ಚಿತ್ರದುರ್ಗ: ಹರ್ತಿಕೋಟೆ ಗ್ರಾಮದಿಂದ ರಾಹುಲ್ ಸಾರಥ್ಯದ 'ಭಾರತ್ ಜೋಡೋ ಯಾತ್ರೆ' ಆರಂಭ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದಿಗೆ ಹನ್ನೇರಡನೇ ದಿನಕ್ಕೆ ಕಾಲಿಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆ ಗ್ರಾಮದಿಂದ ಸಾಣಿಕೆರೆ ಕಡೆಗೆ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಪಾರ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳು ಹೆಜ್ಜೆ ಹಾಕುತ್ತಿದ್ದಾರೆ.
ರಾಹುಲ್ ಯಾತ್ರೆ
ರಾಹುಲ್ ಯಾತ್ರೆ

ಚಿತ್ರದುರ್ಗ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದಿಗೆ ಹನ್ನೇರಡನೇ ದಿನಕ್ಕೆ ಕಾಲಿಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆ ಗ್ರಾಮದಿಂದ ಸಾಣಿಕೆರೆ ಕಡೆಗೆ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಪಾರ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳು ಹೆಜ್ಜೆ ಹಾಕುತ್ತಿದ್ದಾರೆ.

ಈ ನಡುವೆ ಇಂದಿನ ಭಾರತ ಐಕ್ಯತಾ ಯಾತ್ರೆ ಮುಂದೂಡಲಾಗಿದೆ ಎಂಬ ವದಂತಿ ಹರಡಿತ್ತು. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯಾತ್ರೆಯಲ್ಲಿ ಯಾವುದೇ ಬದಲಾವಣೆ ಇಲ್ಲ.ಎಂದಿನಂತೆ ಪಾದಯಾತ್ರೆ ಮುಂದುವರೆಯಲಿದೆ.  ವದಂತಿಗಳಿಗೆ ಕಿವಿಗೂಡದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 

ನಿನ್ನೆ ಹಿರಿಯೂರಿನಲ್ಲಿ ಯಾತ್ರೆ ನಡೆಸಿದ ರಾಹುಲ್ ಗಾಂಧಿ, ಸಮಾಜದ ನಿರ್ಲಕ್ಷಿತ ಸಮುದಾಯಗಳಾದ ದಕ್ಕಲಿಗರು, ಸುಡುಗಾಡು ಸಿದ್ದರು, ದೊಂಬಿದಾಸರು, ಕೊರಮರು, ಹಂದಿ ಜೋಗಿ ಮುಂತಾದ ಸಮುದಾಯಗಳ ಪ್ರಮುಖರೊಂದಿಗೆ ಸಂವಾದ ನಡೆಸಿ, ಅವರ ದೈನಂದಿನ ಜೀವನದ ಸ್ಥಿತಿಗತಿಗಳು, ಕಷ್ಟ ನಷ್ಟಗಳ ಕುರಿತು ಸಮಾಲೋಚನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com