗಳು ಮತ್ತು ಮಲೆನಾಡು ರೈತರ ಎಲ್ಲ ಸಮಸ್ಯೆಗಳನ್ನು ಕಾಂಗ್ರೆಸ್ ಬಗೆಹರಿಸಲಿದೆ ಎಂದು ಸೋಮವಾರ ಹೇಳಿದರು.

ಶರಾವತಿ ಒತ್ತುವರಿ ತೆರವುದಾರರ ಹಿತರಕ್ಷಣೆಗಾಗಿ ಆಯೋಜಿಸಿದ್ದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ತೆರವುದಾರರ ಸಮಸ್ಯೆಗಳಿಗೆ ಸ್ಪಂದಿಸದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವ್ಯಂಗ್ಯವಾಡಿದರು.

ರಮೇಶ ಹೆಗಡೆ ನೇತೃತ್ವದ ಸಮಿತಿ ಮಲೆನಾಡು ಭಾಗದ ರೈತ ಸಮುದಾಯ, ಶರಾವತಿ ಒತ್ತುವರಿ ತೆರವುದಾರರು ಹಾಗೂ ಬಗೈರ್ ಹುಕುಂ ಸಾಗುವಳಿದಾರರ ಸಮಸ್ಯೆಗಳ ಕುರಿತು ವರದಿ ಸಲ್ಲಿಸಿದೆ ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿದ್ದು, 25 ಭರವಸೆಗಳನ್ನು ಮಾತ್ರ ಈಡೇರಿಸಿದೆ, 30 ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿಲ್ಲ. ಆದರೆ 2013 ರಲ್ಲಿ ನಮ್ಮ ಸರ್ಕಾರವು ನೀಡಿದ 169 ಭರವಸೆಗಳಲ್ಲಿ 157 ಅನ್ನು ಪೂರ್ಣಗೊಳಿಸಿದೆ. ಬಿಜೆಪಿ ನಾಯಕರು ಮತ್ತು ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸದೆ ಜನರಿಗೆ ದ್ರೋಹ ಮಾಡಿದ್ದಾರೆಂದು ತಿಳಿಸಿದರು.

ಸಿಎಂ ಆಗಿದ್ದ ಅವಧಿಯಲ್ಲಿ ಶರಾವತಿ ಒತ್ತುವರಿದಾರರ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನ ಕಾರ್ಯದರ್ಶಿ ಮದನಗೋಪಾಲ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. 1959 ಮತ್ತು 1970 ರ ನಡುವೆ ಚಾಲ್ತಿಯಲ್ಲಿದ್ದ ಕಾಯಿದೆಯ ಪ್ರಕಾರ ಸ್ಥಳಾಂತರಿಸುವವರಿಗೆ ಹಕ್ಕುಪತ್ರಗಳನ್ನು ನೀಡಬೇಕೆಂದು ಸಮಿತಿಯು ಶಿಫಾರಸು ಮಾಡಿತು, ಅದರ ಅಡಿಯಲ್ಲಿ ಕೇಂದ್ರದ ಅನುಮತಿಯನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. “ನಮ್ಮ ಸರ್ಕಾರ ಹಕ್ಕು ಪತ್ರಗಳನ್ನು ನೀಡಿದೆ. ಆದರೆ ಈಗ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ' ಎಂದು ಹೇಳಿದರು.

ಯೋಜನೆಗಳಿಗೆ ರಾಜಕೀಯ ನಾಯಕರು ಹೆಚ್ಚಿನ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಗುಡುಗಿದ ಸಿದ್ದರಾಮಯ್ಯ ಅವರು, ಪ್ರಕರಣದಲ್ಲಿ ಬಿ ರಿಪೋರ್ಟ್ ಏಕೆ ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಬಳಿಕಕೇಂದ್ರ ಸರ್ಕಾರ ಉಚಿತ ಅಕ್ಕಿ ನೀಡುತ್ತಿದೆ ಎಂಬ ಬೊಮ್ಮಾಯಿ ಹೇಳಿಕೆಗೆ ಉತ್ತರಿಸಿ, ಮನಮೋಹನ್ ಸಿಂಗ್ ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ನಾಲ್ಕು ಕೋಟಿ ಜನರಿಗೆ ಉಚಿತ ಅಕ್ಕಿ ನೀಡಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿ ಸರ್ಕಾರ ಅದನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆಂದು ಘೋಷಿಸಿದರು.

ಇದೇ ವೇಳೆ ಶೇ.40 ರಷ್ಟು ಕಮಿಷನ್‌ಗೆ ಒತ್ತಾಯಿಸಿ ಸರ್ಕಾರಿ ಪ್ರತಿನಿಧಿಗಳ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘ ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಅವರು ಉತ್ತರಿಸಿಲ್ಲ ಎಂದು ಲೇವಡಿ ಮಾಡಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ, ಪಕ್ಷದ ರಾಜ್ಯ ವಿಪಿ ರೇವಣ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಬಿ.ಕೆ.ಸಂಗಮೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com