ಕೊನೆ ಕ್ಷಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಕೊಡಗು ಭೇಟಿ ರದ್ದು

ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊಡಗು ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ಮಡಿಕೇರಿ: ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊಡಗು ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.

ಸೋನಿಯಾ ಹಾಗೂ ರಾಹುಲ್ ಭೇಟಿ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು ಮತ್ತು ನಗರದಾದ್ಯಂತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಅನ್ನು ನಿಷೇಧಿಸಲಾಗಿದೆ. ಹೀಗಾಗಿ ಅವರ ಕೊಡಗು ಭೇಟಿ ರದ್ದಾಗಿದೆ.

ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರು ಇಂದು ಕೊಡಗಿಗೆ ಭೇಟಿ ನೀಡಬೇಕಿತ್ತು. ದಸರಾ ಹಬ್ಬದ ಸಂದರ್ಭದಲ್ಲಿ ಸೋನಿಯಾ ಮತ್ತು ರಾಹುಲ್ ‘ಭಾರತ್ ಜೋಡೋ’ ಯಾತ್ರೆಯಿಂದ ವಿರಾಮ ತೆಗೆದುಕೊಳ್ಳಲಿದ್ದು, ಮಡಿಕೇರಿ ಸಮೀಪದ ಕೊಡಗಿನ ಖಾಸಗಿ ರೆಸಾರ್ಟ್‌ನಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇಂದು ಬೆಳಗ್ಗೆ ನಗರದಾದ್ಯಂತ ಕೊಡಗು ಪೊಲೀಸರನ್ನು ನಿಯೋಜಿಸಲಾಗಿತ್ತು ಮತ್ತು ಹೆಲಿಪ್ಯಾಡ್‌ನಿಂದ ರೆಸಾರ್ಟ್‌ವರೆಗಿನ ಮಾರ್ಗದಲ್ಲಿ ಐಎನ್‌ಸಿ ಅಧ್ಯಕ್ಷರ ಪ್ರಯಾಣಕ್ಕೆ ಭದ್ರತೆ ಕಲ್ಪಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ತಾಯಿ, ಮಗ ಜಿಲ್ಲೆಗೆ ಬಂದಿಳಿಯಬೇಕಿದ್ದ ಸಂದರ್ಭದಲ್ಲಿ ಮಡಿಕೇರಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪ್ರಯಾಣ ಅಪಾಯಕಾರಿಯಾದ ಕಾರಣ ಕೊಡಗು ಭೇಟಿ ರದ್ದುಗೊಳಿಸಲಾಗಿದೆ.

ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರು ರಸ್ತೆಯಲ್ಲಿ ಪ್ರಯಾಣಿಸಲು ನಿರಾಕರಿಸಿದರು. ಹೀಗಾಗಿ ಅವರು ಈಗ ಮೈಸೂರಿನ ಬಳಿಯ ಕಬಿನಿ ರೆಸಾರ್ಟ್‌ನಲ್ಲಿ ಉಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ಖಚಿತಪಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com