ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಇಂದಿನಿಂದ ರಾಜ್ಯ ಪ್ರವಾಸ ಆರಂಭ

2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆಯೇ, ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: 2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆಯೇ, ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಯಚೂರು ಜಿಲ್ಲೆಯ  ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಪ್ರವಾಸ ಆರಂಭಿಸುತ್ತಿದ್ದಾರೆ. ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ ಮತ್ತು ಗುರುವಾರ ಪ್ರವಾಸ ಕೈಗೊಳ್ಳಲಿದ್ದಾರೆ. 

ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರು ಡಿಸೆಂಬರ್ ಮಾಸಾಂತ್ಯದೊಳಗೆ ರಾಜ್ಯದ 52 ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡಲಿದ್ದಾರೆ. ಈ ಪೈಕಿ 28 ಬಿಜೆಪಿ, 20 ಕಾಂಗ್ರೆಸ್ ಮತ್ತು ನಾಲ್ಕು ಜೆಡಿಎಸ್ ಪಕ್ಷಗಳಿಗೆ ಸೇರಿದ ಕ್ಷೇತ್ರಗಳಾಗಿವೆ. ವಿವಿಧ ಕಡೆಗಳಲ್ಲಿ ಏಳು ಸಮಾವೇಶಗಳನ್ನು ಕೂಡಾ ನಡೆಸಲಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಲಾಗಿದೆ. ನಮ್ಮ ನಾಯಕರು ಡಿಸೆಂಬರ್ ಅಂತ್ಯದೊಳಗೆ 150 ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ರವಿಕುಮಾರ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿವಿಧ ಕಡೆಗಳಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com