ಕಾಂಗ್ರೆಸ್ ಪಕ್ಷಕ್ಕೆ ಅಂಟಿರುವ ಕಳಂಕ ನಿವಾರಣೆಗೆ ಯತ್ನ: ಡಿಸೆಂಬರ್ ಕೊನೆಯ ವಾರದಲ್ಲಿ ವೀರಶೈವ-ಲಿಂಗಾಯತ ಸಭೆ!

ಲಿಂಗಾಯತರು ಮತ್ತು ವೀರಶೈವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ವಿಚಾರ 2018 ರಲ್ಲಿ ಕಾಂಗ್ರೆಸ್‌ನ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
ಶಾಮನೂರು ಶಿವಶಂಕರಪ್ಪ ಮತ್ತು ಎಂ ಬಿ ಪಾಟೀಲ್
ಶಾಮನೂರು ಶಿವಶಂಕರಪ್ಪ ಮತ್ತು ಎಂ ಬಿ ಪಾಟೀಲ್
Updated on

ಬೆಂಗಳೂರು: ಲಿಂಗಾಯತರು ಮತ್ತು ವೀರಶೈವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ವಿಚಾರ 2018 ರಲ್ಲಿ ಕಾಂಗ್ರೆಸ್‌ನ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿರುವ ಸಮುದಾಯದ ಮುಖಂಡರು ಪಕ್ಷಕ್ಕೆ ಅಂಟಿರುವ ಕಳಂಕ ನಿವಾರಿಸಲು 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಗೆಲ್ಲಲು ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ.

2022 ರ ಡಿಸೆಂಬರ್ ಕೊನೆಯ ವಾರದಲ್ಲಿ ದಾವಣಗೆರೆಯಲ್ಲಿ ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಮಾವೇಶದಲ್ಲಿ ವೀರಶೈವ-ಲಿಂಗಾಯತ ಎಂದು ಎರಡೂ ಸಮುದಾಯಗಳಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನವನ್ನು ಕೇಂದ್ರಕ್ಕೆ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಲಾಗುವುದು.

ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಲಿಂಗಾಯತರಿಗೆ (ವೀರಶೈವರನ್ನು ಹೊರತುಪಡಿಸಿ) ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯಲು ಯತ್ನಿಸಿ ವಿಫಲರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಸಮಾವೇಶದಲ್ಲಿ ಸಮುದಾಯದ ದೊಡ್ಡ ನಾಯಕರನ್ನಾಗಿ ಬಿಂಬಿಸುವ ಸಾಧ್ಯತೆಯಿದೆ.

2017-18ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರತ್ಯೇಕ ಧರ್ಮದ ವಿವಾದ ಭುಗಿಲೆದ್ದಿತ್ತು. ಲಿಂಗಾಯತ ಸಮುದಾಯವನ್ನು ಶಾಮನೂರು ಶಿವಶಂಕರಪ್ಪ ಮತ್ತು ಎಂಬಿ ಪಾಟೀಲ ಒಡೆದು ಆಳುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದವು.

ಇಬ್ಬರು ನಾಯಕರು ಬೇರೆ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ ಎಂಬ ಚಿಂತನೆಯನ್ನು ಹೋಗಲಾಡಿಸಲು  ಸಮಾವೇಶದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಂಬಿ ಪಾಟೀಲ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

1904-05ರಲ್ಲಿ ಧಾರವಾಡದಲ್ಲಿ ನಡೆದ ಇದೇ ರೀತಿಯ ಸಮಾವೇಶಕ್ಕೆ ಎಂಬಿ ಪಾಟೀಲ್ ತಾತ ಶಿರಸಂಗಿ ಲಿಂಗರಾಜ ದೇಸಾಯಿ ಮೊದಲ ಅಧ್ಯಕ್ಷರಾಗಿದ್ದರು’ ಎಂದು ಮಹಾಸಭಾ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಹೇಳಿದರು.

ಮುಖ್ಯ ಅತಿಥಿಗಳಾಗಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಸಮಾಜದ ಎಲ್ಲಾ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರಿಗೆ ಆಹ್ವಾನವಿಲ್ಲ,ಈ ಸಮಾವೇಶ 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಸಹಾಯ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸನ್ನಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com