ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ: ಕರ್ನಾಟಕದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆ ಒಂದು ದಿನದ ವಿರಾಮದ ನಂತರ ಮಂಗಳವಾರ ಹಾಲಹರವಿ ಗ್ರಾಮದಲ್ಲಿ ಆಂಧ್ರಪ್ರದೇಶವನ್ನು ಪ್ರವೇಶಿಸಿತು.
ಆಂಧ್ರಪ್ರದೇಶದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ
ಆಂಧ್ರಪ್ರದೇಶದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆ ಒಂದು ದಿನದ ವಿರಾಮದ ನಂತರ ಮಂಗಳವಾರ ಹಾಲಹರವಿ ಗ್ರಾಮದಲ್ಲಿ ಆಂಧ್ರಪ್ರದೇಶವನ್ನು ಪ್ರವೇಶಿಸಿತು.

ಇದಕ್ಕೂ ಮುನ್ನ ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದಲ್ಲಿ ಕಾಂಗ್ರೆಸ್‌ನ ತಳಮಟ್ಟದ ಕಾರ್ಯಕರ್ತರು ಮತ್ತು ಕರ್ನಾಟಕದ ಯಾತ್ರಿ ಗುಂಪಿನೊಂದಿಗೆ ರಾಹುಲ್ ಸಂವಾದ ನಡೆಸಿದರು. ಮಂಗಳವಾರ ಹಾಲಹರವಿಯಿಂದ ಆರಂಭವಾದ ರಾಹುಲ್ ಪಾದಯಾತ್ರೆ ಚಾಗಿಯಲ್ಲಿ ಮುಕ್ತಾಯವಾಯಿತು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಸೆ.30ರಂದು ಚಾಮರಾಜನಗರದಿಂದ ಕರ್ನಾಟಕ ಪ್ರವೇಶಿಸಿದ್ದು, ಕಳೆದ 17 ದಿನಗಳಲ್ಲಿ ರಾಹುಲ್ ಮತ್ತು ತಂಡ ರಾಜ್ಯದಲ್ಲಿ 430 ಕಿ.ಮೀ. ಪಾದಯಾತ್ರೆ ನಡೆಸಿತು.

ಮಂಗಳವಾರ ರಾಹುಲ್ ಅವರೊಂದಿಗೆ ಸಂವಾದ ನಡೆಸಿದ ಕಾಂಗ್ರೆಸ್ ನಾಯಕರು, 2023 ರ ವಿಧಾನಸಭಾ ಚುನಾವಣೆಗೆ ಸಿದ್ಧರಾಗಿರಲು ರಾಹುಲ್ ಗಾಂಧಿ ಕೇಳಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ತಳಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವಲ್ಲಿ ಉತ್ಸುಕರಾಗಿದ್ದರು. ಭಾರತ್ ಜೋಡೋ ಯಾತ್ರೆಗೆ ವ್ಯವಸ್ಥೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಗೆ ಧನ್ಯವಾದ ಅರ್ಪಿಸಿದರು.  ರಾಹುಲ್ ಗಾಂಧಿ ಬಳ್ಳಾರಿಯಿಂದಲೇ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದರು.

ರಾಹುಲ್ ಯಾತ್ರೆ ರಾಜ್ಯದ ಜನತೆಯಲ್ಲಿ ಭರವಸೆ ಮೂಡಿಸಿದೆ.  ರಾಹುಲ್ ಡೌನ್ ಟು ಅರ್ಥ್ ವ್ಯಕ್ತಿ ಮತ್ತು ಪಾದಯಾತ್ರೆಯ ಸಮಯದಲ್ಲಿ ಸಾಮಾನ್ಯ ಜನರೊಂದಿಗೆ ಅವರ ಸಂವಹನವು ಅನೇಕರನ್ನು ಮೂಕ ವಿಸ್ಮಿತರನ್ನಾಗಿಸಿತು  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಪಕ್ಷವನ್ನು ತಳಮಟ್ಟದಲ್ಲಿ ಪುನಶ್ಚೇತನಗೊಳಿಸಲು ಭಾರತ್ ಜೋಡೋ ಯಾತ್ರೆ ಸಹಕಾರಿಯಾಗಲಿದೆ ಎಂದು ಬಳ್ಳಾರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್ ಹೇಳಿದ್ದಾರೆ.

ಅಕ್ರಮ ಭೂ ಕಬಳಿಕೆ ಹಗರಣದಲ್ಲಿ ಸಚಿವ ಬಿ.ಶ್ರೀರಾಮುಲು ಭಾಗಿಯಾಗಿದ್ದಾರೆ ಎಂದು ಬಳ್ಳಾರಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆರೋಪಿಸಿದರು. ಶ್ರೀರಾಮುಲು ಜಾಮೀನಿನ ಮೇಲೆ ಹೊರಗಿದ್ದು, ಕಾಂಗ್ರೆಸ್ ಮತ್ತು ಅದರ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಹಕ್ಕು ಅವರಿಗೆ ಇಲ್ಲ ಎಂದು ಉಗ್ರಪ್ಪ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com