ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ?; ಡಿ.ಕೆ ಬ್ರದರ್ಸ್ ಗೆ ಮಾತ್ರ ಕಿರುಕುಳ ಏಕೆ: ರಣದೀಪ್‌ ಸಿಂಗ್‌ ಸುರ್ಜೇವಾಲಾ

ದಾವಣಗೆರೆಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಈ ಅವಧಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್‌ ಅವರಿಗೆ ಮೂರು ಬಾರಿ ನೋಟಿಸ್ ನೀಡಿದೆ.
ರಣದೀಪ್‌ ಸಿಂಗ್‌ ಸುರ್ಜೇವಾಲಾ
ರಣದೀಪ್‌ ಸಿಂಗ್‌ ಸುರ್ಜೇವಾಲಾ

ದಾವಣಗೆರೆ:  ಬ್ರಿಟಿಷರು ಆರಂಭಿಸಿದ್ದ ಈಸ್ಟ್‌ ಇಂಡಿಯಾ ಕಂಪನಿಯು ದೇಶವನ್ನು ಕೊಳ್ಳೆ ಹೊಡೆಯಲು ಒಡೆದು ಆಳುವ ನೀತಿ ಅನುಸರಿಸಿತ್ತು. ಬಿಜೆಪಿಯೂ ಹೊಸ ಈಸ್ಟ್‌ ಇಂಡಿಯಾ ಕಂಪನಿಯಂತಾಗಿ ಬ್ರಿಟಿಷರ ಕೆಲಸವನ್ನು ಮುಂದುವರಿಸಿದೆ ಎಂದು ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆರೋಪಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಈ ಅವಧಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್‌ ಅವರಿಗೆ ಮೂರು ಬಾರಿ ನೋಟಿಸ್ ನೀಡಿದೆ. ಯಾತ್ರೆಗೆ ಬಿಜೆಪಿ ಹೆದರಿರುವುದಕ್ಕೆ ಇದೇ ಸಾಕ್ಷಿ ಎಂದು ಆರೋಪಿಸಿದರು.

ಭಾರತ್ ಜೋಡೊ ಯಾತ್ರೆ ಪೂರ್ಣಗೊಂಡ ಬಳಿಕ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದಿಂದ ಯಾತ್ರೆ ಮಾಡಿ ಜನರನ್ನು ಒಗ್ಗೂಡಿಸುವ, ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಸ್ ಕ್ಲೀನ್. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಎಂಟು ದಿನಗಳಾಗಿವೆ. ಜಾರಿ ನಿರ್ದೇಶನಾಲಯ ಮೂರು ಬಾರಿ ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್‌ಗೆ ನೋಟಿಸ್ ನೀಡಿದೆ. ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ? ಯಾಕೆ ತನಿಖೆಗೆ ಒಳಪಡಿಸಿಲ್ಲ?'' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ದಾವಣಗೆರೆಯಲ್ಲಿ ಪ್ರಶ್ನಿಸಿದರು‌.

ಪಿಎಸ್‌ಐ ಹಗರಣ ನಡೆದಿದ್ದರೂ, ಗೃಹ ಸಚಿವರಿಗೆ ಯಾಕೆ ನೊಟೀಸ್ ನೀಡಿಲ್ಲ? ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡರೂ ಆರೋಪ ಹೊತ್ತ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ? ಶೇಕಡಾ 40ರಷ್ಟು ಕಮಿಷನ್ ಕೇಳುತ್ತಾರೆ ಎಂದು ಸ್ವತಃ ಗುತ್ತಿಗೆದಾರರ ಸಂಘವೇ ಆರೋಪಿಸಿದ್ದರೂ ಆ ಸಚಿವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿ ಕಿರುಕುಳ ನೀಡಲಾಗುತ್ತಿದೆ. ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ. ಈ ಯಾತ್ರೆ ಕೇವಲ ರಾಹುಲ್ ಗಾಂಧಿ, ಸುರ್ಜೆವಾಲಾ, ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರದ್ದಲ್ಲ. ಇದು ಜನರ ಯಾತ್ರೆ. ಭಾರತ್ ಜೋಡೊ ಯಾತ್ರೆಗೆ ಬಿಜೆಪಿ ಹೆದರಿದೆ ಎಂಬುದು ಈ ಮೂಲಕ ಸಾಬೀತಾಗಿದೆ. ಸಿಬಿಐ ಈಗ ಕ್ಯಾಪಿಟಲ್ ಬ್ಯರೋ ಇನ್‌ವೆಸ್ಟಿಗೇಶನ್ ಆಗಿದೆ. ಇ.ಡಿ. ಬಿಜೆಪಿಯ ಚುನಾವಣಾ ಸಂಸ್ಥೆಯಂತೆ ಕಾರ್ಯ ನಿರ್ವಹಿಸುತ್ತಿದೆ. ಶಿವಕುಮಾರ್ ಈಸ್ ಕ್ಲೀನ್ ಎಂದು ಹೇಳುವ ಮೂಲಕ ಸಮರ್ಥಿಸಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com