ರಾಹುಲ್, ಸೋನಿಯಾ ಗಾಂಧಿ, ಜೈರಾಮ್ ರಮೇಶ್
ರಾಜಕೀಯ
ಭಾರತ್ ಜೋಡೋ ಯಾತ್ರೆ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ- ಜೈರಾಮ್ ರಮೇಶ್
ಎಐಸಿಸಿ ಅಧಿನಾಯಕಿ ಪ್ರವೇಶದೊಂದಿಗೆ ರಾಜ್ಯದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮತ್ತಷ್ಟು ಬಲ ಬಂದಿದೆ.
ಮಂಡ್ಯ: ಎಐಸಿಸಿ ಅಧಿನಾಯಕಿ ಪ್ರವೇಶದೊಂದಿಗೆ ರಾಜ್ಯದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮತ್ತಷ್ಟು ಬಲ ಬಂದಿದೆ.
ಈ ವಿಚಾರವಾಗಿ ಎಎನ್ ಐ ಸುದ್ದಿಸಂಸ್ಥೆಯೊಂದಿರುವ ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಗೆ ಅಪಾರ ಜನಬೆಂಬಲ ಸಿಗುತ್ತಿದೆ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆಗೆ ಜನರಿಂದ ಅದ್ಬುತ ಪ್ರತಿಕ್ರಿಯೆ ದೊರೆಯುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದುಈ ಪ್ರತಿಕ್ರಿಯೆಯಿಂದ ತಿಳಿದುಬರುತ್ತದೆ ಎಂದು ಅವರು ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ನ್ಯಾಮನಹಳ್ಳಿ ಗ್ರಾಮದಲ್ಲಿ ಆರಂಭವಾದ ಯಾತ್ರೆ ಜಕ್ಕನಹಳ್ಳಿ ಕ್ರಾಸ್ ತಲುಪಿದೆ.
ಈ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೋನಿಯಾ ಗಾಂಧಿ ಕೂಡಾ ಹೆಜ್ಜೆ ಹಾಕುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ