ಸಚಿವ ಸಂಪುಟ ವಿಸ್ತರಣೆ: ಸದ್ಯದಲ್ಲಿಯೇ ಸಿಎಂ ಬೊಮ್ಮಾಯಿ ದೆಹಲಿಗೆ
ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರ ಒಪ್ಪಿಗೆ ಪಡೆಯಲು ಶೀಘ್ರವೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಅವರು ವಿಜಯಪುರದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲ ಸಂಗ್ರಹಾಗಾರದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದರು.
Published: 01st October 2022 10:35 AM | Last Updated: 01st October 2022 01:26 PM | A+A A-

ಸಿಎಂ ಬೊಮ್ಮಾಯಿ
ಬಾಗಲಕೋಟೆ/ವಿಜಯಪುರ: ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರ ಒಪ್ಪಿಗೆ ಪಡೆಯಲು ಶೀಘ್ರವೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಅವರು ವಿಜಯಪುರದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲ ಸಂಗ್ರಹಾಗಾರದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದರು. ಪಕ್ಷದ ಕೇಂದ್ರ ನಾಯಕರ ಒಪ್ಪಿಗೆ ಪಡೆದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರವು ಐದು ವರ್ಷಗಳ ಕಾಲ ಪಿಎಫ್‌ಐ ಅನ್ನು ನಿಷೇಧಿಸಿರುವ ಕುರಿತು ಕೇಳಿದಾಗ, “ಕಾಂಗ್ರೆಸ್ ಕೂಡ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿತ್ತು. ವಿಧಾನಸಭೆಯ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸಿತ್ತು. ಬಿಜೆಪಿ ಸರ್ಕಾರ ಅಂತಿಮವಾಗಿ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ, ಇದನ್ನು ಅನೇಕರು ಸ್ವಾಗತಿಸಿದ್ದಾರೆ.
“ಆರ್‌ಎಸ್‌ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆಯಾಗಿದೆ. ಇದನ್ನು ಪಿಎಫ್‌ಐನಂತಹ ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಬಾರದು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎರಡು ಸಂಘಟನೆಗಳ ನಡುವೆ ಹೋಲಿಕೆ ಮಾಡುವುದು ಮೂರ್ಖತನವಾಗಿದೆ ಎಂದರು.
ಇದನ್ನೂ ಓದಿ: ಸಂಪುಟ ವಿಸ್ತರಣೆ ಸರ್ಕಸ್: ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ; ಸಿಎಂ ಬೊಮ್ಮಾಯಿಗೆ ಹೆಚ್ಚು'ವರಿ'ಯಾಗಿ ಖಾತೆಗಳ ಜವಾಬ್ದಾರಿ!
ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519.6 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಕುರಿತು ಮಾತನಾಡಿದ ಅವರು, ಈ ಬೇಡಿಕೆಯನ್ನು ಪೂರೈಸುವುದು ಪಕ್ಷದ ಪ್ರಮುಖ ಗುರಿಯಾಗಿದೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ, ಈ ವಿಷಯವನ್ನು ಶೀಘ್ರವಾಗಿ ಇತ್ಯರ್ಥಪಡಿಸಲಾಗುವುದು. ಕೇಂದ್ರ ಸರ್ಕಾರವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ ತಕ್ಷಣ, ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ನೀರಾವರಿಗಾಗಿ ಹೆಚ್ಚುವರಿ ನೀರಿನ ಹಂಚಿಕೆಯನ್ನು ಬಳಸಿಕೊಳ್ಳಲು ಜಲಾಶಯದ ಎತ್ತರವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.